Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ


Team Udayavani, Apr 28, 2024, 12:20 AM IST

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

ರಾಜ್ಯದಲ್ಲಿ 2ನೇ ಹಂತದ ಚುನಾವಣೆ ಪ್ರಕ್ರಿಯೆಗೆ ಚಟುವಟಿಕೆ ಬಿರುಸುಗೊಳ್ಳುತ್ತಿರುವ ಬೆನ್ನಲ್ಲೇ, ಕೇಂದ್ರ ಸರಕಾರ 3,454 ಕೋಟಿ ರೂ. ಬರ ಪರಿಹಾರ ನೆರವನ್ನು ರಾಜ್ಯ ಸರಕಾರಕ್ಕೆ ಬಿಡುಗಡೆ ಮಾಡಿದೆ. ಆದರೆ ಕೇಂದ್ರದ ಈ ಪರಿಹಾರ ಆನೆ ಹೊಟ್ಟೆಗೆ ಅರೆ ಕಾಸಿನ ಮಜ್ಜಿಗೆ’ಎಂದು ಆರೋಪಿಸಿರುವ ಕಾಂಗ್ರೆಸ್‌, ರವಿವಾರ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಸಜ್ಜಾಗಿದೆ. ಇದರ ನಡುವೆಯೇ ಪರಿಹಾರ ಬಿಡುಗಡೆಯ ಕ್ರೆಡಿಟ್‌ ಪಡೆಯುವುದಕ್ಕಾಗಿ ಬಿಜೆಪಿ ಹಾಗೂ ಕಾಂಗ್ರೆಸ್‌ ನಾಯಕರ ಮಧ್ಯೆ ಟಾಕ್‌ ವಾರ್‌ ಪ್ರಾರಂಭವಾಗಿದೆ. ಬರಗಾಲದಿಂದ ತತ್ತರಿಸಿದ್ದ ರಾಜ್ಯದ ಜನತೆಗೆ ಪ್ರಧಾನಿ ಮೋದಿ ನೇತೃತ್ವದ ಸರಕಾರ ಪರಿಹಾರ ನೀಡಿದೆ. ಇದರಲ್ಲಿ ಕಾಂಗ್ರೆಸ್‌ ಸರಕಾರದ ಯಾವುದೇ ಪಾತ್ರವಿಲ್ಲ ಎಂದು ಬಿಜೆಪಿ ನಾಯಕರು ಕೇಂದ್ರ ಸರಕಾರ ಹಾಗೂ ಪ್ರಧಾನಿ ಮೋದಿ ಪರ ಸಮರ್ಥನೆಯಲ್ಲಿ ತೊಡಗಿದ್ದಾರೆ.

