Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Team Udayavani, Apr 25, 2024, 10:24 AM IST

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

ದಾವಣಗೆರೆ: ಜಿಲ್ಲಾ ಉಸ್ತುವಾರಿ ಸಚಿವರು ಅಭಿವೃದ್ಧಿಗಿಂತಲೂ ಅಕ್ರಮ ಮರಳುಗಾರಿಕೆಗೆ ಹೆಚ್ಚು ಒತ್ತು ಕೊಟ್ಟಿದ್ಧಾರೆ ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್‌ ದೂರಿದರು.

ಬುಧವಾರ ಹರಿಹರ ತಾಲೂಕಿನ ಸಾರಥಿ, ಚಿಕ್ಕಬಿದರಿ, ಪಾಮೇನಹಳ್ಳಿ, ದೀಟೂರು ಗ್ರಾಮಗಳಲ್ಲಿ ಪ್ರಚಾರ ನಡೆಸಿದ ಅವರು, ಹರಿಹರ ತಾಲೂಕಿನಲ್ಲಿ ಸಚಿವರ ಅಕ್ರಮ ಮರಗಳುಗಾರಿಕೆ ಬಗ್ಗೆ ಶಾಸಕರಾದ ಬಿ.ಪಿ. ಹರೀಶ್‌ ಅವರು ಧ್ವನಿ ಎತ್ತಿದ್ದಾರೆ. ಇದಕ್ಕಾಗಿ ಸಚಿವರ ಹಿಂಬಾಲಕರು ಶಾಸಕರಿಗೇ ಜೀವ ಬೆದರಿಕೆ ಹಾಕಿದ್ದಾರೆ ಎಂದರೆ ಇನ್ನು ಸಾಮಾನ್ಯ ಜನರ ಪರಿಸ್ಥಿತಿ ಏನು ನೀವೇ ಯೋಚನೆ ಮಾಡಿ. ಇಂತಹವರಿಗೆ ಅಧಿಕಾರ ಕೊಟ್ಟರೆ ನಮ್ಮ-ನಿಮ್ಮ ಬದುಕು ದುಸ್ಥರವಾಗತ್ತೆ. ಅಭಿವೃದ್ಧಿಯೋ, ಅಕ್ರಮವೋ ಎಂಬುದನ್ನು ಜನರೇ ಯೋಚಿಸಬೇಕು. ಈಗ ಚುನಾವಣೆ ಬಂದಿದ್ದು ಜಿಲ್ಲಾ ಉಸ್ತುವಾರಿ ಸಚಿವರು, ಅವರ ಪತ್ನಿ ಇಬ್ಬರೂ ಈಗ ಅಭಿವೃದ್ಧಿ ಜಪ ಮಾಡುತ್ತಿದ್ದಾರೆ. ಅಂತಹವರಿಗೆ ಜನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದರು.

ಮಾಜಿ ಶಾಸಕರಾದ ಎಚ್‌.ಎಸ್‌.ಶಿವಶಂಕರ್‌ ಮತ್ತು ಹಾಲಿ ಶಾಸಕ ಬಿ.ಪಿ.ಹರೀಶ್‌ ಹರಿಹರ ತಾಲೂಕಿನಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ಧಾರೆ. ಸಂಸದ ಜಿ.ಎಂ. ಸಿದ್ದೇಶ್ವರ್‌ ಇಚ್ಛಾಶಕ್ತಿಯಿಂದ ಅಮೃತ್‌ ಭಾರತ್‌ ಸ್ಟೇಷನ್‌ ಯೋಜನೆಯಡಿ ಹರಿಹರದಲ್ಲಿ 25 ಕೋಟಿ ವೆಚ್ಚದಲ್ಲಿ ಸುಸಜ್ಜಿತ ನೂತನ ರೈಲ್ವೆ ನಿಲ್ದಾಣ, ಫ್ಲಾಟ್‌ ಫಾರ್ಮ್ ವಿಸ್ತರಣೆ ನಡೆಯುತ್ತಿದೆ. ಅಮರಾವತಿ ಬಳಿ 28 ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಮಾಡಲಾಗಿದೆ. ಚಿಕ್ಕಜಾಜೂರಿನಿಂದ ಹರಿಹರದವರೆಗೂ 84 ಕೋಟಿ ವೆಚ್ಚದಲ್ಲಿ ರೈಲ್ವೆ ಲೈನ್‌ ವಿದ್ಯುದೀಕರಣ ಮಾಡಲಾಗಿದೆ. ತಾಕತ್ತಿದ್ದರೆ ಹರಿಹರ ತಾಲೂಕಿಗೆ ಜಿಲ್ಲಾ ಉಸ್ತುವಾರಿ ಸಚಿವರ ಕೊಡುಗೆ ಏನು ತಿಳಿಸಲಿ ಎಂದು ಸವಾಲು ಹಾಕಿದರು.

