Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Team Udayavani, Apr 23, 2024, 12:13 PM IST
ಬೆಂಗಳೂರು: ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣ ಮಾಸುವ ಮುನ್ನವೇ ನಗರದಲ್ಲಿ ಮತ್ತೂಂದು ಹೋಟೆಲ್‌ಗೆ ಬಾಂಬ್ ಬೆದರಿಕೆ ಹಾಕಲಾಗಿದೆ.
ಜಾಲಹಳ್ಳಿ ವೃತ್ತದ ಬಳಿ ಇರುವ ಕದಂಬ ಗಾರ್ಡೇನಿಯಾ ಹೋಟೆಲ್‌ನಲ್ಲಿ ಬಾಂಬ್ ಇಟ್ಟಿರುವುದಾಗಿ ಸೋಮವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಅನಾಮಧೇಯ ವ್ಯಕ್ತಿಯೊಬ್ಬ ಇಂಗ್ಲಿಷ್‌ನಲ್ಲಿ ಪತ್ರ ಬರೆದು, ಮಧ್ಯಾಹ್ನ ಬಾಂಬ್ ಸ್ಫೋಟಗೊಳ್ಳಲಿದೆ ಎಂದು ಜಾಲಹಳ್ಳಿ ಪೊಲೀಸ್ ಠಾಣೆಗೆ ಕಳುಹಿಸಿ ಬೆದರಿಕೆ ಹಾಕಿದ್ದಾನೆ. ಆ ಪತ್ರ ಕಂಡು ಹೆದರಿದಪೊಲೀಸರು ಕೂಡಲೇ ಹೋಟೆಲ್‌ಗೆ ತೆರಳಿದ್ದಾರೆ.
ಬಳಿಕ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳದ ಜತೆ ಸ್ಥಳಕ್ಕೆ ಕರೆಸಿಕೊಂಡು ಹೋಟೆಲ್ ಸಿಬ್ಬಂದಿ, ಗ್ರಾಹಕರನ್ನು ಹೋಟೆಲ್‌ನಿಂದ ಹೊರಗಡೆ ಕಳುಹಿಸಿ ಎಲ್ಲೆಡೆ ತಪಾಸಣೆ ನಡೆಸಿದ್ದಾರೆ. ಕೆಲ ಕಾಲ ಹೋಟೆಲ್‌ಗೆ ಬಿಗಿ ಭದ್ರತೆ ಒದಗಿಸಲಾ ಗಿತ್ತು. ಆದರೆ, ಎಲ್ಲಿಯೂ ಬಾಂಬ್ ಅಥವಾ ಸ್ಫೋಟಕ ವಸ್ತುಗಳು ಪತ್ತೆಯಾ ಗಿಲ್ಲ. ಹೀಗಾಗಿ ಇದೊಂದು ಹುಸಿ ಬಾಂಬ್ ಪತ್ರ ಎಂಬುದು ಪತ್ತೆಯಾಗಿದೆ.
ಮತ್ತೂಂದೆಡೆ ಅಪರಿಚಿತ ವ್ಯಕ್ತಿ ಬರೆದ ಪತ್ರದಲ್ಲಿ, ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಿಸಲು ಸಹಕಾರ ನೀಡಿದ್ದು ನಾನೇ. ಈಗ ನಿಮ್ಮ ಹೋಟೆಲ್‌ಗೂ ಬಾಂಬ್ ಇಟ್ಟಿದ್ದೇನೆ. ಮಧ್ಯಾಹ್ನ ಬಾಂಬ್ ಸ್ಫೋಟಗೊಳ್ಳಲಿದೆ ಎಂದು ಬರೆದಿದ್ದಾನೆ. ಅಲ್ಲದೆ, ಪೊಲೀಸರಿಗೂ ನಿಂದಿಸಿದ್ದಾನೆ ಎಂದು ಹೇಳಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಅಪರಿಚಿತ ವ್ಯಕ್ತಿ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.