Padubidri: ಅಪಘಾತದ ಗಾಯಾಳು ಸಾವು
Team Udayavani, Apr 29, 2024, 12:03 AM IST
ಪಡುಬಿದ್ರಿ: ತೆಂಕ ಎರ್ಮಾಳು ರಾಷ್ಟ್ರೀಯ ಹೆದ್ದಾರಿಯ ಉಡುಪಿ – ಮಂಗಳೂರು ಏಕಮುಖ ರಸ್ತೆಯಲ್ಲಿ ಶನಿವಾರ ರಾತ್ರಿ ಬೈಕ್ ಢಿಕ್ಕಿಯಾಗಿ ತಲೆಗೆ ತೀವ್ರ ಗಾಯಗೊಂಡು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ತಾ| ಬರಿಮಾರು ಗ್ರಾಮದ ಬಿ. ಸಂಜೀವ ಪೂಜಾರಿ (58)ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಟ್ಯಾಂಕರ್ ಚಾಲಕರಾಗಿದ್ದ ಅವರು ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದರು. ರಾತ್ರಿ ಊಟ ಮಾಡಲು ತಮ್ಮ ಟ್ಯಾಂಕರನ್ನು ರಸ್ತೆ ಬದಿ ನಿಲ್ಲಿಸಿ ರಸ್ತೆ ವಿಭಾಜಕ ದಾಟಿ ರಸ್ತೆ ಬದಿ ನಿಂತಿದ್ದ ವೇಳೆ ಈ ಘಟನೆ ಸಂಭವಿಸಿತ್ತು.
ಪಡುಬಿದ್ರಿ ಕಡೆಗೆ ಹೋಗುತ್ತಿದ್ದ ಬೈಕ್ ಸವಾರ ಅತೀ ವೇಗ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿ ಪಾದಚಾರಿಗೆ ಢಿಕ್ಕಿ ಹೊಡೆದಿದ್ದ. ಬೈಕ್ ಸವಾರನಿಗೂ ಗಾಯ ಗಳಾಗಿದ್ದು ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.