ಅಧಿಕಾರಿಗಳ ಜತೆ ಚರ್ಚಿಸಿ ಮುಂದಿನ ಕ್ರಮ
ಕಲಬುರಗಿ/ಬಾಗಲಕೋಟೆ: ರಾಜ್ಯ ಸರಕಾರ ಸಲ್ಲಿಸಿದ ಮನವಿಯ ಕಾಲು ಭಾಗದಷ್ಟೂ ಬರ ಪರಿ ಹಾರ ವನ್ನು ಕೇಂದ್ರ ನೀಡಿಲ್ಲ. ಈ ಬಗ್ಗೆ ಮತ್ತೊಮ್ಮೆ ಪ್ರತಿಭಟನೆ ನಡೆಸಲಾಗುವುದು. ಅ ಧಿಕಾರಿಗಳ ಜತೆ ಚರ್ಚಿಸಿ ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿ, ರಾಜ್ಯದಲ್ಲಿ ಭೀಕರ ಬರ ಬಿದ್ದರೂ ಮೋದಿ ನೇತೃತ್ವದ ಕೇಂದ್ರ ಸರಕಾರ, ರಾಜ್ಯಕ್ಕೆ ನಯಾಪೈಸೆ ಕೊಡಲಿಲ್ಲ. ಇದರ ವಿರುದ್ಧ ನಾವು ಸುಪ್ರಿಂ ಕೋರ್ಟ್‌ಗೆ ಹೋಗಿದ್ದೇವು. ಕೋರ್ಟ್‌ ನಿರ್ದೇ ಶನದ ಮೇರೆಗೆ ಈಗ ಪರಿಹಾರ ಕೊಟ್ಟಿದ್ದು, ಅದು ಎನ್‌ಡಿಆರ್‌ಎಫ್‌ ನಿಯಮಾವಳಿ ಪ್ರಕಾರ ನಾವು ಕೇಳಿದ ನಾಲ್ಕನೇ ಭಾಗವೂ ಇಲ್ಲ ಎಂದು ಹೇಳಿದರು. ಕಳೆದ ಡಿ. 19ರಂದು ಪ್ರಧಾನಿ ಮೋದಿಯವರನ್ನು ದಿಲ್ಲಿ ಯಲ್ಲಿ ಭೇಟಿಯಾಗಿ 18,172 ಕೋಟಿ ರೂ. ಪರಿಹಾರ ಕೋರಲಾಗಿತ್ತು. ಅದಕ್ಕೆ ಅವರು ಸಂಬಂಧಪಟ್ಟವರಿಗೆ ತಿಳಿಸುವುದಾಗಿ ಹೇಳಿದ್ದರು. ಮರುದಿನ ಗೃಹ ಸಚಿವರನ್ನು ಭೇಟಿ ಮಾಡಿದಾಗ ಡಿ. 23ಕ್ಕೆ ಉನ್ನತ ಮಟ್ಟದ ಸಮಿತಿ ಸಭೆ ಕರೆದು ತೀರ್ಮಾನ ಮಾಡುವುದಾಗಿ ತಿಳಿಸಿದ್ದರು. ಆದರೆ ಹಾಗೆ ಮಾಡಲಿಲ್ಲ. ಹೀಗಾಗಿ ರಾಜ್ಯ ಸರಕಾರ ಅನಿವಾರ್ಯವಾಗಿ ಸುಪ್ರೀಂಕೋರ್ಟ್‌ ಮೊರೆ ಹೋಗಬೇಕಾಯಿತು. ಈಗ ಕೋರ್ಟ್‌ ನಿರ್ದೇಶನ ನೀಡಿದ ಅನಂತರ ತೀರಾ ಕಡಿಮೆ ಪರಿಹಾರ ಕೊಟ್ಟಿದ್ದಾರೆ ಎಂದು ವಿವರಿಸಿದರು.

ಪರಿಹಾರ ಸಾಲದು, ಕಾನೂನು ಹೋರಾಟ
ಬೆಂಗಳೂರು: ರಾಜ್ಯ ಕೇಳಿದ್ದ ಪರಿಹಾರ ಮೊತ್ತದಲ್ಲಿ ಅತ್ಯಂತ ಕಡಿಮೆ ಪ್ರಮಾಣವನ್ನು ಕೇಂದ್ರ ಪರಿಹಾರವಾಗಿ ಘೋಷಿಸಿದೆ. ಇದು ಆನೆ ಹೊಟ್ಟೆಗೆ ಮೂರು ಕಾಸಿನ ಮಜ್ಜಿಗೆ ಕೊಟ್ಟಂತಾಗಿದೆ. ನಮ್ಮ ರಾಜ್ಯಕ್ಕೆ ಬರಬೇಕಾದ ಪರಿಹಾರ ಮೊತ್ತ ಪಡೆಯಲು ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಘೋಷಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಖಂಡಿತಾ ಕಾನೂನು ಹೋರಾಟ ಮುಂದುವರಿಯುತ್ತದೆ. ನಾವು ಭಿಕ್ಷೆ ಕೇಳುತ್ತಿಲ್ಲ. ಇದು ನಮ್ಮ ಹಕ್ಕು, ಅದನ್ನು ಕೇಳುತ್ತಿದ್ದೇವೆ. ಇದನ್ನು ನೀಡುವುದು ಕೇಂದ್ರದ ಕರ್ತವ್ಯ. ನ್ಯಾಯಾಲಯ ಹಾಗೂ ಜನರ ಮುಂದೆ ನಮ್ಮ ಹೋರಾಟ ಮುಂದುವರಿಯಲಿದೆ ಎಂದರು. ಅಂದಾಜು 35 ಸಾವಿರ ಕೋಟಿ ನಷ್ಟದಲ್ಲಿ 18 ಸಾವಿರ ಕೋಟಿ ಕೇಳಿ¨ªೆವು. ನಾವು ಕೇಳಿದ್ದು ಶೇ.50 ಮಾತ್ರ. ಆದರೂ ಅವರು ಕಡಿಮೆ ಪರಿಹಾರ ನೀಡಿದ್ದಾರೆ. ನಾವು ವರದಿ ಕೊಟ್ಟಿದ್ದು ಬಹಳ ಹಿಂದೆ. ಅದಾದ ಅನಂತರವೂ ರಾಜ್ಯಕ್ಕೆ ಹೆಚ್ಚಿನ ನಷ್ಟವಾಗಿದೆ ಎಂದರು. ಸುಪ್ರೀಂ ಕೋರ್ಟ್‌ ಮಧ್ಯಪ್ರವೇಶದ ಅನಂತರ ಕೇಂದ್ರ 3,454 ಕೋಟಿ ಘೋಷಿಸಿದ್ದು ಇದು ಯಾವಾಗ ನಮ್ಮ ಖಾತೆಗೆ ಬರುತ್ತದೆಯೋ ಗೊತ್ತಿಲ್ಲ ಎಂದರು.

