Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
Team Udayavani, Apr 23, 2024, 7:20 PM IST
ನಟ ಪ್ರೇಮ್ ಅವರ ಹೊಸ ಚಿತ್ರವೊಂದು ಇತ್ತೀಚೆಗೆ ಆರಂಭವಾಗಿದೆ. ತೇಜೇಶ್ ಈ ಚಿತ್ರದ ನಿರ್ದೇಶಕರು. ಪಕ್ಕಾ ಆ್ಯಕ್ಷನ್ ಸಿನಿಮಾ ಇದಾಗಿದ್ದು, ಚಿತ್ರದಲ್ಲಿ ಪ್ರೇಮ್ ಪೊಲೀಸ್ ಆಫೀಸರ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಚಿತ್ರದ ಬಗ್ಗೆ ಮಾತನಾಡುವ ಪ್ರೇಮ್, “ಆ್ಯಕ್ಷನ್ ಸಿನಿಮಾ ಮಾಡದೇ ಬಹಳಷ್ಟು ಗ್ಯಾಪ್ ಆಗಿತ್ತು. ಒಂದೊಳ್ಳೆ ಕಥೆಯೊಂದಿಗೆ ನಿರ್ದೇಶಕರು ಬಂದರು. ಹೀಗಾಗಿ ಈ ಚಿತ್ರ ಒಪ್ಪಿಕೊಂಡೆ. ಸಿನಿಮಾದಲ್ಲಿ ಖಡಕ್ ಪೊಲೀಸ್ ಅಧಿಕಾರಿ ಪಾತ್ರ ನಿರ್ವಹಿಸುತ್ತಿದ್ದೇನೆ’ ಎಂದರು.
ನಿರ್ದೇಶಕ ತೇಜೇಶ್ ಮಾತನಾಡಿ, “ಇದು ನನ್ನ ಮೊದಲ ಸಿನಿಮಾ. ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ ಇದಾಗಿದೆ. ಟೈಟಲ್ ಚರ್ಚೆಯಲ್ಲಿದೆ. ಕಥೆಗೆ ಪ್ರೇಮ್ ಅವರು ಹೊಂದಿಕೆ ಆಗಿರುವುದರಿಂದ ಅವರನ್ನು ಆಯ್ಕೆ ಮಾಡಿದ್ದೇವೆ. ರಂಗಾಯಣ ರಘು ಅವರು ಚಿತ್ರದ ಭಾಗವಾಗಿದ್ದಾರೆ. ಈ ತಿಂಗಳಾತ್ಯಂಕ್ಕೆ ಶೂಟಿಂಗ್‌ಗೆ ಹೊರಡಲಿದ್ದೇವೆ’ ಎಂದು ಮಾಹಿತಿ ನೀಡಿದರು.
ಚಿತ್ರದ ಪೋಸ್ಟರ್‌ನಲ್ಲಿ ರಗಡ್ ಲುಕ್‌ನಲ್ಲಿ ಪ್ರೇಮ್ ಕಾಣಿಸಿಕೊಂಡಿದ್ದಾರೆ. ಕೈಯಲ್ಲಿ ಸಿಂಗಲ್ ಬ್ಯಾರಲ್ ಗನ್ ಹಿಡಿದುಕೊಂಡು ದೊಂಬಿ ಮಾಡೋರ ಕಡೆಗೆ ಮುಖ ಮಾಡಿ ನಿಂತಿದ್ದಾರೆ. ಯುವ ಪ್ರತಿಭೆ ತೇಜಸ್ ಬಿ.ಕೆ ಕಥೆ ಚಿತ್ರಕಥೆ ಬರೆದು ಸಿನಿಮಾ ಆಕ್ಷನ್ ಕಟ್ ಹೇಳುತ್ತಿದ್ದಾರೆ. ವಾಸುಕಿ ವೈಭವ್ ಸಂಗೀತ, ಆನಂದ್ ಮೀನಾಕ್ಷಿ ಛಾಯಾಗ್ರಹಣ ಚಿತ್ರಕ್ಕಿದೆ. ಹೆಸರಿಡದ ಈ ಸಿನಿಮಾಗೆ ಮಧು ಗೌಡ ಬಂಡವಾಳ ಹೂಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್: ಯೂಟ್ಯೂಬ್!
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.