Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು
Team Udayavani, Apr 29, 2024, 6:40 AM IST
ಪುತ್ತೂರು: ಕೆಲಸದ ಆಮಿಷ ವೊಡ್ಡಿ ಯುವತಿಯನ್ನು ಕರೆಯಿಸಿ ಕೊಂಡು ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಹರ್ಷಿತ್ ಎಂಬಾತನಿಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರುಗೊಳಿಸಿದೆ.
ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ಬನ್ನೂರು ಬೈಲು ಎಂಬಲ್ಲಿನ ಬಾಡಿಗೆ ಮನೆಯೊಂದರಲ್ಲಿ ಮಾ. 13ರಂದು ಈ ಘಟನೆ ನಡೆ ದಿದ್ದು, ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ನಾಲ್ವರನ್ನು ಬಂಧಿಸಿದ್ದರು.
ಘಟನೆಯ ವಿವರ
ಮಂಗಳೂರಿನ ವಾಮಂಜೂರು ಮೂಲದ ಯುವತಿ ಮತ್ತು ಪುತ್ತೂರಿನ ಯುವಕ ಇನ್‌ಸ್ಟಾಗ್ರಾಮ್ ಮೂಲಕ ಸಂಪರ್ಕ ಹೊಂದಿದ್ದು, ಯುವತಿಯ ಕೋರಿಕೆಯಂತೆ ಯುವಕ ಪುತ್ತೂರಿ ನಲ್ಲಿ ಆಕೆಗೆ ಉದ್ಯೋಗಕ್ಕಾಗಿ ತನ್ನ ಸ್ನೇಹಿತರಿಗೆ ತಿಳಿಸಿದ್ದ. ಯುವ ಕನ ಸ್ನೇಹಿತರಿಬ್ಬರು ಇದನ್ನು ದುರುಪ ಯೋಗಪಡಿಸಿಕೊಂಡು ವಾಮಂ ಜೂರಿನ ಯುವತಿಯ ನಂಬರ್ ಪಡೆದು ಉದ್ಯೋಗ ಕೊಡಿಸುವುದಾಗಿ ಪುತ್ತೂರಿಗೆ ಕರೆಯಿಸಿ ಕೊಂಡಿದ್ದರು. ಯುವತಿಯು ತನ್ನ ಸ್ನೇಹಿತೆಯ ಜತೆಗೆ ಮಾ. 13ರಂದು ಪುತ್ತೂರಿಗೆ ಬಂದಾಗ ಆರೋಪಿ ಯುವಕರಿಬ್ಬರು ಪ್ರೊಫೈಲ್ ಬರೆಯಲೆಂದು ಹೇಳಿ ಅವರನ್ನು ಬನ್ನೂರು ಗ್ರಾಮದ ಬನ್ನೂರುಬೈಲು ಬಳಿಯ ನಿರ್ಜನ ಮನೆಯೊಂದಕ್ಕೆ ಕರೆದೊಯ್ದಿದ್ದರು.
ಅಲ್ಲಿ ಓರ್ವ ಯುವತಿಯನ್ನು ಹೊರಗೆ ಕುಳ್ಳಿರಿಸಿ ಇನ್ನೋರ್ವ ಯುವತಿ ಯನ್ನು ಮನೆಗೆ ಕರೆದೊಯ್ದು ಅಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದ ಎಂದು ಆರೋಪಿಸಲಾಗಿದೆ. ಘಟನೆಯ ಬಳಿಕ ಆರೋಪಿ ಯುವಕರಿಬ್ಬರೂ ಅಲ್ಲಿಂದ ಪರಾರಿಯಾಗಿದ್ದು, ಸಂತ್ರಸ್ತೆ ಯುವತಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ, ಪುತ್ತೂರು ಮಹಿಳಾ ಠಾಣಾ ಪೊಲೀಸರಿಗೆ ದೂರು ನೀಡಿದ್ದರು.
ದೂರು ಸ್ವೀಕರಿಸಿದ ಪೊಲೀಸರು ಆರಂಭದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಬಳಿಕ ಆರೋಪಿಗಳಿಗೆ ಬಾಡಿಗೆ ಮನೆ ನೀಡಿ ಆಶ್ರಯ ನೀಡಿದ್ದ ಇನ್ನಿಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳ ಪೈಕಿ ಮನು ಯಾನೆ ಮನ್ವಿತ್‌ಗೆ ಆರನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಈಗ ಮತ್ತೋರ್ವ ಪ್ರಮುಖ ಆರೋಪಿ ಹರ್ಷಿತ್‌ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.