Inheritance Tax: ಸ್ಯಾಮ್ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!
ಉತ್ತರಾಧಿಕಾರ(ಪಿತ್ರಾರ್ಜಿತ) ತೆರಿಗೆ ಬಗ್ಗೆ ಪ್ರಸ್ತಾಪಿಸಿ ಸಂಪತ್ತಿನ ಮರು ಹಂಚಿಕೆಯನ್ನು ಸಮರ್ಥಿಸಿಕೊಂಡಿದ್ದರು
ನಾಗೇಂದ್ರ ತ್ರಾಸಿ, Apr 24, 2024, 2:58 PM IST
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಆರ್ಥಿಕ ಸಮೀಕ್ಷೆ ನಡೆಸಿ ಸಂಪತ್ತಿನ ಸಮಾನ ಹಂಚಿಕೆ ಮಾಡುವ ಭರವಸೆ ಕುರಿತು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ ಬೆನ್ನಲ್ಲೇ ದೇಶಾದ್ಯಂತ ಚುನಾವಣಾ ಬಿಸಿಯ ನಡುವೆ ಕಾಂಗ್ರೆಸ್ ಹಿರಿಯ ಮುಖಂಡ ಸ್ಯಾಮ್ ಪಿತ್ರೋಡಾ ಅಮೆರಿಕದಲ್ಲಿನ Inheritance tax (ಪಿತ್ರಾರ್ಜಿತ ತೆರಿಗೆ) ಬಗ್ಗೆ ಉಲ್ಲೇಖಿಸುವ ಮೂಲಕ ಚರ್ಚೆಗೆ ಗ್ರಾಸವಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅವಧಿಯಲ್ಲಿ ದೇಶದ ಶೇ.40ರಷ್ಟು ಸಂಪತ್ತು ಕೇವಲ ಅಗ್ರ ಶೇ.1ರಷ್ಟು ಶ್ರೀಮಂತರ ಪಾಲಾಗಿದೆ. ದೇಶದ 21 ಶತಕೋಟ್ಯಾಧೀಶರ ಆಸ್ತಿ ಉಳಿದ 70 ಕೋಟಿ ಭಾರತೀಯರ ಸಂಪತ್ತಿಗೆ ಸಮಾನವಾಗಿದೆ. ಹೀಗಾಗಿ ದೇಶದಲ್ಲಿ ಇಂಡಿಯಾ ಕೂಟ ಅಧಿಕಾರಕ್ಕೆ ಬಂದರೆ ಮಾತ್ರ ಸಮಗ್ರ ಆರ್ಥಿಕ ಸುಧಾರಣೆ ಸಾಧ್ಯ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಟ್ವೀಟರ್ ನಲ್ಲಿ ತಿಳಿಸಿದ್ದರು.
ಪ್ರಧಾನಿ ಮೋದಿ ಹೇಳಿದ್ದೇನು?
ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ರಾಜಸ್ಥಾನದಲ್ಲಿ ಲೋಕಸಭಾ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ವೇಳೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಜನರ ಆಸ್ತಿಯನ್ನು ನುಸುಳುಕೋರರು ಹಾಗೂ ಹೆಚ್ಚೆಚ್ಚು ಮಕ್ಕಳನ್ನು ಹೆರುವವರಿಗೆ ಹಂಚುತ್ತದೆ ಎಂದು ವಾಗ್ದಾಳಿ ನಡೆಸಿದ್ದರು.
ಸಂಪತ್ತಿನ ಮರು ಹಂಚಿಕೆ ಕುರಿತ ವಿಷಯ ಚರ್ಚೆಯಾಗುತ್ತಲೇ ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅವರು, ಅಮೆರಿಕದ ಉತ್ತರಾಧಿಕಾರ(ಪಿತ್ರಾರ್ಜಿತ) ತೆರಿಗೆ ಬಗ್ಗೆ ಪ್ರಸ್ತಾಪಿಸಿ ಸಂಪತ್ತಿನ ಮರು ಹಂಚಿಕೆಯನ್ನು ಸಮರ್ಥಿಸಿಕೊಂಡಿದ್ದರು.
ಸ್ಯಾಮ್ ಪಿತ್ರೋಡಾ ಮಾತಿನ ಮರ್ಮವೇನು?
