Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
ಮತದಾನದ ಮುನ್ನಾ ದಿನ ರಾತ್ರಿ ಸಾಗಾಟ
Team Udayavani, Apr 25, 2024, 11:03 PM IST
ಮೈಸೂರು: ಮಂಡ್ಯದಿಂದ ರಮ್ಮನಹಳ್ಳಿ ಮಾರ್ಗ ಮೂಲಕ ಮೈಸೂರಿಗೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ನಗದನ್ನು ಎಸ್.ಎಸ್.ಟಿ ತಂಡ ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
ಮತದಾನಕ್ಕೆ ಒಂದು ದಿನ ಬಾಕಿ ಇರುವಂತೆ ಗುರುವಾರ ರಾತ್ರಿ 8.30 ರ ಸಮಯದಲ್ಲಿ ಮಂಡ್ಯ – ಮೈಸೂರು ಸಂಪರ್ಕ ಕಲ್ಪಿಸುವ ಗ್ರಾಮೀಣ ಭಾಗದ ರಸ್ತೆಯಾದ ರಮ್ಮನಹಳ್ಳಿಯಲ್ಲಿ ಅನುಮಾನಸ್ಪದವಾಗಿ ಬಂದ ಕಾರನ್ನು ಚೆಕ್ ಪೋಸ್ಟ್ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಈ ವೇಳೆ ದಾಖಲೆ ಇಲ್ಲದ 89 ಲಕ್ಷ ರೂ.ನಗದು ಪತ್ತೆಯಾಗಿದೆ.
ಹಣ ಮುಟ್ಟುಗೋಲು ಹಾಕಿಕೊಂಡಿರುವ ಅಧಿಕಾರಿಗಳು ಜಿಲ್ಲಾ ಖಜಾನೆಗೆ ರವಾನಿಸಿದ್ದು, ಈ ಸಂಬಂಧ ಆದಾಯ ತೆರಿಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆದರೆ, ಹಣ ಯಾರದ್ದು ಎಂಬುದು ತಿಳಿದುಬಂದಿಲ್ಲ ಎಂದು ಮೈಸೂರು ತಾಲೂಕು ತಹಶೀಲ್ದಾರ್ ಮಹೇಶ್ ಕುಮಾರ್ ತಿಳಿಸಿದ್ದಾರೆ.ಕಾರ್ಯಾಚರಣೆ ಎಸ್.ಎಸ್.ಟಿ. ಮುಖ್ಯಸ್ಥ ನವೀನ್ ನೇತೃತ್ವದಲ್ಲಿ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.