Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Team Udayavani, Apr 24, 2024, 11:25 AM IST

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

ಜಗಳೂರು: ಜಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಹೇಳಿಕೊಳ್ಳುವಂತಹ ಅಭಿವೃದ್ಧಿ ಕಾರ್ಯ ಆಗಿಲ್ಲ. ನನ್ನನ್ನು ಬೆಂಬಲಿಸಿ ಗೆಲ್ಲಿಸಿದರೆ ಕ್ಷೇತ್ರದಲ್ಲಿ ಸಮಗ್ರ ನೀರಾವರಿಗೆ ಮೊದಲ ಆದ್ಯತೆ ನೀಡುವೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಹೇಳಿದರು.

ಮಂಗಳವಾರ ತಾಲೂಕಿನ ಹಾಲೇಕಲ್ಲು ಗ್ರಾಮದಲ್ಲಿ ಮತಯಾಚನೆ ಮಾಡಿ ಬಿಳಿಚೋಡಿನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಕೇಂದ್ರದಲ್ಲಿ 27 ಪಕ್ಷಗಳು ಸೇರಿ ಒಕ್ಕೂಟ ಮಾಡಿಕೊಂಡು ಪ್ರಧಾನಿ ನರೇಂದ್ರ ಮೋದಿಯವರನ್ನು ಸೋಲಿಸಲು ಪ್ರಯತ್ನ ಮಾಡುತ್ತಿವೆ. ಅದು ಎಂದಿಗೂ ಸಾಧ್ಯವಿಲ್ಲ. ಏಕೆಂದರೆ ಅವರಿಗೆ ನಾರಿಶಕ್ತಿಯ ಬೆಂಬಲವಿದೆ ಎಂದರು.

ಕೆಂದ್ರದಲ್ಲಿ 60 ವರ್ಷ ಅಳ್ವಿಕೆ ನಡೆಸಿದ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರದ ಸಾಧನೆ ಶೂನ್ಯ. ಪ್ರಧಾನಿಯಾಗಿ ಹತ್ತು ವರ್ಷ ಆಡಳಿತ ನಡೆಸಿರುವ ನರೇಂದ್ರ ಮೋದಿಯವರು ರೈತರ ಖಾತೆಗೆ 2000 ರೂ., ಹೆಣ್ಣುಮಕ್ಕಳ ಸಂತತಿ ರಕ್ಷಣೆಗಾಗಿ ಸುಕನ್ಯಾ ಸಮೃದ್ಧಿ ಯೋಜನೆ, ಪ್ರತಿಯೊಬ್ಬರಿಗೂ ಬ್ಯಾಂಕ್‌ ಖಾತೆ, ಮನೆ ಮನೆಗೆ ಗಂಗೆ ಸೇರಿದಂತೆ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದು ಬಣ್ಣಿಸಿದರು.

ಮಾಜಿ ಶಾಸಕ ಎಚ್‌.ಪಿ. ರಾಜೇಶ್‌ ಮಾತನಾಡಿ, ಕಾಂಗ್ರೆಸ್‌ ಕೇಂದ್ರದಲ್ಲಿ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ. ಬಹುಮತಕ್ಕೆ 272 ಸ್ಥಾನಗಳ ಅವಶ್ಯಕತೆ ಇದೆ. ಆದರೆ ಕಾಂಗ್ರೆಸ್‌ 200 ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧಿಸಿದೆ. ನಾನು ಶಾಸಕನಾಗಿದ್ದಾಗ ಭದ್ರಾ ಮೇಲ್ದಂಡೆ ಯೋಜನೆ, ಬಹುಗ್ರಾಮ ಕುಡಿಯುವ ನೀರಿನ ಯೋಜನೆ, 57 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಜಾರಿಗೆ ಶ್ರಮಿಸಿದ್ದೇನೆ. ಈಗಿನ ಸರ್ಕಾರ ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಬೇಕೆಂದು ಒತ್ತಾಯಿಸಿದರು.

