Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ನೇಹಾ ಕೊಲೆ ಪ್ರಕರಣ: ಸಿಎಂ, ಗೃಹ ಸಚಿವರ ಹೇಳಿಕೆ ಸರಿಯಲ್ಲ

Team Udayavani, Apr 27, 2024, 11:44 PM IST

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ಧಾರವಾಡ: ನೇಹಾ ಹಿರೇಮಠ ಕೊಲೆ ಪ್ರಕರಣದಲ್ಲಿ ರಾಜ್ಯದ ಗೃಹ ಸಚಿವರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯರ ಹೇಳಿಕೆಗಳು ಸರಿಯಾಗಿ ಇರಲಿಲ್ಲ. ತನಿಖೆ ನಡೆಸುವ ಮುಂಚೆಯೇ ನೀಡುವ ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ ಎಂದು ನಿವೃತ್ತ ಹಿರಿಯ ಪೊಲೀಸ್‌ ಅಧಿಕಾರಿ ಜ್ಯೋತಿ ಪ್ರಕಾಶ ಮಿರ್ಜಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಗತ್ಯ ತನಿಖೆ ನಡೆಯುವವರೆಗೂ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ಬಗ್ಗೆ ಮಾತನಾಡಬಾರದು. ರಾಜ್ಯದ ಪೊಲೀಸರೇ ಸಮರ್ಥರಿದ್ದು, ಇಲ್ಲಿನ ಯಾವುದೇ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವ ಅಗತ್ಯವಿಲ್ಲ. ಇಂತಹ ಪ್ರಕರಣಗಳು ನಡೆದಾಗ ಸೂಕ್ಷ್ಮತೆ ಅರಿತು ಸರಕಾರಗಳು ಹೇಳಿಕೆ ನೀಡಬೇಕಾಗುತ್ತದೆ. ಕರ್ನಾಟಕ ಪೊಲೀಸ್‌ ಇಂದಿಗೂ ಶಕ್ತಿಶಾಲಿಯಾಗಿದೆ. ನೇಹಾ ಪ್ರಕರಣ ನಿಷ್ಪಕ್ಷಪಾತ ತನಿಖೆ ನಡೆದು ಸತ್ಯ ಹೊರಗೆ ಬರುವವರೆಗೂ ಎಲ್ಲರೂ ಕಾಯಬೇಕು ಎಂದು ಹೇಳಿದರು.

ಜೆಡಿಎಸ್‌-ಬಿಜೆಪಿ ಮೈತ್ರಿ ರಾಜ್ಯದಲ್ಲಿ ಅತ್ಯಂತ ಫಲಪ್ರದವಾಗಿದ್ದು, 28 ಸ್ಥಾನಗಳೂ ಮೈತ್ರಿ ಪಾಲಾಗಲಿವೆ. ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಧಾರವಾಡ ಕ್ಷೇತ್ರಕ್ಕೆ ಸಾಕಷ್ಟು ಕೆಲಸ ಮಾಡಿದ್ದಾರೆ. ಅವರು ಗೆದ್ದರೆ ಅಭಿವೃದ್ಧಿ ಯೋಜನೆಗಳಿಗೆ ಅನುಕೂಲವಾಗಲಿದೆ. ಲಿಂಗಾಯತರಿಗೆ ಪ್ರಹ್ಲಾದ ಜೋಶಿ ಅವರು ಅನ್ಯಾಯ ಮಾಡಿದ್ದಾರೆ ಎಂಬುದು ಸಾಮಾನ್ಯ ಆರೋಪ. ಆದರೆ, ವ್ಯಕ್ತಿಗತವಾಗಿ ಯಾವ ರಾಜಕಾರಣಿಗಳೂ ಈ ಬಗ್ಗೆ ಹೇಳಿಲ್ಲ ಎಂದರು.

