Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ
Team Udayavani, Apr 26, 2024, 6:00 AM IST
ಹೊಸದಿಲ್ಲಿ: ಕಾಂಗ್ರೆಸ್ ಪ್ರಣಾಳಿಕೆ “ನ್ಯಾಯ ಪತ್ರ’ ಕುರಿತು ವಿವರಿಸಲು ಸಮಯ ಕೋರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
ಕಾಂಗ್ರೆಸ್ ಪ್ರಣಾಳಿಕೆ ಕುರಿತು ನಿಮ್ಮ ಸಲಹೆಗಾರರು ನಿಮಗೆ ತಪ್ಪು ಮಾಹಿತಿ ನೀಡಿದ್ದಾರೆ. ಪ್ರಣಾಳಿಕೆಯಲ್ಲಿ ಇಲ್ಲದ್ದನ್ನೆಲ್ಲ ಹೇಳಿಕೊಟ್ಟಿದ್ದಾರೆ. ಎಲ್ಲ ವರ್ಗದ, ಜಾತಿಗಳು ಮತ್ತು ಸಮುದಾಯದ ಯುವಜನ, ಮಹಿಳೆಯರು, ರೈತರು, ಶ್ರಮಿಕರು ಮತ್ತು ಸೌಲಭ್ಯವಂಚಿತರಿಗೆ ನ್ಯಾಯ ಒದಗಿಸುವುದೇ ನ್ಯಾಯಪತ್ರದ ಗುರಿಯಾಗಿದೆ. ಆದರೆ ಅದರಿಂದ ಕೆಲವೇ ಪದಗಳನ್ನು ಎತ್ತಿ ಹೊಸ ವಾದ ಸೃಷ್ಟಿಸಿ ಕೋಮು ವಿಭಜಿಸುವುದು ನಿಮಗೆ ಅಭ್ಯಾಸವಾಗಿದೆ.
ಇದು ಪ್ರಧಾನಿ ಹುದ್ದೆಗೆ ಶೋಭೆಯಲ್ಲ ಎಂದು 2 ಪುಟಗಳ ಪತ್ರದಲ್ಲಿ ಖರ್ಗೆ ತಿಳಿಸಿದ್ದಾರೆ. ಮೊದಲ ಹಂತದ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆ ಆಗಿರುವ ವಿಚಾರ ಗೊತ್ತಾಗುತ್ತಿದ್ದಂತೆ ನೀವು ಮತ್ತು ನಿಮ್ಮ ಪಕ್ಷದ ನಾಯಕರು ಬಳಸುತ್ತಿರುವ ಭಾಷೆಯು ಆಶ್ಚರ್ಯ ತರಿ ಸಿಲ್ಲ. ನಿಮ್ಮ ಸೂಟ್-ಬೂಟ್‌ನ ಸರಕಾರವು ಕೇವಲ ಉದ್ಯೋಗಪತಿಗಳಿಗೆ ಕೆಲಸ ಮಾಡುತ್ತಿದೆ. ಅವರ ತೆರಿಗೆಯನ್ನು ಕಡಿಮೆ ಮಾಡಿದ್ದರೆ, ಸಂಬಳದಾರರು ಹೆಚ್ಚಿನ ತರಿಗೆಯನ್ನು ಪಾವತಿಸುತ್ತಿದ್ದಾರೆಂದು ಖರ್ಗೆ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.