Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Team Udayavani, Apr 27, 2024, 6:40 PM IST

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಯಾದಗಿರಿ: ದೇಶದ ಸಂಪತ್ತನ್ನು, ಹಣವನ್ನು ಕಾಂಗ್ರೆಸ್ ಲೂಟಿ ಮಾಡಿದೆ. ಅನೇಕ ಹಗರಣಗಳಿಗೆ ಕಾರಣವಾದ ಭಾರತೀಯ ಕಾಂಗ್ರೆಸ್ ಪಕ್ಷವು ತನ್ನ ಅಧಿಕಾರ ಕಳೆದುಕೊಂಡು ಹತ್ತು ವರ್ಷಗಳಲ್ಲಿ ನೆಲಕಚ್ಚಿದೆ‌ ಎಂದು ಶಾಸಕ ಬಸನಗೌಡ ಯತ್ನಾಳ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದರು.

ಶಹಾಪುರ ನಗರದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ ರಾಯಚೂರ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರ ರೋಡ್ ಶೋನಲ್ಲಿ ಭಾಗವಹಿಸಿದ ಅವರು, ಭ್ರಷ್ಟಾಚಾರ ಮುಕ್ತ, ಭಯೋತ್ಪಾಧನಾ ಮುಕ್ತ ಕಳಂಕ ರಹಿತ ಆಡಳಿತ ಮತ್ತು ದೇಶದ ಉನ್ನತೀಕರಣಕ್ಕೆ ಶ್ರಮಿಸುವ ಪ್ರಧಾನಿ ನರೇಂದ್ರ ಮೋದಿಜೀಯವರನ್ನು ಮತ್ತೊಮ್ಮೆ ನಾವು ಪ್ರಧಾನಿ ಮಾಡಬೇಕಿದೆ. ಆ ನಿಟ್ಟಿನಲ್ಲಿ ದೇಶದ ಸುಭದ್ರತೆಗಾಗಿ, ಏಳ್ಗೆಗಾಗಿ ಬಿಜೆಪಿಗೆ ಮತ ನೀಡುವ ಮೂಲಕ ಸಹಕರಿಸಬೇಕಿದೆ ಎಂದರು.

ಕಾಂಗ್ರೆಸ್ ಗ್ಯಾರಂಟಿ ಹೆಸರಿನಡಿ ಪ್ರಚಾರ ನಡೆಸುತ್ತಿದ್ದು, ಕಾಂಗ್ರೆಸ್ ಒಂದು ಕೈಯಿಂದ ದುಡ್ಡು ನೀಡಿದಂತೆ ಮಾಡಿ ಇನ್ನೊಂದಡೆ ದುಪ್ಪಟ್ಟು ಹಣ ದೋಚುವ ಕೆಲಸ ಮಾಡುತ್ತಿದೆ. ಮೋದಿಜೀ ಅವರು ವರ್ಷಕ್ಕೆ 6 ಸಾವಿರ ಧನ ಸಹಾಯ ಸೇರಿದಂತೆ ಯಡಿಯೂರಪ್ಪ ಸಿಎಂ ಇದ್ದಾಗ ರಾಜ್ಯದಿಂದ 4 ಸಾವಿರ ಸೇರಿ ವರ್ಷಕ್ಕೆ 11 ಸಾವಿರ ರೂ. ರೈತರ ಅಕೌಂಟ್‍ಗೆ ಹಾಕಲಾಗುತಿತ್ತು. ಆದರೆ ಸಿದ್ದರಾಮಯ್ಯ ಬಂದು ರಾಜ್ಯದ 4 ಸಾವಿರ ತೆಗೆದು ಹಾಕಿದ್ದಾರೆ ಎಂದು ಗುಡುಗಿದರು.

ರೈತರ ಹಿತಾಸಕ್ತಿ ಕಾಪಾಡದ ಕಾಂಗ್ರೆಸ್ ಸುಳ್ಳು ಪಳ್ಳು ಯೋಜನೆ ರೂಪಿಸಿ ರಾಜ್ಯದ ಬೊಕ್ಕಸ ಖಾಲಿ ಚೊಂಬು ಮಾಡಿಟ್ಟಿದೆ. ಮೋದಿಜೀ ಖಾಲಿ ಚೊಂಬು ಕೊಟ್ಟಿದ್ದಾರೆ ಎನ್ನುವ ಸಿದ್ದರಾಮಯ್ಯ, ಖರ್ಗೆ ಮತ್ತು ಬಂಡೆಗೆ ಈ ಬಾರಿ ಬಿಜೆಪಿ ನಾಲ್ಕು ನೂರಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ ನವರ ಕೈಗೆ ಚೊಂಬು ಕೊಟ್ಟು ಕಳಿಸಬೇಕಿದೆ ಎಂದು ಟೀಕಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಅಮೀನರಡ್ಡಿ ಯಾಳಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರು ಕಾಮಾ, ತಾಲೂಕು ಮಂಡಲ ಅಧ್ಯಕ್ಷ ರಾಜೂಗೌಡ ಉಕ್ಕಿನಾಳ, ನಗರ ಅಧ್ಯಕ್ಷ ದೇವಿಂದ್ರಪ್ಪ ಕೋನೇರ, ಪ್ರಮುಖ ಹಿರಿಯರಾದ ಡಾ.ಚಂದ್ರಶೇಖರ ಸುಬೇದಾರ, ಶಿವರಾಜ ದೇಶಮುಖ, ಬಸವರಾಜ ವಿಭೂತಿಹಳ್ಳಿ ಇತರರಿದ್ದರು.

ಟಾಪ್ ನ್ಯೂಸ್

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.