D. K. Shivakumar: ಡೆತ್, ಬರ್ತ್ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ
Team Udayavani, Apr 25, 2024, 11:40 PM IST
ಬೆಂಗಳೂರು: “ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಡೆತ್ ಟ್ಯಾಕ್ಸೂ ಇಲ್ಲ; ಬರ್ತ್ ಟ್ಯಾಕ್ಸೂ ಹಾಕಲ್ಲ. ನಮ್ಮ ಪ್ರಣಾಳಿಕೆಯಲ್ಲಿರುವ ಅಂಶಗಳು ಮಾತ್ರ ಪಕ್ಷದ ನಿಲುವು. ಅದರಿಂದಾಚೆಗಿನ ಅಂಶಗಳಿಗೂ ಪಕ್ಷಕ್ಕೂ ಸಂಬಂಧವಿಲ್ಲ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.
ಸದಾಶಿವ ನಗರದ ನಿವಾಸದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಯಾಮ್ ಪಿತ್ರೋಡಾ ಅವರದ್ದು ವೈಯಕ್ತಿಕ ಅಭಿಪ್ರಾಯವೇ ಹೊರತು ಪಕ್ಷದ ಅಭಿಪ್ರಾಯ ಅಲ್ಲ. ಈ ಬಗ್ಗೆ ಪಕ್ಷದಲ್ಲಿ ಚರ್ಚೆ ಆಗಿಲ್ಲ. ಇಂತಹ ಹೇಳಿಕೆಗಳನ್ನು ನಾವು ಒಪ್ಪುವುದೂ ಇಲ್ಲ ಎಂದರು.
ಪಿತ್ರೋಡಾ ಹೇಳಿಕೆ ಬಗ್ಗೆ ಈಗಾಗಲೇ ಜೈರಾಮ್ ರಮೇಶ್ ಪಕ್ಷದ ಪರವಾಗಿ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ಡೆತ್ ಟ್ಯಾಕ್ಸೂ, ಬರ್ತ್ ಟ್ಯಾಕ್ಸೂ ಇಲ್ಲ. ಈ ದೇಶದ ಪರಂಪರೆ, ಪದ್ಧತಿ ಮುಂದುವರಿಯಲಿದೆ ಎಂದರು.
ಮೋದಿ ಪ್ರಧಾನಿ ಆದಾಗ 2,800 ರೂ. ಇದ್ದ ಒಂದು ಗ್ರಾಂ ಚಿನ್ನ ಈಗ 7,500 ರೂ. ಆಗಿದೆ. ನಮ್ಮ ಮಹಿಳೆಯರು ಮಂಗಳಸೂತ್ರ ಹಾಕಲಾಗದಂತೆ ಬಿಜೆಪಿಯವರು ಬೆಲೆ ಏರಿಕೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಐಟಿ ಅಧಿಕಾರಿಗಳಿಂದ ಬಿಜೆಪಿ ಏಜೆಂಟರಂತೆ ಕೆಲಸ :
ಐಟಿ ಅಧಿಕಾರಿಗಳು ಕೇವಲ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿ ದಾಳಿ ಮಾಡುತ್ತಿದ್ದು, ನಮ್ಮ ನಾಯಕರನ್ನು ಹೆದರಿಸುತ್ತಿದ್ದಾರೆ. ಅವರ ಬಳಿ ಸಿಕ್ಕ ಹಣ ಕಾಂಗ್ರೆಸ್ ಪಕ್ಷ ಹಾಗೂ ಡಿ.ಕೆ. ಶಿವಕುಮಾರ್ ಅವರ ಹಣ ಎಂದು ಹೇಳಲು ಒತ್ತಾಯಿಸುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಆರೋಪಿಸಿದರು. ಇಡೀ ದಿನ ಅವರನ್ನು ಕೂರಿಸಿಕೊಂಡು ಆ ನಾಯಕರು ಚುನಾವಣೆ ಕೆಲಸ ಮಾಡದಂತೆ ತಡೆಯುತ್ತಿದ್ದಾರೆ. ಬಿಜೆಪಿ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆಂದು ದೂರಿದ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಹೆಚ್ಚಿನ ದಾಳಿ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.