LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Team Udayavani, Apr 24, 2024, 5:02 PM IST
ಮಹಾರಾಷ್ಟ್ರ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮಹಾರಾಷ್ಟ್ರದ ಯವತ್ಮಾಲ್‌ನಲ್ಲಿ ಚುನಾವಣಾ ಪ್ರಚಾರ ನಡೆಸಿ ಭಾಷಣ ಮಾಡುವ ವೇಳೆ ವೇದಿಕೆಯ ಮೇಲೆ ಹಠಾತ್ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದಾರೆ.
ಬುಧವಾರ ರ‍್ಯಾಲಿಯಲ್ಲಿ ಭಾಗಿಯಾಗಲು ಬಳಿಕ ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡಲು ಗಡ್ಕರಿ ಯವತ್ಮಾಲ್‌ನ ಪುಸಾದ್‌ಗೆ ಬಂದಿದ್ದರು. ಈ ವೇಳೆ ವೇದಿಕೆಯಲ್ಲಿ ಮಾತನಾಡುತ್ತಿದ್ದಾಗ ಏಕಾಏಕಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ ಕೂಡಲೇ ಪಕ್ಷದ ಹಿರಿಯ ನಾಯಕರು ಸೇರಿ ಚಿಕಿತ್ಸೆಗೆ ಕರೆದೊಯ್ದಿದ್ದಾರೆ.
ಮೊದಲ ಹಂತದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿರುವ ನಾಗ್ಪುರದ ಬಿಜೆಪಿ ಅಭ್ಯರ್ಥಿ ಗಡ್ಕರಿ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ನಾಯಕ ರಾಜಶ್ರೀ ಪಾಟೀಲ್ ಅವರ ಪರ ಪ್ರಚಾರ ನಡೆಸುತ್ತಿದ್ದರು, ಅವರು ಯವತ್ಮಾಲ್-ವಾಶಿಮ್ ಲೋಕಸಭಾ ಕ್ಷೇತ್ರದಿಂದ ಆಡಳಿತಾರೂಢ ಮಹಾಯುತಿ ಮೈತ್ರಿಕೂಟದ ಅಭ್ಯರ್ಥಿಯಾಗಿದ್ದಾರೆ.
ಮಹಾರಾಷ್ಟ್ರದ ಬುಲ್ಧಾನ, ಅಕೋಲಾ, ಅಮರಾವತಿ, ವಾರ್ಧಾ, ಹಿಂಗೋಲಿ, ನಾಂದೇಡ್ ಮತ್ತು ಪರ್ಭಾನಿ ಜೊತೆಗೆ ಯವತ್ಮಾಲ್, ಏಪ್ರಿಲ್ 26 (ಶುಕ್ರವಾರ) ಎರಡನೇ ಹಂತದ ಮತದಾನ ನಡೆಯಲಿದೆ.
ಇದನ್ನೂ ಓದಿ: ಹೊಸ ಚಿತ್ರಕ್ಕೆ ಮಹೇಶ್ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ
VIDEO | Lok Sabha Elections 2024: Union Minister Nitin Gadkari fainted during an election rally in Maharashtra’s Yavatmal earlier today.
Gadkari later shared on X (formerly Twitter) that he was fine and was leaving for Warud, Maharashtra to address another rally.… pic.twitter.com/FwaW3uL3DM
— Press Trust of India (@PTI_News) April 24, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.