Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

1,876 ಮತಗಟ್ಟೆಗಳು ; 18,18,127 ಮತದಾರರು ; 72 ಮಾದರಿ ಮತಗಟ್ಟೆಗಳು

Team Udayavani, Apr 24, 2024, 6:55 AM IST

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಮಂಗಳೂರು: ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದಲ್ಲಿ ಎ. 26ರಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆಯ ವರೆಗೆ ಲೋಕಸಭಾ ಚುನಾವಣೆ ನಡೆಯಲಿದ್ದು, ಜಿಲ್ಲಾಡಳಿತದಿಂದ ಸಂಪೂರ್ಣ ಸಿದ್ಧತೆ ಮಾಡಿಕೊಳ್ಳಲಾಗಿದೆ.

8,87,122 ಪುರುಷ ಮತ್ತು 9,30,928 ಮಹಿಳಾ ಮತದಾರರು ಸೇರಿ 18,18,127 ಮಂದಿ ಅರ್ಹ ಮತದಾರರು ಜಿಲ್ಲೆಯ 1876 ಮತಗಟ್ಟೆಗಳಲ್ಲಿ ಮತ ಚಲಾಯಿ ಸಲಿದ್ದಾರೆ ಎಂದು ದ.ಕ. ಜಿಲ್ಲಾ ಚುನಾವ ಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 1,876 ಮತಗಟ್ಟೆಗಳ ಪೈಕಿ ಮಂಗಳೂರು ಕಮಿಷನರೆಟ್‌ ವ್ಯಾಪ್ತಿಯಲ್ಲಿ 72 ಮತ್ತು ಜಿಲ್ಲಾ ಪೊಲೀಸ್‌ ವ್ಯಾಪ್ತಿಯಲ್ಲಿ 105 ಸೂಕ್ಷ್ಮ ಮತಗಟ್ಟೆಗಳಿವೆ. ಚುನಾವಣೆ ಸಾಂಗವಾಗಿ ನೆರವೇರುವ ಉದ್ದೇಶದಿಂದ ಒಟ್ಟು 11,255 ಸಿಬಂದಿಯನ್ನು ನಿಯೋಜಿಸಲಾಗಿದೆ. ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸುವ ಸಿಬಂದಿಯ ಪೈಕಿ ಶೇ. 70ರಷ್ಟು ಮಹಿಳೆಯರಿದ್ದಾರೆ. ಅವರನ್ನು ಸ್ವ ಕ್ಷೇತ್ರದ ಮತಗಟ್ಟೆಯಲ್ಲೇ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಒಂದು ಮತಗಟ್ಟೆಯಲ್ಲಿ ಕನಿಷ್ಠ ಇಬ್ಬರು ಮಹಿಳಾ ಸಿಬಂದಿ ಕರ್ತವ್ಯ ನಿರ್ವಹಿಸುತ್ತಾರೆ ಎಂದು ವಿವರಿಸಿದರು.

ಹೊರಗಿನವರು ಇರಬಾರದು
ಎ. 24ರಂದು ಸಂಜೆ 6 ಗಂಟೆಗೆ ಮುನ್ನ ಎಲ್ಲ ರಾಜಕೀಯ ಪಕ್ಷಗಳು ಬಹಿರಂಗ ಪ್ರಚಾರ ಅಂತ್ಯಗೊಳಿಸಬೇಕು. ಅನಂತರ ಕ್ಷೇತ್ರದ ಮತದಾರರಲ್ಲದ ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಕ್ಷೇತ್ರದಲ್ಲಿ ಇರುವಂತಿಲ್ಲ. ಮತದಾನದ ದಿನದಂದು ಮತದಾನ ಮಾಡಲು ಅನುಕೂಲವಾಗುಂತೆ ಸರಕಾರಿ ಮತ್ತು ಖಾಸಗಿ ವಲಯದಲ್ಲಿ ಕಾರ್ಯನಿರ್ವ ಹಿಸುತ್ತಿರುವ ನೌಕರರಿಗೆ ವೇತನ ಸಹಿತ ಕಡ್ಡಾಯ ರಜೆ ನೀಡಬೇಕು ಎಂದರು.
ಕರ್ತವ್ಯ ನಿರತ 1,052 ಸರಕಾರಿ ನೌಕರರು ಮತ ಚಲಾಯಿಸಿದ್ದಾರೆ. 85 ವರ್ಷ ಮೇಲ್ಪಟ್ಟ 5,878 ಮತ್ತು 1,929 ಮಂದಿ ಅಂಗವಿಕಲ ಮತದಾರರು ಮತ್ತು ಅಗತ್ಯ ಸೇವೆ ಎಂದು ಗುರುತಿಸಲಾದ ಇಲಾಖಾ ಅಧಿಕಾರಿಗಳ ಪೈಕಿ 100 ಮಂದಿ ಈಗಾಗಲೇ ಮತ ಚಲಾವಣೆ ಮಾಡಿದ್ದಾರೆ ಎಂದರು.

