PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
Team Udayavani, Apr 28, 2024, 5:39 PM IST
ಬೆಳಗಾವಿ : ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೆಲ್ಲಾ ಪ್ರಧಾನಿ ಮೋದಿ ಭಯಾನಕ ಸುಳ್ಳು ಹೇಳಿ ಹೋಗುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಭಾನುವಾರ ಕಿಡಿ ಕಾರಿದ್ದಾರೆ.
ಉಗಾರಖುರ್ದದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರ ನಡೆದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಹೆಣ್ಣುಮಕ್ಕಳ ತಾಳಿ, ಕೈಬಳೆ ಬಗ್ಗೆ ಸುಳ್ಳು ಹೇಳಿಕೊಂಡು ತಿರುಗೋ ಮೋದಿಯಿಂದ ಪ್ರಧಾನಿ ಹುದ್ದೆಗೆ ಮರ್ಯಾದೆ ಬರುವುದಿಲ್ಲ’ ಎಂದರು.
ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಆಚರಣೆಗೆ ಆದೇಶಿಸಿದ್ದು ನಾವು. ಬೊಮ್ಮಾಯಿ ಮಾಡ್ಲಿಲ್ಲ, ಯಡಿಯೂರಪ್ಪ ಮಾಡ್ಲಿಲ್ಲ. ನಾವು ಯಾವತ್ತೂ ಶಿವಾಜಿ ಮಹಾರಾಜರನ್ನು ಅವಮಾನಿಸಿಲ್ಲ ಎಂದು ತಿರುಗೇಟು ನೀಡಿದರು.
ಈಗ ಮೋದಿ ಹಿಂದುಳಿದ ಜಾತಿ ಸಮುದಾಯಗಳನ್ನು ಮುಸ್ಲಿಮರ ವಿರುದ್ಧ ಎತ್ತಿಕಟ್ಟಲು ಭಯಾನಕ ಸುಳ್ಳು ಸೃಷ್ಟಿಸಿದ್ದಾರೆ. ಹಿಂದುಳಿದವರ ಮೀಸಲಾತಿ ಕಿತ್ತು ಮುಸ್ಲಿಮರಿಗೆ ಕೊಡುತ್ತಾರೆ ಎನ್ನುವ ಭಯಾನಕ ಸುಳ್ಳು ಹೇಳಿದ ಮೋದಿಯವರಿಗೆ ನಾಚಿಕೆ ಇಲ್ಲ. ಕಾಂಗ್ರೆಸ್ಸಿವರು ಜನರ ಬದುಕಿನ ಸಂಕಷ್ಟಗಳನ್ನು ಕಡಿಮೆ ಮಾಡಲು ಕಾರ್ಯಕ್ರಮ ರೂಪಿಸಿ ಜಾರಿ ಮಾಡಿದ್ದೇವೆ. ನುಡಿದಂತೆ ನಡೆದಿದ್ದೇವೆ. ಜನರಿಗೆ ಕೊಟ್ಟ ಮಾತನ್ನು ಈಡೇರಿಸಿದ ನೈತಿಕತೆಯಿಂದ ನಾವು ನಿಮ್ಮ ಮುಂದೆ ಬಂದು ಮತ ಕೇಳುತ್ತಿದ್ದೇವೆ ಎಂದರು.
ಸ್ವಾಮಿನಾಥನ್ ವರದಿಯಂತೆ ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಜಾರಿ ಆಗುತ್ತದೆ. ಇದಕ್ಕಾಗಿ ಕಾಯ್ದೆ ಮಾಡುತ್ತೇವೆ ಎಂದು ಸಿಎಂ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹೊಸ ವರ್ಷಾಚರಣೆಗೆ ಡ್ರಗ್ಸ್ ಪಾರ್ಟಿ: ಪೊಲೀಸ್ ನಿಗಾ
Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.