Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
2016ರಲ್ಲಿ ಭಾರತ ಸರ್ಕಾರ ನಿಕಮ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.
Team Udayavani, Apr 27, 2024, 5:46 PM IST
ಮುಂಬೈ:26/11 ಮುಂಬೈ ಭಯೋತ್ಪಾದನಾ ದಾಳಿಯ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದ ಉಜ್ವಲ್ ನಿಕಮ್ ಅವರನ್ನು ಭಾರತೀಯ ಜನತಾ ಪಕ್ಷ ಮುಂಬೈ ಉತ್ತರ ಸೆಂಟ್ರಲ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಿದೆ.
ಇದನ್ನೂ ಓದಿ:Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
ಮುಂಬೈ ಉತ್ತರ ಸೆಂಟ್ರಲ್ ಕ್ಷೇತ್ರದ ಹಾಲಿ ಸಂಸದೆ ಪೂನಮ್ ಮಹಾಜನ್ ಅವರನ್ನು ಕೈಬಿಟ್ಟು, ಹಿರಿಯ ವಕೀಲ ಉಜ್ವಲ್ ನಿಕಮ್ ಅವರಿಗೆ ಟಿಕೆಟ್ ನೀಡಿ ಬಿಜೆಪಿ ತಂತ್ರಗಾರಿಕೆ ರೂಪಿಸಿದೆ.
ಮಾಜಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಉಜ್ವಲ್ ನಿಕಮ್ ಅವರು ಈ ಕ್ಷೇತ್ರದಲ್ಲಿ ಕಾಂಗ್ರೆಸ್ ನ ವರ್ಷಾ ಗಾಯಕ್ವಾಡ್ ಅವರನ್ನು ಎದುರಿಸಲಿದ್ದಾರೆ.
26/11ರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಕಮ್ ಅವರು ಮುಂಬೈ ದಾಳಿ ವಿಚಾರಣೆ ವೇಳೆ ರಾಜ್ಯದ ಪರವಾಗಿ ವಾದ ಮಂಡಿಸಿದ್ದರು. 2016ರಲ್ಲಿ ಭಾರತ ಸರ್ಕಾರ ನಿಕಮ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.
ಉಜ್ವಲ್ ನಿಕಮ್ ಅವರು ಜಲಗಾಂವ್ ನಲ್ಲಿ ಜಿಲ್ಲಾ ಪ್ರಾಸಿಕ್ಯೂಟರ್ ಆಗಿ ತಮ್ಮ ವೃತ್ತಿ ಜೀವನ ಆರಂಭಿಸಿದ್ದರು. ತಮ್ಮ 30 ವರ್ಷಗಳ ವೃತ್ತಿ ಜೀವನದಲ್ಲಿ 628 ಜೀವಾವಧಿ ಶಿಕ್ಷೆ, 37 ಮರಣದಂಡನೆ ಶಿಕ್ಷೆ ಕೊಡಿಸಿದ ಹೆಗ್ಗಳಿಕೆ ಇವರದ್ದಾಗಿದೆ. (ಮರಣದಂಡನೆ ಶಿಕ್ಷೆ ನಂತರ ಜೀವಾವಧಿಗೆ ಇಳಿಕೆಯಾದ ಪ್ರಕರಣಗಳೂ ಸೇರಿವೆ.)
“ನಾನು ರಾಜಕೀಯವನ್ನು ಹೋರಾಟ ಎಂದು ಪರಿಗಣಿಸುವುದಿಲ್ಲ, ರಾಜಕೀಯದ ಮೂಲಕ ಸಮಾಜ ಸೇವೆ ಮಾಡಬಹುದು, ರಾಜಕೀಯದ ಮೂಲಕ ರಾಷ್ಟ್ರ ಸೇವೆ ಮಾಡಬಹುದು. ನಾನು ರಾಜಕೀಯದ ಮೂಲಕ ರಾಷ್ಟ್ರ ಸೇವೆ ಮಾಡುವ ಅವಕಾಶವನ್ನು ಪಡೆದುಕೊಂಡಿದ್ದೇನೆ. ಹಾಗಾಗಿ ನನ್ನ ಅದೃಷ್ಟವೆಂದು ಪರಿಗಣಿಸುತ್ತೇನೆ” ಎಂದು ಉಜ್ವಲ್ ನಿಕಮ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ..ಮೀನುಗಾರಿಕಾ ದೋಣಿಯಲ್ಲಿದ್ದ 6 ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.