ಅಮೆರಿಕ ಸಂಯುಕ್ತ ಸಂಸ್ಥಾನದಲ್ಲಿ ಪಿತ್ರಾರ್ಜಿತ ತೆರಿಗೆ (Inheritance tax) ಪದ್ಧತಿ ಚಾಲ್ತಿಯಲ್ಲಿದೆ. ಅಲ್ಲಿ ವ್ಯಕ್ತಿಯ ಸಂಪತ್ತಿನ ಮೇಲೆ 55% ತೆರಿಗೆ ವಿಧಿಸಲಾಗುತ್ತದೆ. ವ್ಯಕ್ತಿಯ ಮಕ್ಕಳು, ಕುಟುಂಬ ಸದಸ್ಯರಿಗೆ ಕೇವಲ 45% ಪಾಲನ್ನು ನೀಡಲಾಗುತ್ತದೆ.
ಉದಾಹರಣೆಗೆ- ಒಬ್ಬ ವ್ಯಕ್ತಿ 100 ಮಿಲಿಯನ್ ಡಾಲರ್ ಮೌಲ್ಯದ ಆಸ್ತಿ ಹೊಂದಿದ್ದರೆ, ಆತನ 45 ಪ್ರತಿಶತ ಸಂಪತ್ತು ಮಕ್ಕಳಿಗೆ ವರ್ಗಾವಣೆಯಾಗಲಿದ್ದು, ಉಳಿದ 55 ಪ್ರತಿಶತ ಆಸ್ತಿ ಸರ್ಕಾರದ ವಶಕ್ಕೆ ಹೋಗಲಿದೆ. ಇದೊಂದು ಕುತೂಹಲಕಾರಿ ಕಾನೂನು. ಈ ರೀತಿಯ ಯಾವುದೇ ಕಾನೂನು ಭಾರತದಲ್ಲಿ ಇಲ್ಲ. ಆದರೆ 10 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿ ಇದ್ದ ವ್ಯಕ್ತಿ ನಿಧನರಾದರೆ, ಆ ಆಸ್ತಿ ಆತನ ಮಕ್ಕಳು, ಮೊಮ್ಮಕ್ಕಳಿಗೆ ಹಂಚಿಕೆಯಾಗುತ್ತದೆ. ಸಾರ್ವಜನಿಕರಿಗೆ ಏನೂ ಸಿಗುವುದಿಲ್ಲ. ಈ ವಿಚಾರದ ಬಗ್ಗೆ ಚರ್ಚೆ ನಡೆದರೆ ಒಳ್ಳೆಯದು ಎಂದು ಪಿತ್ತೋಡಾ ಉಲ್ಲೇಖಿಸಿದ್ದರು.
ಭಾರತದಲ್ಲಿಯೂ ಚಾಲ್ತಿಯಲ್ಲಿತ್ತು….!
ಅಮೆರಿಕದಲ್ಲಿ ಸಾಮಾನ್ಯವಾದ ಉತ್ತರಾಧಿಕಾರ ತೆರಿಗೆ(Inheritance tax) ಪದ್ಧತಿ ಜಾರಿಯಲ್ಲಿದೆ. ಆದರೆ ಭಾರತದಲ್ಲಿ ಅದು ದೀರ್ಘಾವಧಿಯವರೆಗೆ ಜಾರಿಯಲ್ಲಿಡಲು ಸಾಧ್ಯವಾಗಿಲ್ಲ. 1953ರಿಂದ 1985ರವರೆಗೂ ಭಾರತದಲ್ಲಿ ಪಿತ್ರಾರ್ಜಿತ ತೆರಿಗೆ ಪದ್ಧತಿ ಜಾರಿಯಲ್ಲಿತ್ತು. ಆದರೆ ವಿಪಿ ಸಿಂಗ್ ವಿತ್ತ ಸಚಿವರಾಗಿದ್ದ ಸಂದರ್ಭದಲ್ಲಿ ಪ್ರಧಾನಿಯಾಗಿದ್ದ ರಾಜೀವ್ ಗಾಂಧಿ ಪಿತ್ರಾರ್ಜಿತ ಆಸ್ತಿ(Inheritance tax) ತೆರಿಗೆ ಕಾಯ್ದೆಯನ್ನು ರದ್ದುಗೊಳಿಸಿದ್ದರು. ಈ ವ್ಯವಸ್ಥೆಯಿಂದ ಶ್ರೀಮಂತರು ಮತ್ತು ಬಡವರ ನಡುವೆ ಸಾಮಾಜಿಕ, ಆರ್ಥಿಕ ಸಮಾನತೆ ತರಲು ಯಶಸ್ವಿಯಾಗುವುದಿಲ್ಲ ಎಂಬ ನಂಬಿಕೆ ಸಿಂಗ್ ಅವರದ್ದಾಗಿತ್ತು.