17,72,641 ಮಂದಿ ಮತದಾರರಿಗೆ ಓಟರ್ ಸ್ಲಿಪ್‌ ಹಂಚಿಕೆ ಮಾಡಲಾಗಿದೆ. ಮಂಗಳೂರು ನಗರ ದಕ್ಷಿಣ ಮತ್ತು ಉತ್ತರ ಕ್ಷೇತ್ರದ ಮತದಾರರಿಗೆ ಇದೇ ಮೊದಲ ಬಾರಿಗೆ ಓಟರ್‌ ಸ್ಲಿಪ್‌ನಲ್ಲಿ ಕ್ಯುಆರ್‌ ಕೋಡ್‌ ವ್ಯವಸ್ಥೆ ಮಾಡಲಾಗಿದ್ದು,
ಸ್ಕ್ಯಾನ್ ಮಾಡುವ ಮೂಲಕ ಮತದಾನ ಕೇಂದ್ರದ ಮಾಹಿತಿ ಪಡೆಯಬಹುದಾಗಿದೆ ಎಂದರು.

ಮಾದರಿ ಮತಗಟ್ಟೆಗಳು
ಜಿಲ್ಲೆಯಲ್ಲಿ ಒಟ್ಟು 72 ಮತಗಟ್ಟೆ ಗಳನ್ನು ಮಾದರಿ ಮತಗಟ್ಟೆಗಳು ಎಂದು ಗುರುತಿಸಲಾಗಿದೆ. ಇದರಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 5ರಂತೆ ಸಖೀ ಬೂತ್‌, ಅಂಗವಿಕಲ, ಯುವ ಮತದಾರರ, ಧ್ಯೇಯ ಆಧಾರಿತ ಮತ್ತು ಸಾಂಪ್ರದಾಯಿಕ ತಲಾ 1 ಬೂತ್‌ ಇರಲಿದೆ. ಸಖೀ ಮತಗಟ್ಟೆಯಲ್ಲಿ ಸಂಪೂರ್ಣ ಮಹಿಳಾ ಸಿಬಂದಿಯೇ ಇರುವರು. 938 ಮತಗಟ್ಟೆಗಳಲ್ಲಿ ವೆಬ್‌ ಕಾಸ್ಟಿಂಗ್‌ ನಡೆಯಲಿದೆ ಎಂದರು.