ದೇಶದ ಜನ ಮೂರನೇ ಬಾರಿಗೂ ಮೋದಿ ಅವರೇ ಪ್ರಧಾನಿ ಆಗಬೇಕು ಎಂದು ಬಯಸಿದ್ದಾರೆ. ಲೋಕಸಭಾ ಕ್ಷೇತ್ರದ ಜನ ಕೂಡ ಗಾಯಿತ್ರಿ ಸಿದ್ದೇಶ್ವರ್‌ ಸಂಸದರಾದರೆ ಜಿಲ್ಲೆ ಅಭಿವೃದ್ಧಿ ಆಗುತ್ತದೆ ಎಂದು ನಂಬಿದ್ದಾರೆ. ನೀವು ನನಗೆ ಮತ ಹಾಕಿದರೆ ಅದು ನೇರವಾಗಿ ನರೇಂದ್ರ ಮೋದಿ ಅವರಿಗೆ ಹಾಕಿದಂತೆ. ಮೋದಿ ಅವರು ಮತ್ತೆ ಪ್ರಧಾನಿ ಆಗುವುದು ಶತಸಿದ್ಧ. ದಾವಣಗೆರೆಯಲ್ಲೂ ಬಿಜೆಪಿ ಅಭ್ಯರ್ಥಿ ಗೆಲುವು ಸಾ ಧಿಸಿದರೆ ಕೇಂದ್ರದಿಂದ ಮತ್ತಷ್ಟು ಯೋಜನೆಗಳನ್ನು ಹರಿಹರಕ್ಕೆ ತರಬಹದು. ಪ್ರತಿಯೊಬ್ಬರೂ ಇನ್ನೂ 12 ದಿನ ವಿರಮಿಸದೆ ಕೆಲಸ
ಮಾಡಬೇಕು ಎಂದು ಕರೆ ನೀಡಿದರು.

ಮಾಜಿ ಶಾಸಕ ಎಚ್‌.ಎಸ್‌. ಶಿವಶಂಕರ್‌ ಮಾತನಾಡಿ, ನರೇಂದ್ರ ಮೋದಿ ಅವರನ್ನು ಮತ್ತೂಮ್ಮೆ ಪ್ರಧಾನಿ ಮಾಡಬೇಕು. ದಾವಣಗೆರೆಯಲ್ಲಿ ಗಾಯಿತ್ರಿ ಸಿದ್ದೇಶ್ವರ್‌ 2 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುವರು. ಹರಿಹರ ದಲ್ಲಿ ಅತಿ ಹೆಚ್ಚು ಲೀಡ್‌ ಕೊಡುವ ಮೂಲಕ ಜೆಡಿಎಸ್‌ ಕಾರ್ಯಕರ್ತರು ಎಚ್‌.ಶಿವಪ್ಪ ಅವರ ಶಕ್ತಿ ಏನು ಎಂದು ಕಾಂಗ್ರೆಸ್‌ನವರಿಗೆ ತೋರಿಸಬೇಕು ಎಂದರು.

