Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ


Team Udayavani, Apr 25, 2024, 2:11 PM IST

12–uv-fusion

90ರ ದಶಕದಿಂದೀಚೆಗೆ, ಎಲ್ಲೆಡೆ ಸದ್ದಿಲ್ಲದೇ ಕ್ರಮೇಣ ಒಕ್ಕರಿಸತೊಡಗಿದ ಆಧುನಿಕ ಯಾಂತ್ರಿಕೃತ ಬದುಕು, ಜನಸಾಮಾನ್ಯರ ಅರಿವಿನ-ಪರಿಧಿ ತಿಳಿಗೊಳ್ಳುವುದರ ಮೊದಲೇ ಊಹಿಸಲಾರದಷ್ಟು ಮಟ್ಟಿಗೆ ಇಂದು, ಸ್ವತ್ಛಂದ ಹಳ್ಳಿ-ಸೊಬಗಿನ ಕೂಡು-ಕುಟುಂಬದ, ಮೈ-ಮನಸ್ಸು ತುಂಬಿದ, ಪರಿಶುದ್ಧ ಜೀವನ ಪ್ರೀತಿ, ಉತ್ಸಾಹ, ಮಮತೆಯನ್ನು ಇನ್ನಿಲ್ಲವಾಗಿಸಿದೆ ಎನಿಸುತ್ತದೆಯಲ್ಲವೆ?

ಹೇಗೆಂದರೆ, ಕಲ್ಪಿಸಿಕೊಂಡರೂ ಕಣ್ಣೆದುರಿಗೆ ತೆರೆದಿಡುವ ಅಮೂಲ್ಯ ಬದುಕು, ಅದೆಷ್ಟು ಬೇಗ  ದಿಕ್ಕು-ದೆಸೆಯಿಲ್ಲದೆ ಕಣ್ಣು-ಕಟ್ಟಿದ ಸ್ಪರ್ಧೆಗಿಳಿದ ಕುದುರೆಯಂತೆ ಅಲೆಯುವಂತಾಗಿದೆ! ಅರೆಕ್ಷಣ, ಮೈಮನ ಕಸಿವಿಸಿಗೊಳ್ಳುತ್ತೆ!  ಜೀವ ಮರುಗುತ್ತೆ. ಮತ್ತೆ ಮತ್ತೆ  ಆ ಬಾಲ್ಯ, ಹಳ್ಳಿ ಬದುಕನ್ನು ಅರಸಲು ಬಯಸುತ್ತೆ!

ಜನತೆ, ಹಳ್ಳಿಯಲ್ಲಿನ ಗಿಡ-ಮರ, ಪಶು-ಪಕ್ಷಿ, ಹಳ್ಳ- ಕೊಳ್ಳ, ಬೆಟ್ಟ-ಗುಡ್ಡ ಮುಂತಾದ ಪರಿಸರದ ಸಕಲ ಜೀವಿಗಳೊಂದಿಗೆ ಒಂದಾಗಿ ನಲ್ಮೆಯಿಂದ ಪರಿಶುದ್ಧ ಮನದಿ, ಭೂ ತಾಯಿ,  ತಿಳಿನೀಲಿ ಆಗಸ, ಮಳೆ, ಗಾಳಿ, ಬೆಳಕನ್ನು ಇನ್ನಿಲ್ಲದೆ ಅಪ್ಪಿ, ಅತ್ಯಂತ ಖುಷಿಯಿಂದ, ಇರುವ ಪರಿಸ್ಥಿತಿಗೆ ಒಗ್ಗಿ, ಬದುಕು ರೂಪಿಸಿಕೊಂಡು ಜೀವನೋತ್ಸಾಹ ತಳೆಯುತ್ತಿದ್ದರು. ನಿಜ ಹೇಳಬೇಕೆಂದರೆ, ಪರಿಸರವೇ ಪಾಠ; ಭೂ ತಾಯಿಯೇ ಹಾಸಿಗೆ; ಆಗಸವೇ ಹೊದಿಕೆಯಾಗಿ, ದುಡಿದ, ದಣಿವರಿದ ಮನದಿ, ಕಣ್ತುಂಬಿ ನೆಮ್ಮದಿಯ ನಿಟ್ಟುಸಿರುಗೈವ ಕ್ಷಣಗಳು ಅದಾಗಿತ್ತು!

