Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು
Team Udayavani, Apr 28, 2024, 1:04 AM IST
ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ ನರೇಂದ್ರ ಮೋದಿಯನ್ನು ಪ್ರಧಾನಿ ಮಾಡುವುದೇ ವಧೂವರರಿಗೆ ನೀಡುವ ಉಡುಗೊರೆ’ ಎಂದು ದಾಖಲಿಸಿರುವುದಕ್ಕೆ ವರನ ವಿರುದ್ದ ನೀತಿ ಸಂಹಿತೆ ಜಾರಿ ನಿಗಾ ತಂಡದ ಅಧಿಕಾರಿಗಳು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಕಡಬ ತಾಲೂಕು ಆಲಂತಾಯ ಗ್ರಾಮದ ಶಿವಾರು ಶಿವಪ್ಪ ಗೌಡ ಅವರ ಮಗ ಶಿವಪ್ರಸಾದ್ ಯಾನೆ ರವಿ ಅವರ ವಿವಾಹವು ಕಡಬ ತಾಲೂಕು ಹಳೆನೇರಂಕಿ ಗ್ರಾಮದ ಕೊಳಂಬೆ ಬಾಬು ಗೌಡರ ಮಗಳು ಪ್ರಮೀಳಾ ಕೆ ಅವರೊಂದಿಗೆ ಎ. 18ರಂದು ಗೋಳಿತೊಟ್ಟು ಸಿದ್ದಿವಿನಾಯಕ ಕಲಾ ಮಂದಿರದಲ್ಲಿ ಜರಗಿತ್ತು. ವಿವಾಹದ ಅಂಗವಾಗಿ ಸಿದ್ದಪಡಿಸಲಾದ ಆಮಂತ್ರಣ ಪತ್ರವನ್ನು ಮಾರ್ಚ್ 1ರಂದು ಮುದ್ರಿಸಲಾಗಿದ್ದು, ಈ ಆಮಂತ್ರಣ ಪತ್ರದಲ್ಲಿ “ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿ ಮಾಡುವುದೇ ನೀವು ನಮಗೆ ನೀಡುವ ಉಡುಗೊರೆ’ ಎಂದು ಶಿವಪ್ರಸಾದ್ ಅವರು ಉಲ್ಲೇಖಿಸಿದ್ದರು.
ಈ ಬಗ್ಗೆ ಮಾಹಿತಿ ಪಡೆದುಕೊಂಡ ಚುನಾವಣ ನೀತಿ ಸಂಹಿತೆ ಜಾರಿ ನಿಗಾ ತಂಡದ ಅಧಿಕಾರಿಗಳು ಎಪ್ರಿಲ್ 14ರಂದು ವರನ ಮನೆಗೆ ಭೇಟಿ ನೀಡಿ ವಿಚಾರಿಸಿದಾಗ, ತಾನು ಮಾರ್ಚ್ 1ರಂದೇ 800 ಆಮಂತ್ರಣ ಪತ್ರವನ್ನು ಮುದ್ರಿಸಿದ್ದು, ಅದರಲ್ಲಿ ಹತ್ತು ಆಮಂತ್ರಣ ಪತ್ರ ಹೊರತುಪಡಿಸಿ ಎಲ್ಲವನ್ನೂ ಹಂಚಲಾಗಿದೆ. ಚುನಾವಣ ನೀತಿ ಸಂಹಿತೆ ಜಾರಿಯಾಗುವ ಮೊದಲೇ ಆಮಂತ್ರಣ ಪತ್ರವನ್ನು ಮುದ್ರಿಸಿ, ವಿತರಿಸಲಾಗಿದ್ದು ಇದು ಚುನಾವಣ ನೀತಿ ಸಂಹಿತೆಯ ಉಲ್ಲಂಘನೆಯಾಗಿರುವುದಿಲ್ಲ. ಪ್ರಧಾನಿ ಮೋದಿಯ ಮೇಲಿನ ಪ್ರೀತಿ ಹಾಗೂ ರಾಷ್ಟ್ರದ ಮೇಲಿನ ಕಾಳಜಿಯಿಂದ ಇದನ್ನು ಉಲ್ಲೇಖೀಸಲಾಗಿದೆಯೇ ವಿನಃ ಕಾನೂನನ್ನು ಉಲ್ಲಂ ಸುವ ಬೇರಾವುದೇ ಉದ್ದೇಶವನ್ನು ಹೊಂದಿರುವುದಿಲ್ಲ ಎಂದು ಲಿಖಿತವಾಗಿ ಮನವಿ ಸಲ್ಲಿಸಿದ್ದರು. ಬಳಿಕ ಎ.18ರಂದು ವಿವಾಹ ಸಾಂಗವಾಗಿ ನೆರವೇರಿದ್ದು, ಎ.26ರ ಚುನಾವಣೆಯೂ ಮುಗಿದ ಬಳಿಕ ಅಧಿಕಾರಿಗಳು ಪೊಲೀಸ್ ಇಲಾಖೆಗೆ ದೂರು ಸಲ್ಲಿಸಿದ್ದು, ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶನಿವಾರದಂದು ಆಮಂತ್ರಣ ಪತ್ರಿಕೆ ಮುದ್ರಣ ಮಾಡಿದ ಸಂಸ್ಥೆಯ ಮಾಲಕರನ್ನು ಕರೆಯಿಸಿ ಮಹಜರು ಪ್ರಕ್ರಿಯೆಯನ್ನು ನಡೆಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.