Sandalwood: ಶೈನ್ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್ ಮ್ಯಾರೀಡ್” ಟೈಟಲ್
Team Udayavani, Apr 24, 2024, 4:48 PM IST
ಶೈನ್ ಶೆಟ್ಟಿ ಸದ್ದಿಲ್ಲದೇ ಸಿನಿಮಾವೊಂದರಲ್ಲಿ ನಟಿಸಿದ್ದಾರೆ. ಚಿತ್ರೀಕರಣ ಕೂಡಾ ಮುಕ್ತಾಯವಾಗಿ, ಸದ್ಯ ಪೋಸ್ಟ್ ಪ್ರೊಡಕ್ಷನ್‌ನಲ್ಲಿ ಚಿತ್ರತಂಡ ಬಿಝಿಯಾಗಿದೆ.
ಅಂದಹಾಗೆ, ಹೊಸ ಚಿತ್ರಕ್ಕೆ “ಜಸ್ಟ್ ಮ್ಯಾರೀಡ್’ ಎಂದು ಟೈಟಲ್ ಇಡಲಾಗಿದೆ. ಚಿತ್ರವನ್ನು ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್.ಬಾಬಿ ನಿರ್ಮಿಸಿದ್ದು, ಸಿ.ಆರ್.ಬಾಬಿ ಅವರೇ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಶೈನ್ ಶೆಟ್ಟಿಗೆ ಅಂಕಿತಾ ಅಮರ್ ನಾಯಕಿ. ಬೆಂಗಳೂರು, ಮೈಸೂರು ಮತ್ತು ಚಿಕ್ಕಮಗಳೂರಿನಲ್ಲಿ 45 ದಿನಗಳ ಚಿತ್ರೀಕರಣ ನಡೆದಿದೆ.
ಚಿತ್ರೀಕರಣ ನಂತರದ ಕೆಲಸಗಳು ಬಿರುಸಿನಿಂದ ಸಾಗಿದೆ. ಚಿತ್ರದಲ್ಲಿ ಆರು ಹಾಡುಗಳಿದ್ದು ಅಜನೀಶ್ ಲೋಕನಾಥ್ ಅವರೇ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಪೈಕಿ ಪ್ರಮೋದ್ ಮರವಂತೆ ಅವರು ಬರೆದು, ವಿಜಯ್ ಪ್ರಕಾಶ್ ಹಾಡಿರುವ ಅಭಿಮಾನಿಯಾಗಿ ಹೋದೆ ಹಾಡು ಇತ್ತೀಚಿಗೆ ಬಿಡುಗಡೆಯಾಗಿ ಮೆಚ್ಚುಗೆ ಪಡೆದುಕೊಂಡಿದೆ.
ಜಸ್ಟ್ ಮ್ಯಾರೀಡ್ ಪ್ರೇಮಕಥೆಯ ಚಿತ್ರವಾಗಿದ್ದರೂ, ಪ್ರೇಕ್ಷಕರಿಗೆ ಬೇಕಾದ ಎಲ್ಲಾ ಅಂಶಗಳು ಇದೆ. ಸಿ.ಆರ್. ಬಾಬಿ ಅವರೇ ಕಥೆ ಬರೆದಿದ್ದಾರೆ. ಚಿತ್ರಕಥೆ ಸಿ.ಆರ್. ಬಾಬಿ ಹಾಗೂ ಧನಂಜಯ್ ರಂಜನ್ ಅವರದು. ರಘು ನಿಡುವಳ್ಳಿ ಈ ಚಿತ್ರದ ಸಂಭಾಷಣೆಕಾರರು.
ಚಿತ್ರಕ್ಕೆ ಪಿ.ಜಿ.ಛಾಯಾಗ್ರಹಣ, ಶ್ರೀಕಾಂತ್ ಮತ್ತು ಅಶಿಕ್ ಕುಸುಗೊಳ್ಳಿ ಸಂಕಲನ, ಅಮರ್ ಕಲಾ ನಿರ್ದೇಶನ, ವಿಕ್ರಮ್ ಮೋರ್ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಚಿತ್ರದ ಹಾಡುಗಳನ್ನು ಪ್ರಮೋದ್ ಮರವಂತೆ ಮತ್ತು ಧನಂಜಯ್ ಬರೆದಿದ್ದಾರೆ. ಚಿತ್ರದಲ್ಲಿ ಶೈನ್ ಶೆಟ್ಟಿ, ಅಂಕಿತಾ ಅಮರ್, ದೇವರಾಜ್, ಅಚ್ಯುತ್ ಕುಮಾರ್, ಮಾಳವಿಕಾ ಅವಿನಾಶ್, ಅನೂಪ್ ಭಂಡಾರಿ, ಶ್ರುತಿ ಹರಿಹರನ್, ಶ್ರುತಿ ಕೃಷ್ಣ, ಸಾಕ್ಷಿ ಅಗರವಾಲ್ ಮುಂತಾದವರು ಈ ಚಿತ್ರದ ತಾರಾಬಳಗ ದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.