Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
ಈ ವರೆಗಿನ ಅಭ್ಯರ್ಥಿಗಳಲ್ಲಿ ಅತ್ಯಂತ ಶ್ರೀಮಂತ ವ್ಯಕ್ತಿ ಡಾ| ಚಂದ್ರಶೇಖರ್
Team Udayavani, Apr 24, 2024, 7:20 AM IST
ಅಮರಾವತಿ: ಈ ಬಾರಿಯ ಲೋಕಸಭಾ ಚುನಾವಣೆಗೆ ಈವರೆಗೆ ನಾಮಪತ್ರ ಸಲ್ಲಿಸಿರುವವರ ಪೈಕಿ ಆಂಧ್ರ ಪ್ರದೇಶದ ಗುಂಟೂರು ಲೋಕ ಸಭಾ ಕ್ಷೇತ್ರದ ಟಿಡಿಪಿ ಅಭ್ಯರ್ಥಿ ಡಾ| ಪೆಮ್ಮಸಾನಿ ಚಂದ್ರಶೇಖರ್ ಅತ್ಯಂತ ಶ್ರೀಮಂತರು. ಅನಿವಾಸಿ ಭಾರತೀಯ ರಾಗಿದ್ದ (ಎನ್ಆರ್ಐ) ಇವರ ಒಟ್ಟು ಆಸ್ತಿ ಮೌಲ್ಯ 5,785 ಕೋಟಿ ರೂ.!
ಹಲವಾರು ಉದ್ಯಮಗಳಲ್ಲಿ ತೊಡಗಿಸಿ ಕೊಂಡಿ ರುವ ಚಂದ್ರಶೇಖರ್ 2,316 ಕೋಟಿ ರೂ. ಮೌಲ್ಯದ ಚರಾಸ್ತಿಯನ್ನು ಹೊಂದಿದ್ದು, ಅವರ ಪತ್ನಿ ಕೊನೇರು ಶ್ರೀರತ್ನ ಅವರ ಹೆಸರಿನಲ್ಲಿ 2,289 ಕೋಟಿ ರೂ. ಮೌಲ್ಯದ ಚರಾಸ್ತಿ ಇದೆ. ಜತೆಗೆ 72 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಯನ್ನು ಚಂದ್ರಶೇಖರ್ ಹೊಂದಿದ್ದು, ಅವರ ಪತ್ನಿ ಬಳಿ 34 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಇದೆ. ಇದಲ್ಲದೆ ವಿಶ್ವಾದ್ಯಂತ 101 ಕಂಪೆನಿಗಳಲ್ಲಿ ಈ ದಂಪತಿ ಜಂಟಿ ಷೇರುಗಳನ್ನು ಹೊಂದಿದ್ದಾರೆ.
ಬಿಜೆಪಿ ಅಭ್ಯರ್ಥಿ ಕೊಂಡ
ವಿಶ್ವೇಶ್ವರ ರೆಡ್ಡಿ 2ನೇ ಶ್ರೀಮಂತ
ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿರುವ 2ನೇ ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿ ಬಿಜೆಪಿ ನಾಯಕ ಕೊಂಡ ವಿಶ್ವೇಶ್ವರ ರೆಡ್ಡಿ ಗುರುತಿಸಿಕೊಂಡಿದ್ದಾರೆ. ತೆಲಂಗಾಣದ ಚೆವೆಲ್ಲಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಇವರು ಮಾಜಿ ಸಂಸದರೂ ಆಗಿದ್ದು, ಅಫಿದವಿತ್ನಲ್ಲಿ ತಮ್ಮ ಕುಟುಂಬದ ಒಟ್ಟು ಆಸ್ತಿ ಮೌಲ್ಯವನ್ನು 4,568 ಕೋಟಿ ರೂ.ಗಳೆಂದು ಘೋಷಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
MUST WATCH
ಹೊಸ ಸೇರ್ಪಡೆ
BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್, ರಾಹುಲ್ ಬಳಿಕ ಮತ್ತೊಬ್ಬ ಬ್ಯಾಟರ್ ಗೆ ಗಾಯ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.