Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ
Team Udayavani, Apr 25, 2024, 2:01 AM IST
ಮಡಿಕೇರಿ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ 1600 ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ.
ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯುಕ್ತರಾದ ಪೊಲೀಸ್ ಸಿಬಂದಿಗೆ, ಚುನಾವಣಾ ಸಂದರ್ಭ ಕರ್ತವ್ಯ ನಿರ್ವಹಿಸುವ ಬಗ್ಗೆ ಅಗತ್ಯ ಮಾಹಿತಿಗಳನ್ನು ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಅವರು ಮಾತನಾಡಿ, ಈ ಬಾರಿ ಒಬ್ಬರು ಎಸ್‌ಪಿ, ಆರು ಡಿವೈಎಸ್‌ಪಿ, 14, ವೃತ್ತ ನಿರೀಕ್ಷಕರು, 45 ಎಸ್‌ಐ, 59 ಎಎಸ್‌ಐ, 678 ಸಿಬಂದಿ, 280 ಗೃಹರಕ್ಷಕ ದಳದ ಸಿಬಂದಿಯನ್ನು ಬಳಸಿಕೊಳ್ಳಲಾಗುತ್ತಿದೆ ಎಂದರು.
ಈ ಬಾರಿ ಗುಜರಾತ್‌ನ 2 ಕಂಪೆನಿ (180 ಮಂದಿ) ಪೊಲೀಸ್ ಸಿಬಂದಿ, 8 ಕೆಎಸ್‌ಆರ್‌ಪಿ, ಜಿಲ್ಲಾ ಸಶಸ್ತ್ರ ಪೊಲೀಸ್ ದಳವನ್ನು ಬಂದೋಬಸ್ತ್ ಕಾರ್ಯಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
44 ಸೆಕ್ಟರ್ ಮೊಬೈಲ್ ಘಟಕ- ಚುನಾವಣಾ ಹಂತದಲ್ಲಿ ಜಿಲ್ಲೆಯ ಯಾವುದೇ ಮತಗಟ್ಟೆ ಬಳಿಯಲ್ಲಿ ನಡೆಯಬಹುದಾದ ಅಹಿತಕರ ಘಟನೆಗಳನು ನಿಗ್ರಹಿಸುವುದಕ್ಕೆ ಪೂರಕವಾಗಿ 44 ಸೆಕ್ಟರ್ ಮೊಬೈಲ್ ಘಟಕಗಳನ್ನು ಜಿಲ್ಲೆಯಾದ್ಯಂತ ನಿಯೋಜಿಸಲಾಗಿದೆ. ಯಾವುದೇ ವಿಭಾಗದಲ್ಲಿ ಅಹಿತಕರ ಘಟನೆಯ ಸುಳಿವು ದೊರೆತೊಡನೆ ಕ್ಷಿಪ್ರಗತಿಯಲ್ಲಿ ಸ್ಥಳಕ್ಕೆ ತೆರಳಿ ಅದನ್ನು ನಿಗ್ರಹಿಸುವಲ್ಲಿ ಈ ಘಟಕಗಳು ಕಾರ್ಯನಿರ್ವಹಿಸಲಿವೆ. ಇದಕ್ಕೆ ಪೂರಕವಾಗಿ ಜಿಲ್ಲಾಡಳಿತದ ಫ್ಲೆçಯಿಂಗ್ ಸ್ಕ್ವಾಡ್‌ಗಳು ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.
ಅತೀ ಸೂಕ್ಷ್ಮ-ಸೂಕ್ಷ್ಮ ಮತಗಟ್ಟೆಗಳಿಗೆ ಭದ್ರತೆ- ಜಿಲ್ಲೆಯಾದ್ಯಂತ ಈಗಾಗಲೆ ಗುರುತಿಸಲಾಗಿರುವ ಅತೀ ಸೂಕ್ಷ್ಮ ಮತ್ತು ಸೂಕ್ಷ್ಮ ಮತಗಟ್ಟೆಗಳಿಗೆ ಅಗತ್ಯಕ್ಕೆ ತಕ್ಕಂತೆ ಹೆಚ್ಚಿನ ಭದ್ರತೆಯನ್ನು ಕಲ್ಪಿಸಲಾಗುತ್ತದೆ ಎಂದು ಎಸ್‌ಪಿ ಕೆ.ರಾಮರಾಜನ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.