ಮತಯಂತ್ರ- ವಿವಿಪ್ಯಾಟ್‌
ಚುನಾವಣ ಕಾರ್ಯಕ್ಕೆ ಉಪಯೋಗಿ ಸುವ ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿಪ್ಯಾಟ್‌ಗಳನ್ನು ಸಿದ್ಧಪಡಿಸಲಾಗಿದೆ. ಒಟ್ಟು 2,334 ಬ್ಯಾಲೆಟ್‌ ಯುನಿಟ್‌ ಹೆಚ್ಚುವರಿಯಾಗಿ 458 ಮೀಸಲು ಇಟ್ಟು ಕೊಳ್ಳಲಾಗಿದೆ. 2,359 ಕಂಟ್ರೋಲ್‌ ಯುನಿಟ್‌ 483 ಹೆಚ್ಚುವರಿ, 2,484 ವಿವಿ ಪ್ಯಾಟ್‌ ಮತ್ತು 608 ಹೆಚ್ಚುವರಿ ಯಾಗಿ ಇಟ್ಟುಕೊಳ್ಳಲಾಗಿದೆ. ಹೆಚ್ಚುವರಿ ಯಂತ್ರಗಳು ಜಿಪಿಎಸ್‌ ಹೊಂದಿರುವ ವಾಹನಗಳಲ್ಲಿ ಸಿಎಪಿಎಫ್‌ ಸಿಬಂದಿ ಯೊಂದಿಗೆ ಸೆಕ್ಟರ್‌ ಅಧಿಕಾರಿಯ ಸುಪರ್ದಿಯಲ್ಲಿರಲಿದೆ ಎಂದು ವಿವರಿಸಿದರು.

ಮಸ್ಟರಿಂಗ್‌- ಡಿ ಮಸ್ಟರಿಂಗ್‌
ಬೆಳ್ತಂಗಡಿ-ಎಸ್‌ಡಿಎಂ ಪಪೂ ಕಾಲೇಜು ಉಜಿರೆ, ಮೂಡುಬಿದಿರೆ- ಮಹಾವೀರ ಪ್ರ.ದ. ಕಾಲೇಜು ಮೂಡುಬಿದಿರೆ, ಮಂಗಳೂರು ನಗರ ಉತ್ತರ- ಸಂತ ಅಲೋಶಿಯಸ್‌ ಪಪೂ ಕಾಲೇಜು ಕೊಡಿಯಾಲಬೈಲು, ಮಂಗಳೂರು ನಗರ ದಕ್ಷಿಣ – ಕೆನರಾ ಹೈಸ್ಕೂಲ್‌ ಉರ್ವ, ಲಾಲ್‌ಬಾಗ್‌, ಮಂಗಳೂರು-ಮಂಗಳೂರು ವಿವಿ ಹ್ಯಮಾನಿಟೀಸ್‌ ವಿಭಾಗ ಕೊಣಾಜೆ, ಬಂಟ್ವಾಳ- ಇನೆ#ಂಟ್‌ ಜೀಸಸ್‌ ಆಂಗ್ಲ- ಕನ್ನಡ ಮಾಧ್ಯಮ ಶಾಲೆ ಮೊಡಂಕಾಪು, ಪುತ್ತೂರು- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ, ಸುಳ್ಯ-ನೆಹರೂ ಮೆಮೋರಿಯಲ್‌ ಕಾಲೇಜು ಸುಳ್ಯ.

ಭದ್ರತಾ ಕೊಠಡಿ, ಮತ ಎಣಿಕೆ ಕೇಂದ್ರ
ವಿಧಾನ ಸಭಾ ಕ್ಷೇತ್ರದಲ್ಲಿ ಡಿ-ಮಸ್ಟರಿಂಗ್‌ ಕಾರ್ಯ ಮುಕ್ತಾಯ ವಾದ ಬಳಿಕ ಕೇಂದ್ರಗಳಿಂದ ಇವಿಎಂ, ವಿವಿಪ್ಯಾಟ್‌ ಮತ್ತು ದಾಖಲೆಗಳನ್ನು ಮತ ಎಣಿಕೆ ಕೇಂದ್ರವಾದ ಎನ್‌ಐಟಿಕೆ ಸುರತ್ಕಲ್‌ನಲ್ಲಿರುವ ಭದ್ರತಾ ಕೊಠಡಿಯಲ್ಲಿ ಇರಿಸಲಾಗುತ್ತದೆ.