ಹಳ್ಳಿಯಲ್ಲಿನ ಆಟೋಟಗಳು, ತಮಾಷೆಯ ಕ್ಷಣಗಳು,  ಆಟಿಕೆಗಳು, ಹಬ್ಬ-ಹರಿದಿನಗಳು,  ಜಾತ್ರೆ-ಸಂತೆಗಳು, ಒಕ್ಕಲು ಸಮಯದ ಸುಗ್ಗಿಯ ಮಧುರ ಕ್ಷಣಗಳು ಇತ್ಯಾದಿ ಜನತೆಯ ಮುಗ್ಧ ಮನಸ್ಸು ಮತ್ತು  ಹೊಳೆವ ಮುಖದಲ್ಲಿ, ನಿಷ್ಕಲ್ಮಶ ಮಂದಹಾಸ ಮೂಡಿಸಿ, ಬೆಲೆ ಕಟ್ಟಲಾಗದ ಖುಷಿಯ ಕ್ಷಣಗಳನ್ನು ಸದಾ  ಅವರಲ್ಲಿ ಕಂಗೊಳಿಸುತ್ತಿದ್ದವು. ಎಲ್ಲರೂ ದುಡಿವವರು, ಎಲ್ಲರೂ ಭಾಗಿಯಾಗುವವರು. ಎಲ್ಲರೊಳಗೊಂದಾಗಿ ಬಾಳುವವರು; ಎಲ್ಲರಲ್ಲೂ ಧನ್ಯತಾ ಭಾವ; ಆದ ರಣೀಯತೆ, ಪೂಜ್ಯತಾ ಭಾವ ತುಂಬಿತ್ತು! ಅಂತಃಕರಣೆ, ಕರುಣೆ, ಪ್ರೀತಿ-ವಿಶ್ವಾಸ, ತಕ್ಕಮಟ್ಟಿಗೆ ಮಾನವೀಯತೆ ಬದುಕ-ಪ್ರೀತಿ ಹೆಚ್ಚಿಸಿತ್ತು!

ಈಗಾಗಲೇ, ನಾವು ಯಾವ ಸ್ಥಿತಿ ತಲುಪಿದ್ದೇವೆಂದರೆ:  ಶಾಲಾ ರಜೆಯ ದಿನಗಳಲ್ಲಿ, ಈಗಿನಮಕ್ಕಳಿಗೆ ಆ ಕಾಲದ ಹಳ್ಳಿಗಳ ಜೀವನ ಪರಿಚಯಿಸಲು ಗೊಟಗೋಡಿಯ ರಾಕ್‌ ಗಾರ್ಡನ್‌ ಹಾವೇರಿ, ಹೆರಿಟೇಜ್‌ ವಿಲೇಜ್‌ ಮಣಿಪಾಲ, ಅಲ್ಲಲ್ಲಿ ಸಾರ್ವಜನಿಕ ಉದ್ಯಾನವನ, ಹಾಗೂ ಇತರೆ ಕೆಲವು ಮ್ಯೂಸಿಯಮ್‌ ಗಳತ್ತ ಮುಖ ಮಾಡಿಬೇಕೆ ಹೊರತು ನೈಜ ಚಿತ್ರಣ ಪ್ರಸ್ತುತ ಹಳ್ಳಿಗಾಡಿನಲ್ಲೂ ಕಾಣಸಿಗದು! ಸ್ವತಃ ಹಳ್ಳಿಗರೇ ಪರಿತಪಿಸುವ ಸ್ಥಿತಿ.

ಕಾರಣ ಇಷ್ಟೆ: ತಂತ್ರಜ್ಞಾನದ ಆವಿಷ್ಕಾರ ಮತ್ತು ಎಲ್ಲ ಕ್ಷೇತ್ರಗಳಲ್ಲೂ ಹೊಕ್ಕಿರುವ ಅದರ ಗಾಢವಾದ ಛಾಯೆ.  ಇಡೀ “ಪ್ರಪಂಚವೇ ಒಂದು ಹಳ್ಳಿ’ (Global Village) ಯಾಗಿ ಮಾರ್ಪಟ್ಟಿರುವ ಭಾವನೆ. ವಿಶೇಷವಾಗಿ, ದೂರವಾಣಿ, ಇಂಟರ್‌ನೆಟ್‌, ಯುಟ್ಯೂಬ್‌, ನೇರ ಮೆದುಳಿಗೆ ಕೈ ಹಾಕಿರುವ ಸಾಮಾಜಿಕ ಜಾಲತಾಣಗಳ ಡ್ರಗ್ಸ್ ರೀತಿಯ ಮಾನಸಿಕ ಮೋಹ ಬೆಂಬಿಡದೆ ಇಂದಿನ ಆಧುನಿಕ ಜನತೆಯ ಚಿಂತನಾರ್ಹ ಯೋಚನಾ ಶಕ್ತಿ,  ಆರೋಗ್ಯ, ಕೌಟುಂಬಿಕ ಮೌಲ್ಯಗಳು, ಮಾನವೀಯ ಗುಣಗಳು ಹಾಗೂ ಒಟ್ಟಾರೆ ಜೀವನ ಶೈಲಿಯನ್ನೇ ಅಕ್ಷರಶಃ ನುಂಗಿಹಾಕಿವೆ!

