LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
Team Udayavani, Apr 24, 2024, 5:39 PM IST
ಸಾಗರ: ನನಗೆ ಅತ್ಯಂತ ಸಂತೋಷ ಕೊಡುವ ರೈತನ ಚಿಹ್ನೆ ಸಿಕ್ಕಿದ್ದು, ಚುನಾವಣೆಯಲ್ಲಿ ಅತಿ ಹೆಚ್ಚಿನ ಅಂತರದಿಂದ ಗೆಲ್ಲುವ ವಿಶ್ವಾಸವಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಇಲ್ಲಿನ ರಾಷ್ಟ್ರಭಕ್ತರ ಬಳಗದ ವತಿಯಿಂದ ಏರ್ಪಡಿಸಿದ್ದ ಕಾರ್ಯಕರ್ತರೊಂದಿಗಿನ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಈಶ್ವರಪ್ಪ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ, ನಾಮಪತ್ರ ವಾಪಾಸ್ ಪಡೆಯುತ್ತಾರೆ ಎಂದು ವಿಜಯೇಂದ್ರ ಹಾಗೂ ರಾಘವೇಂದ್ರ ಹೇಳುತ್ತಾ ಬಂದಿದ್ದರು. ಈಗ ಚಿಹ್ನೆಯೂ ಸಿಕ್ಕಿರುವುದರಿಂದ ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ಮಾಡುತ್ತಾರೆ, ಗೆಲ್ಲುತ್ತಾರೆ ಎನ್ನುವ ವಿಶ್ವಾಸ ಮೂಡಿದೆ ಎಂದು ಹೇಳಿದರು.
ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಸಂಸದರ ಬಗ್ಗೆ ತೀವ್ರ ಆಕ್ರೋಶ ಜನರಲ್ಲಿದೆ. ಜನರ ಆಕ್ರೋಶ ವ್ಯರ್ಥವಾಗಬಾರದು. ನರೇಂದ್ರ ಮೋದಿ ಪ್ರಧಾನಿಯಾಗಬೇಕು. ಭಾರತೀಯ ಜನತಾ ಪಕ್ಷ ಶುದ್ಧೀಕರಣವಾಗಬೇಕು ಎನ್ನುವ ಸಂಕಲ್ಪ ಇರಿಸಿಕೊಂಡು ಹೋರಾಟ ಮಾಡುತ್ತಿರುವ ನನಗೆ ಹೆಚ್ಚಿನ ಬೆಂಬಲ ಸಿಕ್ಕಿದೆ ಎಂದರು.
ಜನರು ಸ್ವಯಂಪ್ರೇರಿತವಾಗಿ ನನ್ನ ಚಿಹ್ನೆಯನ್ನು ತಮ್ಮ ವಾಟ್ಸಪ್, ಸ್ಟೇಟಸ್‌ಗಳಲ್ಲಿ ಹಾಕಿಕೊಂಡು ಕ್ಷೇತ್ರದಾದ್ಯಂತ ಪ್ರಚಾರ ಮಾಡುತ್ತಿದ್ದಾರೆ. ಜನರು ತಮ್ಮ ಕ್ಷೇತ್ರವ್ಯಾಪ್ತಿಯಲ್ಲಿ ಮತಪರಿವರ್ತನೆ ಮಾಡುವ ಮೂಲಕ ನನ್ನನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರವ್ಯಾಪ್ತಿಯಲ್ಲಿ ಸದ್ಯ ನಾನೇ ಬಲಾಢ್ಯ ಅಭ್ಯರ್ಥಿ. ಹಣ ಹಂಚಿದರೂ ಬಿ.ವೈ.ರಾಘವೇಂದ್ರ ಗೆಲ್ಲುವುದಿಲ್ಲ. ಜನ ರಾಘವೇಂದ್ರನ ಹತ್ತಿರ ದುಡ್ಡು ತೆಗೆದುಕೊಳ್ಳುತ್ತಾರೆ. ಈಶ್ವರಪ್ಪನಿಗೆ ಓಟು ಹಾಕುತ್ತಾರೆ. ಹಣಬಲ ಈ ಚುನಾವಣೆಯಲ್ಲಿ ಯಶಸ್ಸು ಪಡೆಯುವುದಿಲ್ಲ ಎಂದರು.
ಕಾರ್ಯಕ್ರಮದಲ್ಲಿ ಎಸ್.ವಿ.ಕೃಷ್ಣಮೂರ್ತಿ, ಎಸ್.ಎಲ್.ಮಂಜುನಾಥ್, ಸತೀಶ್ ಗೌಡ ಅದರಂತೆ, ಗೌರೀಶ್ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karavali Utsava: ಡಿ.21-ಜ.19: ಮಂಗಳೂರಿನಲ್ಲಿ ಕರಾವಳಿ ಉತ್ಸವ; ದ.ಕ ಜಿಲ್ಲಾಧಿಕಾರಿ ಮಾಹಿತಿ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ
Air India; ಮಂಗಳೂರು – ಅಬುಧಾಬಿ ವಿಮಾನ 12 ತಾಸು ವಿಳಂಬ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.