Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Team Udayavani, Apr 27, 2024, 6:50 PM IST
ಮುಂಬಯಿ: ʼಹನುಮಾನ್ʼ ಸಿನಿಮಾದ ಮೂಲಕ ಸದ್ದು ಮಾಡಿದ ನಿರ್ದೇಶಕ ಪ್ರಶಾಂತ್ ವರ್ಮಾ ಅವರ ಮುಂದಿನ ಸಿನಿಮಾದ ಬಗ್ಗೆ ಕುತೂಹಲ ಹೆಚ್ಚಾಗಿದೆ.
ಪ್ರಶಾಂತ್ ವರ್ಮಾ ಬಾಲಿವುಡ್ ಚಿತ್ರರಂಗದ ಸ್ಟಾರ್ ನಟನೊಬ್ಬನ ಜೊತೆ ಸಿನಿಮಾ ಮಾಡಲಿದ್ದಾರೆ ಎನ್ನುವ ಮಾತುಗಳು ಕಳೆದ ಕೆಲ ದಿನಗಳಿಂದ ಟಾಲಿವುಡ್ ವಲಯದಲ್ಲಿ ಹರಿದಾಡುತ್ತಿದೆ.
ಬಾಲಿವುಡ್ ನಟ ರಣ್ವೀರ್ ಸಿಂಗ್ ಜೊತೆ ʼಹನುಮಾನ್ʼ ನಿರ್ದೇಶಕ ಪ್ರಶಾಂತ್ ಸಿನಿಮಾ ಮಾಡಲಿದ್ದಾರೆ ಎನ್ನುವ ಮಾತುಗಳು ಹರಿದಾಡಿದೆ.
ಮೂಲಗಳ ಪ್ರಕಾರ ರಣ್ವೀರ್ ಸಿಂಗ್ ಕೂಡ ಪ್ರಶಾಂತ್ ಅವರೊಂದಿಗೆ ಕೆಲಸ ಮಾಡಲು ಆಸಕ್ತಿ ತೋರಿಸಿದ್ದಾರೆ ಎನ್ನಲಾಗಿದೆ.
“ಈ ಬಗ್ಗೆ ರಣ್ವೀರ್ ಅವರೊಂದಿಗೆ ಪ್ರಶಾಂತ್ ಮಾತನಾಡಿದ್ದು, ಆರಂಭಿಕವಾಗಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ʼಹನುಮಾನ್ʼ ಬಳಿಕ ಅವರು ಇದೇ ಪ್ರಾಜೆಕ್ಟ್ ನಲ್ಲಿ ಕೆಲಸ ಮಾಡಲಿದ್ದಾರೆ. ಇದು ಬಹುತೇಕ ಖಚಿತವಾಗಿದೆ ಆದರೆ ಇನ್ನೂ ಯಾವುದನ್ನೂ ಅಂತಿಮಗೊಳಿಸಲಾಗಿಲ್ಲ. ಮೈತ್ರಿ ಮೂವಿ ಮೇಕರ್ಸ್ ಸಿನಿಮಾವನ್ನು ನಿರ್ಮಾಣ ಮಾಡಲಿದೆ” ಎಂದು ʼಹಿಂದೂಸ್ತಾನ್ ಟೈಮ್ಸ್ʼ ವರದಿ ತಿಳಿಸಿದೆ.
ಇತ್ತೀಚೆಗೆ ಪ್ರಶಾಂತ್ ವರ್ಮಾ ʼಹನುಮಾನ್ʼ ಸೀಕ್ವೆಲ್ ಎಂದೇ ಹೇಳಲಾಗುತ್ತಿರುವ ʼಜೈ ಹನುಮಾನ್ʼ ಸಿನಿಮಾದ ಸ್ಕ್ರಿಪ್ಟ್ ಪೂಜೆ ಮಾಡಿದ್ದರು. ಇದೇ ಸಿನಿಮಾದಲ್ಲಿ ರಣ್ವೀರ್ ನಟಿಸಲಿದ್ದಾರಾ ಅಥವಾ ಬೇರೆ ಸಿನಿಮಾದಲ್ಲಿ ನಟಿಸುತ್ತಾರೆಯೇ ಎನ್ನುವುದು ಇದುವರೆಗೆ ಅಧಿಕೃತವಾಗಿಲ್ಲ.
ʼಹನುಮಾನ್ʼ ಚಿತ್ರದಲ್ಲಿ ತೇಜ ಸಜ್ಜಾ, ಅಮೃತಾ ಅಯ್ಯರ್, ವರಲಕ್ಷ್ಮಿ ಶರತ್ಕುಮಾರ್ ,ವಿನಯ್ ರೈ ಮುಖ್ಯ ಭೂಮಿಕೆಯಲ್ಲಿದ್ದರು. ಇದು ವಿಶ್ವಾದ್ಯಂತ ಬಾಕ್ಸ್ ಆಫೀಸ್ನಲ್ಲಿ 100 ಕೋಟಿ ರೂ.ಗೂ ಹೆಚ್ಚು ಗಳಿಕೆ ಕಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.