ಜಿ.ಪಂ. ಸಿಇಒ ಡಾ| ಆನಂದ್‌, ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್‌ವಾಲ್‌, ದ.ಕ. ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್‌ ಹಾಗೂ ಅಪರ ಜಿಲ್ಲಾಧಿಕಾರಿ ಡಾ| ಸಂತೋಷ್‌ ಕುಮಾರ್‌ ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ: ಎ. 24ರಿಂದ ಪ್ರತಿಬಂಧಕಾಜ್ಞೆ ಜಾರಿ
ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಮುಕ್ತ ಮತ್ತು ನ್ಯಾಯೋಚಿತ ಮತದಾನಕ್ಕೆ ಅವಕಾಶ ಕಲ್ಪಿಸುವ ಹಿನ್ನೆಲೆಯಲ್ಲಿ ಎ. 24ರಂದು ಸಂಜೆ 6ಗಂಟೆಯಿಂದ ಎ. 26ರಂದು ರಾತ್ರಿ 10 ಗಂಟೆಯ ವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.

ಜಿಲ್ಲೆಯಾದ್ಯಂತ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು ಮೆರವಣಿಗೆ ಅಥವಾ ಸಭೆ, ಸಮಾರಂಭ ಆಯೋಜಿಸುವುದನ್ನು ನಿಷೇ ಧಿಸಿದೆ. ಚುನಾವಣ ಅಭ್ಯರ್ಥಿ/ ಬೆಂಬಲಿಗರು ಸೇರಿ 5ಕ್ಕಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ. ಯಾವುದೇ ಮಾರಕಾಸ್ತ್ರ ತೆಗೆದುಕೊಂಡು ಹೋಗುವುದನ್ನು ನಿರ್ಬಂಧಿ ಸಲಾಗಿದೆ. ಮತದಾನದ ದಿನದಂದು ಮತಗಟ್ಟೆಗಳ 200 ಮೀ. ಒಳಗೆ ಚುನಾವಣೆ ಪ್ರಚಾರ ನಿಷೇಧಿಸಿದೆ.

ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇ ಧಿಸಲಾಗಿದೆ. ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಕೋವಿಡ್‌ -19ರ ಕಾರ್ಯಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳಲ್ಲಿ ಚುನಾವಣ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನಿಯಮಗಳನ್ನು ಪಾಲಿಸಬೇಕು.

ಕಲ್ಯಾಣ ಮಂಟಪಗಳು, ಸಮುದಾಯ ಭವನಗಳು, ಹೊಟೇಲ್‌ಗ‌ಳು ಮತ್ತು ಅತಿಥಿ ಗೃಹಗಳಲ್ಲಿ ವಾಸ್ತವ್ಯ ಮಾಡಿರುವವರ ಪಟ್ಟಿಗಳ ಪರಿಶೀಲನೆ ಮಾಡಿ ಕ್ಷೇತ್ರದ ಮತದಾರರಲ್ಲದ ರಾಜಕೀಯ ಪಕ್ಷಗಳ ವ್ಯಕ್ತಿಗಳನ್ನು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಕಳುಹಿಸಲು ಕ್ರಮ ವಹಿಸಲಾಗುತ್ತದೆ ಎಂದು ಜಿಲ್ಲಾ ದಂಡಾ ಕಾರಿಗಳೂ ಹಾಗೂ ಜಿಲ್ಲಾಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

3(1)

Mangaluru: ಪ್ಲಾಸ್ಟಿಕ್‌ ಬ್ರಹ್ಮರಾಕ್ಷಸನ ತಡೆವ ಮಂತ್ರದಂಡ ಬೇಕಿದೆ !

11

Kulai: ಬೃಹತ್‌ ಟ್ರಕ್‌ ಓಡಾಟದಿಂದ ರಸ್ತೆಗೆ ಹಾನಿ

10

Lalbagh: ಪಾಲಿಕೆ ಚುನಾವಣೆ ಸನ್ನಿಹಿತ; ಮೀಸಲಾತಿಯದೇ ಆತಂಕ!

7–ullala

Ullala: ಇನ್ಸ್‌ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆ ಮುಖಂಡನಿಗೆ ಮುಸ್ಲಿಂ ಯುವಕ ಹಲ್ಲೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.