ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
ಸೈಕ್ಲಿಂಗ್ ಟ್ರಾಫಿಕ್ ನಿರ್ಮಾಣಕ್ಕೆ 10 ಎಕರೆ ಜಮೀನು ಮೀಸಲಿಡಲಾಗಿದೆ
Team Udayavani, Apr 24, 2024, 4:02 PM IST
■ ಉದಯವಾಣಿ ಸಮಾಚಾರ
ಗದಗ: ಕನಕದಾಸ ಶಿಕ್ಷಣ ಸಮಿತಿ ಕಲಾ, ವಾಣಿಜ್ಯ, ವಿಜ್ಞಾನ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಬಿಎ 2ನೇ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಪವಿತ್ರಾ ಕಡಕೋಳ ಸೈಕ್ಲಿಂಗ್‌ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ ಎಂದು ಸಮಿತಿ ಕಾರ್ಯದರ್ಶಿ ರವೀಂದ್ರನಾಥ ದಂಡಿನ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖೇಲೋ ಇಂಡಿಯಾ ಟ್ಯಾಲೆಂಟ್ ಡೆವಲಪ್ ಮೆಂಟ್ ಪ್ರೋಗ್ರಾಮ್‌ನ ಡೆಪ್ಯೂಟಿ ಡೈರೆಕ್ಟರ್ ಆದೇಶದ ಮೇರೆಗೆ ಪಟಿಯಾಲದ ನೇತಾಜಿ ಸುಭಾಷ ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಸ್ಫೋರ್ಟ್ಸ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆಯಾಗಿದ್ದಾಳೆ ಎಂದರು.
ಕಳೆದ ಮಾರ್ಚ್ ತಿಂಗಳ 28ರಿಂದ 31ರ ವರೆಗೆ ಹರಿಯಾಣದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಎಂಟಿಬಿ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ 2 ಬೆಳ್ಳಿ ಪದಕ, 1 ಕಂಚಿನ ಪದಕ ಪಡೆದು ಜಿಲ್ಲೆ ಸೇರಿ ರಾಜ್ಯಕ್ಕೆ ಕೀರ್ತಿ ತಂದಿದ್ದಾಳೆ ಎಂದು ಹೇಳಿದರು.
ರಾಜ್ಯ ಸೈಕ್ಲಿಂಗ್ ಅಮೆಚ್ಯೂರ್ ಅಸೋಸಿಯೇಷನ್‌ನ ಜಿ.ಬಿ. ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ 1997ರಿಂದಲೂ ಸೈಕ್ಲಿಂಗ್‌ನಲ್ಲಿ ಅನೇಕ ಕ್ರೀಡಾಪಟುಗಳು ಸಾಧನೆ ಮಾಡುತ್ತಾ ಬಂದಿದ್ದಾರೆ. 2008ರಿಂದ ಹಾಸ್ಟೆಲ್ ಆರಂಭವಾಯಿತು. ಈ ಹಾಸ್ಟೆಲ್ ಆರಂಭವಾದ ನಂತರ ಅನೇಕ ಬಡಕುಟುಂಬದ ಪ್ರತಿಭೆಗಳಿಗೆ ತಮ್ಮ ಕೌಶಲಗಳನ್ನು ಪ್ರದರ್ಶಿಸಲು ಅನುಕೂಲವಾಗಿದೆ. ಜೊತೆಗೆ ಆರ್‌ಡಿಪಿಆರ್ ವಿಶ್ವವಿದ್ಯಾಲಯದಲ್ಲಿ ಸೈಕ್ಲಿಂಗ್ ಟ್ರಾಫಿಕ್ ನಿರ್ಮಾಣಕ್ಕೆ 10 ಎಕರೆ ಜಮೀನು ಮೀಸಲಿಡಲಾಗಿದೆ ಎಂದು ಹೇಳಿದರು.
ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಮಾತನಾಡಿ, ಮೊದಲ ಬಾರಿ ಗದಗನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಸೈಕ್ಲಿಂಗ್ ಚಾಂಪಿಯನ್ ಶಿಪ್‌ನಲ್ಲಿ ಪಾಲ್ಗೊಳ್ಳುವ ಮೂಲಕ ಕಂಚಿನ ಪದಕ ಪಡೆದೆ. ನಂತರ ಈವರೆಗೆ 9 ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಿ 8 ಪದಕಗಳನ್ನು ಪಡೆದಿದ್ದೇನೆ. 19 ಮೌಂಟನ್ ಬೈಕ್ ಸೈಕ್ಲಿಂಗ್ ನ್ಯಾಶನಲ್ ಚಾಂಪಿಯನ್ ಶಿಪ್ ಭಾಗವಹಿಸಿದ್ದೇನೆ. 18 ಟೈಮ್ ಟ್ರೈಲ್ ಟೀಮ್ ಗೋಲ್ಡ್ ಮೆಡಲ್, 16 ಯೂತ್ ಗರ್ಲ್ಸ್ ಟೈಮ್ ಟ್ರೈಲ್ ಸಿಲ್ವರ್ ಮೆಡಲ್, 16 ಯೂತ್ ಗರ್ಲ್ಸ್ ಮಾಸ್ ಸ್ಟಾರ್ಟ್ ಬ್ರೌನ್ ಮೆಡಲ್ ಪಡೆದು ಈಗ ಪಟಿಯಾಲದ ರಾಷ್ಟ್ರೀಯ ಶಿಬಿರಕ್ಕೆ ಆಯ್ಕೆಯಾಗಿದ್ದೇನೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ| ಡಿ.ಬಿ. ಗವಾನಿ, ಉಪಪ್ರಾಚಾರ್ಯ ಡಾ| ಜಿ.ಪಿ. ಜಂಪಣ್ಣನವರ, ಎಸ್.ಎಸ್. ರಾಯ್ಕರ್, ವಿ.ಎಚ್. ಕೊಳ್ಳಿ, ಬಿ.ಐ. ಬಿರಾದಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.