Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Team Udayavani, Apr 24, 2024, 10:10 AM IST
ಹೊಸದಿಲ್ಲಿ: ಗ್ರೇಟರ್ ನೋಯ್ಡಾದ ಅತಿದೊಡ್ಡ ಸ್ಕ್ರ್ಯಾಪ್ ಮಾಫಿಯಾದ ಕುಖ್ಯಾತ ದರೋಡೆಕೋರ, ಸ್ಟೀಲ್ ಸ್ಮಗ್ಲರ್ ರವಿ ಕಾನಾ ಮತ್ತು ಆತನ ಪ್ರೇಯಸಿ ಕಾಜಲ್ ಝಾ ಅವರನ್ನು ಥಾಯ್ಲೆಂಡ್‌ನಲ್ಲಿ ಬಂಧಿಸಲಾಗಿದೆ.
ಬಹಳ ದಿನಗಳಿಂದ ತಲೆಮರೆಸಿಕೊಂಡಿದ್ದ ರವಿಕಾನಾ ಮತ್ತು ಕಾಜಲ್ ಝಾ ರನ್ನು ಭಾರತಕ್ಕೆ ಕರೆತರಲು ನೋಯ್ಡಾ ಪೊಲೀಸರು ಔಪಚಾರಿಕ ಕೆಲಸಗಳನ್ನು ನಡೆಸುತ್ತಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ತಲೆಮರೆಸಿಕೊಂಡಿರುವ ಇಬ್ಬರ ವಿರುದ್ಧ ನೋಯ್ಡಾ ಪೊಲೀಸರು ಲುಕ್‌ಔಟ್ ಮತ್ತು ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಿದ್ದರು. ಥಾಯ್ಲೆಂಡ್‌ಗೆ ಪರಾರಿಯಾಗಿದ್ದಾರೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ದರೋಡೆಕೋರ ರವಿ ಕಾನಾ ವಿರುದ್ಧ ದರೋಡೆಕೋರ ಕಾಯ್ದೆಯಡಿ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಾಗಿದೆ.
2024 ಜನವರಿ 1 ರಂದು ರವಿ ಕಾನಾ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಪ್ರಕರಣವನ್ನು ದಾಖಲಿಸಿದ ನಂತರ ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದರು. ಆತನ ಅಡಗುತಾಣಗಳ ಮೇಲೆ ಪೊಲೀಸರು ದಾಳಿ ನಡೆಸಿ ಶೋಧ ನಡೆಸಿದ್ದರು. ಪೊಲೀಸರು ಪ್ರೇಯಸಿ ಕಾಜಲ್ ಝಾ ವಿರುದ್ಧವೂ ಪ್ರಕರಣ ದಾಖಲಿಸಿದ್ದರು. ಈಗಾಗಲೇ ಬಂಧನಕ್ಕೊಳಗಾಗಿದ್ದ ರವಿ ಕಾನ ಪತ್ನಿ ಸೇರಿದಂತೆ 14 ಮಂದಿ ವಿರುದ್ಧವೂ ಪ್ರಕರಣ ದಾಖಲಾಗಿತ್ತು.
ಪೊಲೀಸರು ರವಿ ಕಾನಾನನ್ನು ಅಕ್ರಮ ಚಟುವಟಿಕೆಗಳ ಕಿಂಗ್‌ಪಿನ್ ಎಂದು ಗೊತ್ತುಪಡಿಸಿದ್ದರು, ಪ್ರೇಯಸಿ ಕೂಡ ಅವನ ಅಪರಾಧ ಕೃತ್ಯಗಳಲ್ಲಿ ಸಮಾನ ಪಾಲುದಾರಳು ಎಂದು ಪರಿಗಣಿಸಲಾಗಿದೆ ಎಂದು ನ್ಯಾಯಾಲಯಕ್ಕೆ ಸಲ್ಲಿಸಿದ 500 ಪುಟಗಳ ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ.
11 ನೇ ಪ್ರಕರಣ
ಮಹಿಳೆಯೊಬ್ಬರು ಹನ್ನೊಂದನೇ ಪ್ರಕರಣ ದಾಖಲಿಸುವ ಮುನ್ನ ರವಿ ಕಾನಾ ವಿರುದ್ಧ 10 ಪ್ರಕರಣಗಳು ದಾಖಲಾಗಿದ್ದವು. ಇದು ನೋಯ್ಡಾದ ಸೆಕ್ಟರ್ 39 ಪೊಲೀಸ್ ಠಾಣೆಯಲ್ಲಿ ದರೋಡೆಕೋರನ ವಿರುದ್ಧ 2023 ಡಿಸೆಂಬರ್ 30 ರಂದು ದಾಖಲಾದ ಅತ್ಯಾಚಾರ ಪ್ರಕರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.