ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Team Udayavani, Apr 27, 2024, 10:45 AM IST

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಮುಂಬಯಿ: ಮುಂಬೈನ ಬಾಂದ್ರಾದಲ್ಲಿರುವ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ವಿರುದ್ಧ ಲುಕ್‌ಔಟ್ ನೊಟೀಸ್ ಹೊರಡಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿ ಪ್ರಸ್ತುತ ಗುಜರಾತ್‌ನ ಸಬರಮತಿ ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯ್ ಅವರನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಳ್ಳುವ ಸಾಧ್ಯತೆಯಿದೆ ಮತ್ತು ಈ ಪ್ರಕರಣದಲ್ಲಿ ಕಟ್ಟುನಿಟ್ಟಾದ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಎಂಸಿಒಸಿಎ) ಯನ್ನು ಜಾರಿಗೊಳಿಸುವ ಬಗ್ಗೆಯೂ ಚಿಂತನೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು.

ಗುಂಡಿನ ದಾಳಿಯ ಹೊಣೆಯನ್ನು ಅನ್ಮೋಲ್ ಬಿಷ್ಣೋಯ್ ವಹಿಸಿಕೊಂಡಿದ್ದರು ಈ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಲುಕ್ ಔಟ್ ನೊಟೀಸ್ ಹೊರಡಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

ಈ ಪ್ರಕರಣದಲ್ಲಿ ಅನ್ಮೋಲ್ ಮತ್ತು ಲಾರೆನ್ಸ್ ಬಿಷ್ಣೋಯ್ ಅವರನ್ನು ಪ್ರಮುಖ ಆರೋಪಿಗಳೆಂದು ಹೆಸರಿಸಲಾಗಿದೆ. ಅನ್ಮೋಲ್ ಬಿಷ್ಣೋಯ್ ಕೆನಡಾದಿಂದ ಅಮೆರಿಕಾಕ್ಕೆ ಪ್ರಯಾಣ ಬೆಳೆಸಿದ್ದಾನೆ ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.

ಏಪ್ರಿಲ್ 14 ರ ಮುಂಜಾನೆ ಸಲ್ಮಾನ್ ಖಾನ್ ಅವರ ಬಾಂದ್ರಾದಲ್ಲಿನ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ ಬಳಿ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಗುಂಡು ಹಾರಿಸಿದ ಹಿನ್ನೆಲೆಯಲ್ಲಿ ಪೊಲೀಸರು ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 307 (ಕೊಲೆಗೆ ಯತ್ನ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಬಿಹಾರದ ನಿವಾಸಿಗಳಾದ ವಿಕ್ಕಿ ಗುಪ್ತಾ (24) ಮತ್ತು ಸಾಗರ್ ಪಾಲ್ (21) ಸೋನು ಕುಮಾರ್ ಸುಭಾಷ್ ಚಂದರ್ ಬಿಷ್ಣೋಯ್ (37) ಮತ್ತು ಅನುಜ್ ಥಾಪನ್ (32) ಸೇರಿ ನಾಲ್ವರನ್ನು ಈಗಾಗಲೇ ಬಂಧಿಸಲಾಗಿದೆ.

ಇದನ್ನೂ ಓದಿ: Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

ಟಾಪ್ ನ್ಯೂಸ್

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.