ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Team Udayavani, Apr 23, 2024, 3:23 PM IST
ಬೆಳಗಾವಿ: ಚುನಾವಣೆಗೆ ಹೋಗಲು ಯಾವುದೇ ವಿಷಯವಿಲ್ಲದೆ ಹತಾಶರಾಗಿರುವ ಭಾರತೀಯ ಜನತಾಪಾರ್ಟಿಯವರು ನೇಹಾ ಹಿರೇಮಠ ಸಾವಿನ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕಿಳಿದಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗಾವಿಯಲ್ಲಿ ಮಂಗಳವಾರ ನೇಹಾ ಹಿರೇಮಠ ಆತ್ಮಕ್ಕೆ ಶಾಂತಿ ಸಿಗಲಿ, ಅಪರಾಧಿಗೆ ಕಠಿಣ ಶಿಕ್ಷೆಯಾಗಲಿ ಎಂದು ಆಗ್ರಹಿಸಿ ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಳ್ಳಲಾಗಿದ್ದ ರ್‍ಯಾಲಿಯ ಸಂದರ್ಭದಲ್ಲಿ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು.
ನೇಹಾ ಹಿರೇಮಠ ಆತ್ಮಕ್ಕೆ ಶಾಂತಿ ಸಿಗಲಿ, ನ್ಯಾಯ ಸಿಗಲಿ ಎಂದು ಈ ರ್‍ಯಾಲಿಯ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡುತ್ತಿದ್ದೇವೆ. ಇಂತಹ ನೀಚ ಕೃತ್ಯವನ್ನು ವಿಕೃತ ಮನುಷ್ಯನಷ್ಟೇ ಮಾಡಬಹುದು. ಕಾನೂನು ಪ್ರಕಾರ ಅಪರಾಧಿಗೆ ಕಠಿಣ ಶಿಕ್ಷೆ ಕೊಡಬೇಕು ಎಂದು ಅವರು ಆಗ್ರಹಿಸಿದರು.
ಸರಕಾರ ಈಗಾಗಲೇ ಮಹಿಳೆಯರಿಗೆ ಆಗುವ ಅನ್ಯಾಯ ಪ್ರಕರಣಗಳನ್ನು ಶೀಘ್ರ ವಿಲೇವಾರಿ ಮಾಡಲೆಂದು ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಲು ನಿರ್ಧರಿಸಿದೆ. ತನ್ಮೂಲಕ ಮಹಿಳೆಯರ ಜೊತೆಗಿದ್ದೇವೆ ಎನ್ನುವುದನ್ನು ತೋರಿಸಿದ್ದೇವೆ. ಈ ವಿಷಯವನ್ನು ರಾಜಕೀಯ ಮಾಡಬೇಡಿ ಎಂದು ಈಗಾಗಲೆ ನೇಹಾ ತಂದೆ ನಿರಂಜನ ಹಿರೇಮಠ ಅವರು ಮನವಿ ಮಾಡಿದ್ದಾರೆ. ಎಲ್ಲ ಪಕ್ಷದವರೂ ತಮ್ಮ ಮನೆಗೆ ಬಂದು ಸಾಂತ್ವನ ಹೇಳಿದ್ದಾರೆ, ನ್ಯಾಯ ಕೊಡಿಸುವ ಭರವಸೆ ಸಿಕ್ಕಿದೆ ಎಂದು ಅವರು ಹೇಳಿದ್ದಾರೆ. ಇಷ್ಟಾದರೂ ಬಿಜೆಪಿಯವರು ಪ್ರಕರಣವನ್ನು ರಾಜಕೀಯಕ್ಕೆ ಬಳಸುತ್ತಿರುವುದನ್ನು ನಾವು ಖಂಡಿಸುತ್ತೇವೆ ಎಂದು ಚನ್ನರಾಜ ತಿಳಿಸಿದರು.
ಸಾವಿನ ಮನೆಯಲ್ಲಿ ರಾಜಕೀಯ ಮಾಡುವ ಬಿಜೆಪಿಯ ಹಿಡನ್ ಅಜೆಂಡಾ ಯಶಸ್ವಿಯಾಗುವುದಿಲ್ಲ. ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಕುಟುಂಬಕ್ಕೆ ನ್ಯಾಯ ಸಿಗಬೇಕು. ಮುಂದೆ ಯಾರೂ ಇಂತಹ ಕೃತ್ಯಕ್ಕೆ ಇಳಿಯಬಾರದು ಎನ್ನುವುದು ನಮ್ಮ ಕಳಕಳಿ ಎಂದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಕೇವಲ ಬೇಜವಾಬ್ದಾರಿಯುತ ಭಾಷಣ ಮಾಡುವುದನ್ನು ಬಿಟ್ಟು, ದೇಶದಲ್ಲಿ ಮಹಿಳೆಯರ ರಕ್ಷಣೆಗೆ ಕಠಿಣ ಕಾನೂನು ತರಲಿ. ರಾಜ್ಯ ಸರಕಾರ ಕೈಗೊಂಡಂತೆ ವಿಶೇಷ ನ್ಯಾಯಾಲಯ ಸ್ಥಾಪನೆಯಂತಹ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿ ಎಂದು ಒತ್ತಾಯಿಸಿದರು.
ಇಂತಹ ಕೃತ್ಯ ಯಾವ ಹೆಣ್ಣು ಮಗಳಿಗೂ ಆಗಬಾರದು. ಅಂತಹ ಶಿಕ್ಷೆ ಅಪರಾಧಿಗೆ ಆಗಬೇಕು. ಹಾಗಾಗಿ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಲಾಗಿದೆ. ಆದರೆ ಬಿಜೆಪಿಯವರನ್ನು ನೋಡಿದರೆ ಪಾಪ ಎನಿಸುತ್ತಿದೆ. ಚುನಾವಣೆಗೆ ಹೋಗಲು ಅವರ ಬಳಿ ವಿಷಯವಿಲ್ಲ. ಬರಗಾಲಕ್ಕೆ ಕೇಂದ್ರ ಪರಿಹಾರ ಕೊಡಲಿಲ್ಲ ಎಂದು ಜನರು ಅವರು ಹೋದಲ್ಲೆಲ್ಲ ಕೇಳುತ್ತಿದ್ದಾರೆ. ಹಾಗಾಗಿ ದಿಕ್ಕು ತೋಚದೆ ಹತಾಶ ಮನೋಭಾವದಿಂದ ಸಾವಿನ ಮನೆಯಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಚನ್ನರಾಜ ಹಟ್ಟಿಹೊಳಿ ಹೇಳಿದರು.
ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಭವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರ್‍ಯಾಲಿ ನಡೆಸಿ, ಮನವಿ ಸಲ್ಲಿಸಿದರು.
ಶಾಸಕರಾದ ರಾಜು ಸೇಠ್, ಬಾಬಾಸಾಹೇಬ ಪಾಟೀಲ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ನ್ಯಾಯವಾದಿ ಆರ್.ಪಿ.ಪಾಟೀಲ, ಜಯಶ್ರೀ ಮಾಳಗಿ, ಆಯೇಷಾ ಸನದಿ ಸೇರಿದಂತೆ ಹಲವಾರು ಮುಖಂಡರು, ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು, ಮಹಿಳೆಯರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.