ಶಾಸಕ ಬಿ.ಪಿ.ಹರೀಶ್‌ ಮಾತನಾಡಿ, ಉಸ್ತುವಾರಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಹರಿಹರಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ. ದಾವಣಗೆರೆಯಿಂದ ಕೂಗಳತೆ ದೂರದಲ್ಲಿರುವ ಹರಿಹರಕ್ಕೆ ವರ್ಷದಲ್ಲಿ ಎಷ್ಟು ಬಾರಿ ಭೇಟಿ ಕೊಟ್ಟಿದ್ದಾರೆ. ಅವರ ಹಿಂಬಾಲಕರನ್ನು ಬಿಟ್ಟು ಅಕ್ರಮ ಮರಳುಗಾರಿಕೆ ಮಾಡಿರುವುದು ಬಿಟ್ಟರೆ ಹರಿಹರಕ್ಕೆ ಅವರ ಕೊಡುಗೆ ಏನು ಎಂದು ಪ್ರಶ್ನಿಸಿದರು.

ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರು ಮನೆ ಮನೆಗೆ ತೆರಳಿ ಕಾಂಗ್ರೆಸ್‌ ಗೂಂಡಾ ವರ್ತನೆ ಬಗ್ಗೆ ಮಾಹಿತಿ ನೀಡಿ, ನಮ್ಮ ಅಭಿವೃದ್ಧಿ ಕೆಲಸಗಳ ವಿವರ ನೀಡಿ ಗಾಯಿತ್ರಿ ಪರ ಮತಯಾಚಿಸಬೇಕು ಎಂದು ಮನವಿ ಮಾಡಿದರು.

ಎಥೆನಾಲ್‌ ಘಟಕ ನಿರ್ಮಾಣಕ್ಕೆ ಕ್ರಮ
ಕರ್ನಾಟಕ ನೀರಾವರಿ ನಿಗಮ ಕಚೇರಿಯನ್ನು ದಾವಣಗೆರೆಗೆ ಸ್ಥಳಾಂತರ ಮಾಡಿಸಲಾಗುವುದು. ನೀರಾವರಿ ನಿಗಮ ದಾವಣಗೆರೆಗೆ ಬಂದರೆ ಕಾಡಾ ಸಭೆಗಳನ್ನು ನಡೆಸಬಹುದು. ಕೊನೆ ಭಾಗದ ಗ್ರಾಮಗಳಿಗೆ ಭದ್ರಾ ನಾಲೆ ನೀರು ಸಮರ್ಪಕವಾಗಿ ಹರಿಸಲು ಸಾಧ್ಯವಾಗುತ್ತದೆ. ಹರಿಹರ ತಾಲೂಕಿನ ಹನಗವಾಡಿ ಬಳಿ 60 ಕೆಎಲ್ಪಿಡಿ ಸಾಮರ್ಥಯದ 960 ಕೋಟಿ ವೆಚ್ಚದ 2 ಜಿ ಎಥೆನಾಲ್‌ ಘಟಕವನ್ನು ಎಂ.ಆರ್‌.ಪಿ.ಎಲ್‌ ಅವರು ನಿರ್ಮಾಣ ಮಾಡಲು ಸಿದ್ಧತೆ ನಡೆಸಿದ್ದಾರೆ. ಮೊದಲ ಆದ್ಯತೆ ಮೇರೆಗೆ ಶೀಘ್ರ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುತ್ತೇನೆ ಎಂದು ಗಾಯಿತ್ರಿ ಸಿದ್ದೇಶ್ವರ್‌ ತಿಳಿಸಿದರು.

ಟಾಪ್ ನ್ಯೂಸ್

Child-care

Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Donald-Trumph

Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ

Ajit Pawar

Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್‌: ಮಹಾಯುತೀಲಿ ಬಿರುಕು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Child-care

Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Child-care

Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.