ಅಲ್ಲದೆ, ಇದು ಇಂದಿನ ಅನಿವಾರ್ಯವೆಂಬಂತೆ ಕಠೊರ ಸನ್ನಿವೇಶ ಹುಟ್ಟುಹಾಕಿವೆ. ಒಂದೆಡೆ, “ಅತಿಯಾದ ಅಮೃತವೂ ವಿಷ’ವೆನ್ನುವಂತೆ, ಹಾಗೂ ಊಟದಲ್ಲಿ “ರುಚಿಗೆ ತಕ್ಕಷ್ಟು ಉಪ್ಪಿ’ರುವಂತೆ ಹಲವು ಒಳಿತು-ಕೆಡುಕಗಳ ನಡುವೆ  ಎಲ್ಲವೂ ಹಿತಮಿತವಾಗಿ ಬಳಕೆಯಲ್ಲಿದ್ದರೆ ಚೆನ್ನ.ಅಲ್ವೇ? ಮೈ ಮನ ಆರೋಗ್ಯಕರವಾಗಿರುತ್ತೆ; ಜೀವನ ಉತ್ಸಾಹದಿಂದ ಕೂಡಿರುತ್ತೆ.

ಇತ್ತೀಚೆಗೆ ಜಗತ್ತಿನೆಲ್ಲೆಡೆ ಭಾರೀ ಸಂಚಲನ ಸೃಷ್ಟಿಸಿರುವ “ಕೃತಕ ಬುದ್ಧಿಮತ್ತೆ’ (Artificial Intelligence & GI) ಹಾಗೂ “ಬಯೋಚಿಪ್‌’ ತಂತ್ರಜ್ಞಾನಗಳು. ಈ ಎರಡೂ ತಂತ್ರಜ್ಞಾನಗಳು ಬಹುತೇಕ ಮನುಷ್ಯನನ್ನ ಸಹ ಒಂದು ಸರಕಾಗಿ ನೋಡುವ ದೂರದೃಷ್ಟಿ ಹೊಂದಿವೆ ಎಂದರೆ ತಪ್ಪಾಗಲಿಕ್ಕಿಲ್ಲ! ತೀರ

ಇತ್ತೀಚೆಗೆ, ತಂತ್ರಜ್ಞಾನ ಜಗತ್ತಿನ ಹೆಸರಾಂತ ಉದ್ಯಮಿ: ಎಲಾನ್‌ ಮಸ್ಕ್ ತಮ್ಮ “ನ್ಯೂರಾಲಿಂಕ್‌’ (Neuralink) ಸಂಸ್ಥೆಯ ಮೂಲಕ ಪ್ರಪಂಚದ ಮೊಟ್ಟ ಮೊದಲ ಪ್ರಯತ್ನವಾಗಿ ಆರೋಗ್ಯವಂತ ವ್ಯಕ್ತಿಯೊಬ್ಬರ ಮೆದುಳಿನಲ್ಲಿ ಪ್ರಾಯೋಗಿಕ   “ಮೊದಲ ಬಯೋಚಿಪ್‌’ ಅಳವಡಿ ಸಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿದೆ! ಇದುವರೆಗೂ, ಮೊಬೈಲ್‌ ನಲ್ಲಿ ಕೇವಲ “ಮೆಮೊರಿ ಕಾರ್ಡ್‌’ ಬಳಸಿ, ಅದರಲ್ಲಿ ಸಂಗ್ರಹಿಸಿದ  ಮಾಹಿತಿಬೇಕೆಂದಾಗ ಆಲಿ

ಸುವ, ನೋಡುವ ಪರಿಪಾಠದ ಪರಿಚಯವಿದ್ದ ನಮಗೆ, ಎಐ ಹಾಗೂ Biochip ತಂತ್ರಜ್ಞಾನಗಳ ಅವತಾರಗಳು ಊಹೆಗೂ ಮೀರಿದ್ದು ಅನ್ಸುತ್ತೆ ಕೂಡ. ಆಗ,ಜಗತ್ತು ಹೇಗಿರಬೇಡ? ತಂತ್ರಜ್ಞಾನ ತೊರೆದು ಮನುಷ್ಯ ಜೀವನ ಕಲ್ಪಿಸಿಕೊಳ್ಳಲಾರದ ಪರಿಸ್ಥಿತಿ ನಿರ್ಮಾಣವಾಗಿದೆ. ಅದು, ಕೇವಲ ಮನುಷ್ಯನ ಅವಶ್ಯಕತೆಗಳಿಗೆ ಪೂರಕವಾಗಿರಬೇಕೆ ಹೊರತು, ಆತನನ್ನು ಆಳುವ ಸ್ಥಿತಿ ತಲುಪಬಾರದು!