ಮತ್ತೋರ್ವ ಮಾಜಿ ಶಾಸಕ ಎಸ್‌.ವಿ. ರಾಮಚಂದ್ರ ಮಾತನಾಡಿ, ನಾನು ಶಾಸಕನಾಗಿದ್ದಾಗ ಬಿಳಿಚೋಡು ಗ್ರಾಮದಲ್ಲಿ ದ್ವಿಮುಖ ಸಿಸಿ ರಸ್ತೆ ಮಾಡಿಸಿದ್ದೇನೆ. ಒಂದು ಕಡೆ ರಸ್ತೆ ಆಗಿದ್ದು, ಇನ್ನೊಂದು ಭಾಗದಲ್ಲಿ ರಸ್ತೆ ಮಾಡಿಸುವಷ್ಟರಲ್ಲಿ ಚುನಾವಣಾ ನೀತಿಸಂಹಿತೆ ಜಾರಿಗೆ ಬಂತು. ಕಾಂಗ್ರೆಸ್‌ ಸರ್ಕಾರ ಕಾಮಗಾರಿ ನನೆಗುದಿಗೆ ಬೀಳುವಂತೆ ಮಾಡಿದೆ. ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ. ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಹಾಗೂ 57 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ನಿಧಾನಗತಿಯಲ್ಲಿ ಸಾಗುತ್ತಿದೆ. ಹಾಗಾಗಿ ಬಿಜೆಪಿ ಅಭ್ಯರ್ಥಿಗೆ ಮತ ಚಲಾಯಿಸಿ ಗೆಲ್ಲಿಸಬೇಕೆಂದು ಮನವಿ ಮಾಡಿದರು.

ಜೆಡಿಎಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಕಲ್ಲೇರುದ್ರೇಶ್‌ ಮಾತನಾಡಿ, ದೇಶ ಅಭಿವೃದ್ಧಿ ಹೊಂದಬೇಕಾದರೆ ಮೋದಿ ಮತ್ತೆ ಪ್ರಧಾನಮಂತ್ರಿಯಾಗಬೇಕು. ಕೋವಿಡ್‌ ಸಮಯದಲ್ಲಿ ದೇಶದ ಎಲ್ಲರಿಗೂ ಲಸಿಕೆ ನೀಡಿ ಜೀವ ಉಳಿಸಿದ್ದಾರೆ ಎಂದರು.

ಬಿಜೆಪಿ ಮಂಡಲ ಅಧ್ಯಕ್ಷ ಪಲ್ಲಾಗಟ್ಟೆ ಮಹೇಶ್‌, ಜೆಡಿಎಸ್‌ ತಾಲೂಕು ಅಧ್ಯಕ್ಷ ಸಿದ್ದಣ್ಣ, ಜೆಡಿಎಸ್‌

ಮಹಿಳಾ ಘಟಕದ ಅಧ್ಯಕ್ಷೆ ಸುನಂದಮ್ಮ ಯಲ್ಲಪ್ಪ, ಸಂಸದರ ಪುತ್ರ ಅನಿತ್‌ಕುಮಾರ್‌, ಜಿಪಂ ಮಾಜಿ ಸದಸ್ಯರಾದ ಸವಿತಾ, ಎಸ್‌.ಕೆ. ಮಂಜುನಾಥ, ಉಮಾ ವೆಂಕಟೇಶ್‌, ಜಿಲ್ಲಾ ಕಾರ್ಯದರ್ಶಿ ಡಿ.ವಿ. ನಾಗಪ್ಪ, ಮುಖಂಡರಾದ ಶಶಿಧರ, ಮೋಹನ್‌, ಸುರೇಂದ್ರ, ರಾಜುಕುಮಾರ್‌, ಪ್ರಸನ್ನ, ಚಂದ್ರ ನಾಯ್ಕ ಮತ್ತಿತರರು ಇದ್ದರು.

ಹಾಲೇಕಲ್ಲು, ಗುತ್ತಿದುರ್ಗ, ಪಲ್ಲಾಗಟ್ಟೆ, ಬಿಸ್ತುವಳ್ಳಿ, ದಿದ್ದಿಗಿ, ಹುಚ್ಚಂಗಿಪುರ, ಆಸಗೋಡು ಗ್ರಾಮಗಳಲ್ಲಿ ಮತಯಾಚನೆ ಮಾಡಲಾಯಿತು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

DVG-Duggamma

Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.