ಎಚ್‌.ಡಿ. ಕುಮಾರಸ್ವಾಮಿ ನಾಡದ್ರೋಹಿ
ಕೇಂದ್ರ ಸರಕಾರ ಬಿಡುಗಡೆ ಮಾಡಿರುವ ಬರ ಪರಿಹಾರ ಮೊತ್ತ ಸಾಕು ಎಂದು ಹೇಳಿರುವ ಮಾಜಿ ಸಿಎಂ ಕುಮಾರಸ್ವಾಮಿ ನಾಡದ್ರೋಹಿ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರದ ಹಣ ರಾಜ್ಯಕ್ಕೆ ಇನ್ನೂ ಬಂದಿಲ್ಲ. ಆದರೂ ಬಿಜೆಪಿ ನಾಯಕರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಈ ಮಧ್ಯೆ ಕುಮಾರಸ್ವಾಮಿ ಅವರು ಈ ಮೊತ್ತ ಸಾಕು ಎಂದಿದ್ದಾರೆ. ಇದು ರಾಜ್ಯಕ್ಕೆ ಬರಬೇಕಾದ ಪರಿಹಾರ ಮೊತ್ತವೇ ಹೊರತು, ಇಷ್ಟು ಸಾಕು ಎನ್ನಲು ಇದು ಅವರ ಮನೆ ಆಸ್ತಿಯಲ್ಲ, ಇಂತಹ ಹೇಳಿಕೆ ನೀಡಿರುವ ಕುಮಾರಸ್ವಾಮಿ ನಾಡ ದ್ರೋಹಿ ಎಂದು ಕಟುವಾಗಿ ಟೀಕಿಸಿದರು.

ಇವರು ಕೇಳಿದಷ್ಟು ಹಣ ನೀಡಲು ಸಾಧ್ಯವೇ?
ಬೆಂಗಳೂರು: ಬರ ನಿರ್ವಹಣೆಯಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫ‌ಲವಾಗಿದೆ. ತಮ್ಮ ತಪ್ಪು ಮುಚ್ಚಿಟ್ಟುಕೊಳ್ಳಲು ಇವರು ಸದಾ ಕೇಂದ್ರ ಸರಕಾರದ ಮೇಲೆ ಟೀಕೆ ಮಾಡುತ್ತಿದ್ದಾರೆ. ಬರದಿಂದ ನೊಂದಿರುವ ಜನರಿಗೆ ಸರಕಾರ ಏನು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತ ನಾಡಿ, ಹಣ ಬಿಡುಗಡೆ ಮಾಡುವಾಗ ಎಲ್ಲ ಅಂಶಗಳನ್ನು ಕೇಂದ್ರ ಸರಕಾರ ಪರಿಗಣನೆಗೆ ತೆಗೆದುಕೊಂಡಿರುತ್ತದೆ. ಎನ್‌ಡಿಆರ್‌ಎಫ್ ನಿಧಿ ಬಿಡುಗಡೆಗೆ ನೀತಿ ನಿಯಮಗಳಿವೆ. ಇವರು ಕೇಳಿದಷ್ಟು ಹಣ ಕೊಡಲು ಸಾಧ್ಯವೇ? 15ನೇ ಹಣಕಾಸಿನ ಆಯೋಗದ ಶಿಫಾರಸಿನ ಹಿನ್ನೆಲೆಯಲ್ಲಿ ಹಣ ಬರುತ್ತದೆ ಎಂದು ಹೇಳಿದರು.