ಮುಂದಿನ ದಿನಗಳಲ್ಲಿ, ಮನುಷ್ಯ ಎದುರಿಸಬಹುದಾದ ಭಯಾನಕ ತಂತ್ರಜ್ಞಾನ ಸಂಕೋಲೆಗಳನ್ನು ಕುರಿತು ಚರ್ಚಿಸುವ ಅಗತ್ಯ ಇಂದಿನ ತುರ್ತು ಅನಿವಾರ್ಯ. ಆದರೆ, ಎಲ್ಲವೂ ಸಲೀಸಾಗಿ ಕೈಗೆಟುಕುವ ಇಂದಿನ ದಿನಗಳಲಿ, ಅತಿಯಾಗಿ ಮಿತಿಮೀರಿರುವ ಅನುಕೂಲಗಳು ಅಮೂಲ್ಯ ಖುಷಿಯ ಕ್ಷಣಗಳನ್ನು ಎಂದಿಗೂ ನೀಡಲಾರವು. ಬದಲಿಗೆ, ಪ್ರತಿಷ್ಠೆಯ ಹೆಮ್ಮರಗಳಾಗಿ, ಜನತೆ ನಾಲ್ಕು ದಿನದ ಈ ಬಾಳಲಿ ಏನೋ ಬಹುದೊಡ್ಡ ಸಾಧನೆಗೈದವರಂತೆ, ಯಂತ್ರ

ಮಾನವರಂತೆ ಬೀಗುವವರೆ!!?

ಮೂಲಭೂತವಾಗಿ, ಮಾನವ ಸಹಿತ ಸಕಲ ಜೀವ-ಸಂಕುಲವೂ  ವಾಸಯೋಗ್ಯ ಸ್ವತ್ಛಂದ ಭೂಮಿ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಭೂಮಿಯಲ್ಲಿ, ಮಣ್ಣಿನ ಫಲವತ್ತತೆ ಹಾಗೂ ನೀರು ಸಂರಕ್ಷಿಸದೆ, ಗಿಡ-ಮರ ಬೆಳೆಸದೆ, ಹಸುರು ಹೆಚ್ಚಿಸದೆ, ಮತ್ತು ಪರಿಸರ ಸಮತೋಲನ ಕಾಪಾಡದೆ, ಕೇವಲ ತಂತ್ರಜ್ಞಾನ ತಲೆಯಲಿ ಹೊತ್ತು, ಮನುಷ್ಯ ಉತ್ತಮ ಆಹಾರ, ಆರೋಗ್ಯ ಮತ್ತು ಜೀವನ ಕಟ್ಟಿಕೊಳ್ಳಲು ಸಾಧ್ಯವಿಲ್ಲ.

ಸಮರೋಪಾದಿಯಲ್ಲಿ, ಜನತೆ ಸ್ವ ಇಚ್ಛೆಯಿಂದ ಹಳ್ಳಿ-ಹಳ್ಳಿಗಳಿಂದ, ನಗರಗಳು, ಬೆಟ್ಟ-ಗುಡ್ಡಗಳಲ್ಲೆಡೆ ಬೃಹತ್‌ ಸಂಖ್ಯೆಯಲ್ಲಿ ಸಸಿಗಳನ್ನ ನೆಟ್ಟು, ಪಾಲನೆ- ಪೋಷಣೆ ಗೈಯ್ಯುವ ಚಳವಳಿ ರೂಪದ ಆಂದೋಲನ ದೇಶಾದ್ಯಂತ ಅತ್ಯಂತ ತ್ವರಿತವಾಗಿ ಕೈಗೂಡಬೇಕು. ಈ ನಿಟ್ಟಿನಲ್ಲಿ,  ಎಲ್ಲರೂ ಕೈಜೋಡಿಸಬೇಕು.

 -ಡಾ| ಚಂದ್ರಪ್ಪ ಎಚ್‌.

ಸಹಾಯಕ ಪ್ರಾಧ್ಯಾಪಕರು,

ಸರಕಾರಿ ವಿಜ್ಞಾನ ಕಾಲೇಜು, ಚಿತ್ರದುರ್ಗ

ಟಾಪ್ ನ್ಯೂಸ್

ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನಗಳು, ರೈಲು ಸಂಚಾರದ ಮೇಲೆ ಪರಿಣಾಮ

Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚುರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

17-bus

Emotions: ಭಾವನೆಗಳ ಬಸ್‌ ನಿಲ್ದಾಣ

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

12-uv-fusion

Success: ಯಶಸ್ವಿ ಜೀವನಕ್ಕೆ ಸೂತ್ರಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನಗಳು, ರೈಲು ಸಂಚಾರದ ಮೇಲೆ ಪರಿಣಾಮ

Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Court-1

Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.