Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Team Udayavani, Apr 27, 2024, 4:43 PM IST
ಹುಬ್ಬಳ್ಳಿ: ಅಭಿವೃದ್ಧಿ ಕಾರ್ಯಗಳ ಮೇಲೆ ಜನರ ಮತಯಾಚನೆ ಮಾಡಬೇಕು. ಅದು ಬಿಟ್ಟು ಮಣ್ಣಿಗೆ ಬನ್ನಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿರುವುದು ಜನರನ್ನು ಭಾವನಾತ್ಮಕವಾಗಿ ಬ್ಲಾಕ್‌ಮೇಲ್ ಮಾಡುವುದಾಗಿದೆ. ಇಂತಹ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐವತ್ತು ವರ್ಷದ ಸುದೀರ್ಘ ರಾಜಕಾರಣದಲ್ಲಿ 10 ವರ್ಷ ಬಿಟ್ಟರೆ ಉಳಿದ 40 ವರ್ಷ ಆಡಳಿತ ಹಾಗೂ ವಿರೋಧ ಪಕ್ಷದಲ್ಲಿದ್ದರೂ ಉತ್ತಮ ಸ್ಥಾನದಲ್ಲಿದ್ದರು. ಅತಿ ಹೆಚ್ಚು ಅನುದಾನವನ್ನು ಆ ಭಾಗಗಳಿಗೆ ಕೊಟ್ಟಿದ್ದೇವೆ. ಈಗ ಹಿಂದುಳಿದಿದೆ ಎನ್ನುವುದರಲ್ಲಿ ಏನು ಅರ್ಥವಿಲ್ಲ. ಅವರ ಆಡಳಿತ ಅವಧಿಯಲ್ಲಿ ಏನು ಅಭಿವೃದ್ಧಿ ಮಾಡಿಲ್ಲ ಹೀಗಾಗಿ ಈ ಭಾವನಾತ್ಮಕ ದಾಳವನ್ನು ಬಳಸುತ್ತಿದ್ದಾರೆ. ಇದಕ್ಕೆ ಜನರು ಮರುಳಾಗುವುದಿಲ್ಲ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆಡಳಿತವನ್ನು ಜನರು ನೇರವಾಗಿ ನೋಡಿದ್ದಾರೆ. ಆಧಾರದ ಮೇಲೆ ಅಲ್ಲಿ ನಮ್ಮ ಅಭ್ಯರ್ಥಿ ಜಾಧವವರು ಗೆಲ್ಲುತ್ತಾರೆ ಎಂದರು.
ಆಸ್ತಿ ಮರು ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್ಸಿಗೆ ಪ್ರಶ್ನೆ ಮಾಡುತ್ತೇನೆ. ಎಲ್ಲ ಮುಸ್ಲಿಂ ಜಾತಿಗಳನ್ನು ಹಿಂದುಳಿದ ವರ್ಗಕ್ಕೆ ಸೇರಿಸಿದರೆ ಸಾಮಾನ್ಯವಾಗಿ ಎಲ್ಲಾ ಸೌಲಭ್ಯಗಳು ಇವರಿಗೆ ಸೇರುತ್ತವೆ. ನಿಮ್ಮ ಪ್ರಕಾರ ಇದು ಆಸ್ತಿ ಹಂಚಿಕೆ ಅಲ್ಲವೇ? ಕಾಂಗ್ರೆಸ್ ಪಕ್ಷವು ಹಿಂದುಳಿದ ವರ್ಗಗಳಿಗೆ ಬಹುದೊಡ್ಡ ಅನ್ಯಾಯವನ್ನು ಮಾಡುತ್ತಿದೆ. ಹೀಗಾಗಿ ರಾಷ್ಟ್ರೀಯ ಹಿಂದುಳಿದ ಆಯೋಗ ಇವರಿಗೆ ನೋಟಿಸ್ ಕೊಟ್ಟಿದೆ ಎಂದರು.
ಬರ ಪರಿಹಾರವನ್ನು ಕೊಡುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿರಲಿಲ್ಲ. ಆದರೆ ಇವರು ಕೋರ್ಟ್ ಗೆ ಹೋಗಿದ್ದು ಅವರ ರಾಜಕೀಯ ಹಿತಾಸಕ್ತಿಗೋಸ್ಕರ. ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಕೂಡ ಕೇಂದ್ರದಿಂದ ಪರಿಹಾರ ವಿಳಂಬವಾಗಿತ್ತು. ಆದರೆ ಅಂದಿನ ರಾಜ್ಯ ಸರ್ಕಾರ ಜನರಿಗೆ ಪರಿಹಾರ ವಿತರಣೆ ಮಾಡಿತ್ತು. ಕೇಂದ್ರದ ವಿರುದ್ಧ ಕೋರ್ಟ್‌ಗೆ ಹೋಗುವುದು ಇಂಡಿ ಒಕ್ಕೂಟದ ಮಿತ್ರ ಪಕ್ಷಗಳಿಗೆ ಒಂದು ಕೆಲಸವಾಗಿಬಿಟ್ಟಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ
MUST WATCH
ಹೊಸ ಸೇರ್ಪಡೆ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.