ನೇಹಾ ಹಂತಕನ ರಕ್ತದ ಮಾದರಿ ಪಡೆದ ಸಿಐಡಿ
ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಹಂತಕ ಫಯಾಜ್‌ನ ರಕ್ತದ ಮಾದರಿಯನ್ನು ಸಿಐಡಿ ತನಿಖಾಧಿಕಾರಿಗಳು ಶನಿವಾರ ನ್ಯಾಯಾಧೀಶರ ಸಮ್ಮುಖದಲ್ಲಿ ಸಂಗ್ರಹಣೆ ಮಾಡಿದರು. ಪ್ರಕರಣದ ತನಿಖೆ ಸಂದರ್ಭ ಅಧಿಕಾರಿಗಳಿಗೆ ಕೃತ್ಯ ನಡೆದ ಸ್ಥಳದಲ್ಲಿ ಹಾಗೂ ಆಪಾದಿತ ಕೊಲೆ ಮಾಡಲು ಬಳಸಿದ್ದ ಚಾಕುವಿನ ಮೇಲೆ ಎರಡು ರಕ್ತದ ಗುಂಪುಗಳು ಕಂಡುಬಂದ ಹಿನ್ನೆಲೆಯಲ್ಲಿ ಅದನ್ನು ದೃಢಪಡಿಸಿಕೊಳ್ಳಲು ಫಯಾಜ್‌ನ ಡಿಎನ್‌ಎ ಪರೀಕ್ಷೆ ನಡೆಸಬೇಕಾಗುತ್ತದೆ. ಅದಕ್ಕೆ ಅನುಮತಿ ನೀಡಬೇಕೆಂದು ತನಿಖಾಧಿಕಾರಿಗಳು ಇಲ್ಲಿನ ಒಂದನೇ ಹೆಚ್ಚುವರಿ ದಿವಾಣಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅದನ್ನು ನ್ಯಾಯಾಧೀಶರು ಪರಿಗಣಿಸಿದ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಆಪಾದಿತನನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದರು. ಸಿಐಡಿ ಅಧಿಕಾರಿಗಳು ಫಯಾಜ್‌ನ ಡಿಎನ್‌ಎ ಪರೀಕ್ಷೆ ಜತೆಗೆ ಬೇರೆ ಬೇರೆ ಆಯಾಮಗಳಲ್ಲಿ ತನಿಖೆ ಚುರುಕುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ. ಸಿಐಡಿ ಅಧಿಕಾರಿಗಳು ನ್ಯಾಯಾಲಯದ ಅನುಮತಿ ಮೇರೆಗೆ ಫಯಾಜ್‌ನನ್ನು ಹೆಚ್ಚಿನ ವಿಚಾರಣೆಗಾಗಿ ಎ. 29ರವರೆಗೆ ತಮ್ಮ ವಶಕ್ಕೆ ಪಡೆದಿದ್ದಾರೆ.

ಟಾಪ್ ನ್ಯೂಸ್

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Dr G Parameshwar: ಸೆನ್‌ ಠಾಣೆಗಳಿಗೂ ಎಸ್ಪಿ ಕೇಡರ್‌: ಗೃಹ ಸಚಿವ

ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

8

Alnavar: ಸ್ನಾನಕ್ಕೆಂದು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು

Successful Operation: ಅಪಘಾತದಲ್ಲಿ ಎದೆಗೆ ಹೊಕ್ಕ ಪೈಪ್‌-ಯುವಕನಿಗೆ ಮರುಜನ್ಮ

Successful Operation: ಅಪಘಾತದಲ್ಲಿ ಎದೆಗೆ ಹೊಕ್ಕ ಪೈಪ್‌-ಯುವಕನಿಗೆ ಮರುಜನ್ಮ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

9

Puttur: ಅಮರ್‌ ಜವಾನ್‌ ಜ್ಯೋತಿ ಸ್ಮಾರಕಕ್ಕೆ ದುಷ್ಕರ್ಮಿಗಳ ದಾಳಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

5

ಅಮೆಜಾನ್‌ನಲ್ಲಿ ಶೀಘ್ರ 14,000 ಉದ್ಯೋಗ ಕಡಿತ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.