ಜಗತ್ತಿನಲ್ಲಿ ಉತ್ತರಾಧಿಕಾರ ತೆರಿಗೆ (Inheritance tax )ಪದ್ಧತಿ ತುಂಬಾ ವಿರಳ. ಅಮೆರಿಕದ ಕೇವಲ ಆರು ರಾಜ್ಯಗಳಲ್ಲಿ ಮಾತ್ರ ಈ (Inheritance tax) ಉತ್ತರಾಧಿಕಾರ ತೆರಿಗೆ ಪದ್ಧತಿ ಜಾರಿಯಲ್ಲಿದೆ. ಸ್ವಂತ ಆಸ್ತಿ ಹೊಂದಿದ್ದ ವ್ಯಕ್ತಿ ಮೃತಪಟ್ಟಲ್ಲಿ ಆ ಆಸ್ತಿಯ ಮೌಲ್ಯದ ಆಧಾರದ ಮೇಲೆ ತೆರಿಗೆ ವಿಧಿಸಲಾಗುತ್ತದೆ.
ಅಮೆರಿಕದ ಲೋವಾ, ಕೆಂಟುಕಿ, ಮೇರಿ ಲ್ಯಾಂಡ್, ನೆಬ್ರಾಸ್ಕಾ, ನ್ಯೂ ಜೆರ್ಸಿ ಮತ್ತು ಪೆನಿನ್ಸುಲ್ವೇನಿಯಾ ಸೇರಿದಂತೆ ಆರು ರಾಜ್ಯಗಳಲ್ಲಿ (ಎಸ್ಟೇಟ್ ಟ್ಯಾಕ್ಸ್) ಉತ್ತರಾಧಿಕಾರಿ ತೆರಿಗೆಯನ್ನು ಸಂಗ್ರಹಿಸಲಾಗುತ್ತಿದೆ.
ಭಾರತ ಸೇರಿದಂತೆ ಆಸ್ಟ್ರಿಯಾ, ಜೆಕ್ ರಿಪಬ್ಲಿಕ್, ನ್ಯೂಜಿಲ್ಯಾಂಡ್, ನಾರ್ವೆ, ಪೋರ್ಚುಗಲ್ ಸೇರಿದಂತೆ ಹಲವು ದೇಶಗಳು ಪಿತ್ರಾರ್ಜಿತ ತೆರಿಗೆ ಪದ್ಧತಿಯನ್ನು ಕೈಬಿಟ್ಟಿದ್ದವು. ಯುಎಸ್ ಎ, ಬ್ರಿಟನ್, ಜಪಾನ್ ಗಳಲ್ಲಿ ಈ ಪದ್ಧತಿ ಚಾಲ್ತಿಯಲ್ಲಿದೆ.
ಪಿತ್ರಾರ್ಜಿತ ತೆರಿಗೆ ಹಳೆಯ ಪದ್ಧತಿಗಳಲ್ಲಿ ಒಂದಾಗಿದೆ. ಇದು ರೋಮನ್ ಸಾಮ್ರಾಜ್ಯಕ್ಕಿಂತಲೂ ಹಿಂದೆ ಚಾಲ್ತಿಯಲ್ಲಿತ್ತು. ಹಿರಿಯ ಸೈನಿಕರ ಪಿಂಚಣಿ ಪಾವತಿಸಲು ಪಿತ್ರಾರ್ಜಿತ ಆಸ್ತಿಯ ಮೇಲೆ ತೆರಿಗೆ ವಿಧಿಸಲಾಗುತ್ತಿತ್ತಂತೆ. ಗ್ರೇಟ್ ಬ್ರಿಟನ್, ನೆದರ್ಲ್ಯಾಂಡ್, ಸ್ಪೇನ್, ಪೋರ್ಚುಗಲ್ ಸೇರಿದಂತೆ ಯುರೋಪಿಯನ್ ದೇಶಗಳಲ್ಲಿ ಸುಮಾರು 21ನೇ ಶತಮಾನದ ಆರಂಭದಲ್ಲಿ ಉತ್ತರಾಧಿಕಾರ ತೆರಿಗೆ ಪದ್ಧತಿಯಲ್ಲಿ ಸುಧಾರಣೆಯ ಬೇಡಿಕೆಗಾಗಿ ಒತ್ತಾಯ ಕೇಳಿಬರತೊಡಗಿತ್ತು. 2001ರಲ್ಲಿ ಇಟಲಿ ಕೂಡಾ ಈ ತೆರಿಗೆ ಪದ್ದತಿಯನ್ನು ರದ್ದುಗೊಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
Border Gavaskar Trophy: ಕಾಂಗರೂ ಚಾಲೆಂಜ್ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ
Tulsi Health Benefits: ತುಳಸಿ ಗಿಡದ ಔಷಧೀಯ ಗುಣಗಳ ಮಾಹಿತಿ ಇಲ್ಲಿವೆ…
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.