ಕೇಂದ್ರ ಸರಕಾರ ರಾಜ್ಯಕ್ಕೆ 3,454 ಕೋಟಿ ರೂ. ಪರಿಹಾರ ನೀಡಿದೆ. ಪರಿಹಾರ ಕಡಿಮೆ ಬಂದಿದೆ ಎಂದಾದರೆ ಕೇಳಲಿ, ಅದು ಬಿಟ್ಟು ರಾಜಕೀಯ ಮಾಡಿಕೊಂಡಿದ್ದರೆ ಉಪಯೋಗವೇನು? ಎಂದು ಟೀಕಿಸಿದರು. ರಾಜ್ಯದಲ್ಲಿ ತೀವ್ರ ಬರವಿದೆ, ಅದಕ್ಕೆ ರಾಜ್ಯ ಸರಕಾರ ಏನು ಮಾಡಿದೆ? 2000 ರೂ. ಕೊಡುತ್ತೇವೆ ಎಂದಿದ್ದರು. ಆ ಹಣ ಯಾರಿಗೆ ಹೋಗಿದೆ? ಎಷ್ಟು ಜನಕ್ಕೆ ಹಣತಲುಪಿದೆ? ಆ 2,000 ರೂ.ನಲ್ಲಿ ಕೇಂದ್ರ ಸರಕಸರದ ಹಣ ಸೇರಿದೆ. ಅದನ್ನು ರಾಜ್ಯ ಸರಕಾರ ಹೇಳಬೇಕಲ್ಲವೇ? ಎಂದು ಪ್ರಶ್ನಿಸಿದರು.

ಪರಿಹಾರ: ಸರಕಾರಕ್ಕೆ ಅಧಿಕೃತ ಪತ್ರ ಬಂದಿಲ್ಲ
ಬೆಂಗಳೂರು: ಎನ್‌ಡಿಆರ್‌ಎಫ್ ಮಾನದಂಡಗಳ ಪ್ರಕಾರ ರಾಜ್ಯಕ್ಕೆ 18,172 ಕೋಟಿ ರೂ. ಕೊಡಬೇಕಿದ್ದ ಕೇಂದ್ರ ಸರಕಾರ, 3,498 ಕೋಟಿ ರೂ. ಮಾತ್ರ ಘೋಷಣೆ ಮಾಡಿದೆ. ಆದರೆ, ಇದುವರೆಗೆ ಕೇಂದ್ರ ಹಣಕಾಸು ಇಲಾಖೆಯಿಂದ ರಾಜ್ಯ ಸರಕಾರಕ್ಕೆ ಈ ಸಂಬಂಧ ಯಾವುದೇ ಅಧಿಕೃತ ಪತ್ರ ಬಂದಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬರದ ವಿಚಾರದಲ್ಲಿ ರಾಜ್ಯದ ರೈತರ ಬೆನ್ನಿಗೆ ನಿಲ್ಲಬೇಕಿದ್ದ ಕೇಂದ್ರ ಸರಕಾರ, ಶೇ.20ಕ್ಕಿಂತ ಕಡಿಮೆ ಪರಿಹಾರ ಘೋಷಣೆ ಮಾಡುವ ಮೂಲಕ ರಾಜ್ಯದ ವಿರುದ್ಧ ಮಲತಾಯಿ ಧೋರಣೆ ಮುಂದುವರಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

subharamaya-Swamiji

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.