Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

 ಕಾಂಗ್ರೆಸ್‌ ನಿರಂತರ ದಾಳಿಯಿಂದ ಬಿಜೆಪಿಗೆ ಮುಜುಗರ

Team Udayavani, Apr 30, 2024, 12:17 AM IST

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2ನೇ ಹಂತದ ಮತದಾನ ಬಾಕಿ ಇರುವ ಹೊಸ್ತಿಲಲ್ಲೇ ಪ್ರಜ್ವಲಿಸಿರುವ ಪೆನ್‌ ಡ್ರೈವ್‌ ವಿವಾದ ಜೆಡಿಎಸ್‌ ಜತೆಗೆ ಬಿಜೆಪಿಯನ್ನೂ ಮುಜುಗರಕ್ಕೆ ಸಿಲುಕಿಸಿದೆ. ಆದರೆ ಇದು ವೈಯಕ್ತಿಕ ಪ್ರಕರಣವೆಂದು ಅಂತರ ಕಾಯ್ದುಕೊಳ್ಳಲು ಕೇಸರಿ ಪಾಳಯ ಮುಂದಾಗಿದೆ.

ಈ ಘಟನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಯವರನ್ನೇ ಕಾಂಗ್ರೆಸ್‌ ಪ್ರಶ್ನೆ ಮಾಡಿದೆ. ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ, ಎಐಸಿಸಿ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಅಲ್ಕಾ ಲಂಬಾ ಸಹಿತ ರಾಷ್ಟ್ರ ಮಟ್ಟದ ನಾಯಕರು ಬಿಜೆಪಿಯನ್ನು ಪ್ರಶ್ನೆ ಮಾಡತೊಡಗಿದ್ದರೆ, ರಾಜ್ಯಮಟ್ಟದ ನಾಯಕರು ಈಗ ಜೆಡಿಎಸ್‌ ಹಾಗೂ ದೇವೇಗೌಡರ ಕುಟುಂಬವನ್ನೇ ಗುರಿ ಮಾಡಿ ನಿರಂತರ ದಾಳಿ ನಡೆಸುತ್ತಿದ್ದಾರೆ. ಹೀಗಾಗಿ ಜೆಡಿಎಸ್‌ ಒಂದು ರೀತಿ ಸಂಕಷ್ಟಕ್ಕೆ ಸಿಲುಕಿದೆ.

ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಪ್ರಯಾಣ ಬೆಳೆಸುವುದಕ್ಕೆ ಕೇಂದ್ರ ಸರಕಾರವೇ ಸಹಾಯ ಮಾಡಿದೆ ಎಂದೂ ಕಾಂಗ್ರೆಸ್‌ ಆರೋಪಿಸಿದೆ. ಇದೆಲ್ಲದರ ಹಿನ್ನೆಲೆಯಲ್ಲಿ ಸಾಕಷ್ಟು ಅಂತರ ಕಾಯ್ದುಕೊಳ್ಳುವುದಕ್ಕೆ ರಾಜ್ಯ ಬಿಜೆಪಿ ನಾಯಕರು ಹರ ಸಾಹಸ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ವಿಪಕ್ಷ ನಾಯಕ ಆರ್‌.ಅಶೋಕ್‌, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮೊದಲಾದವರು ಪ್ರತಿಕ್ರಿಯೆ ನೀಡಿದ್ದಾರೆ. ಆದರೆ ಪ್ರತಿ ಶಬ್ದವನ್ನೂ ಜಾಗರೂಕತೆಯಿಂದ ಪ್ರಯೋಗಿಸಿದ್ದಾರೆ. ಇದು ವ್ಯಕ್ತಿಗತ ವಿಚಾರವೆಂದು ಹೇಳುವ ಮೂಲಕ ಮೈತ್ರಿಕೂಟದ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾಗಿದ್ದಾರೆ.

ಬಿಜೆಪಿ ಮೂಲಗಳ ಪ್ರಕಾರ, ಪ್ರಜ್ವಲ್‌ ವಿಚಾರದಲ್ಲಿ ಪ್ರಾರಂಭದಿಂದಲೂ ಪಕ್ಷ ಒಂದೇ ನಿಲುವು ತೆಗೆದುಕೊಂಡಿದೆ. ಹಾಸನ ಟಿಕೆಟ್‌ ನಮಗೆ ನೀಡಿ ಎಂದು ರಾಷ್ಟ್ರೀಯ ನಾಯಕರಿಗೆ ಮನವಿ ಮಾಡಿದ್ದೆವು. ಭವಿಷ್ಯದಲ್ಲಿ ಮುಜುಗರ ಸೃಷ್ಟಿಯಾಗುವಂಥ ಪರಿಸ್ಥಿತಿ ನಿರ್ಮಾಣವಾಗಬಹುದು. ಹೀಗಾಗಿ ಅಭ್ಯರ್ಥಿ ಬದಲಿಸಿ ಎಂದು ಕೋರಿದ್ದೆವು. ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಕೂಡ ಒಂದು ಹಂತದಲ್ಲಿ ಈ ಪ್ರಸ್ತಾವವನ್ನು ಒಪ್ಪಿದ್ದರು. ಹಾಸನದ ಬಿಜೆಪಿ ಹಾಗೂ ಜೆಡಿಎಸ್‌ ಮುಖಂಡರಿಂದಲೂ ಬದಲಿ ಅಭ್ಯರ್ಥಿ ಬೇಡಿಕೆ ಬಂದಿತ್ತು. ಹೀಗಾಗಿ ಪಕ್ಷದ ಮೇಲೆ ಈ ವಿಚಾರದಲ್ಲಿ ಗೂಬೆ ಕೂರಿಸುವ ಪ್ರಯತ್ನ ಫ‌ಲ ನೀಡುವುದಿಲ್ಲ ಎಂಬುದು ಬಿಜೆಪಿಯ ವಾದ. ಆದಾಗಿಯೂ ಎರಡನೇ ಹಂತದ ಮತದಾನದ ಮೇಲೆ ಈ ಬೆಳವಣಿಗೆ ಒಂದಿಷ್ಟು ಪ್ರತಿಕೂಲ ಪರಿಣಾಮ ಬೀರುತ್ತದೆ ಎಂಬ ಆತಂಕದಿಂದ ಬಿಜೆಪಿ ಹೊರತಾಗಿಲ್ಲ.

ಎಚ್‌ಡಿಕೆ ಮೇಲುಗೈ?
ಈ ಬೆಳವಣಿಗೆಯಿಂದ ಜೆಡಿಎಸ್‌ನ ಕೌಟುಂಬಿಕ ರಾಜಕಾರಣದಲ್ಲಿ ಕುಮಾರಸ್ವಾಮಿ ಮೇಲುಗೈ ಸಾಧಿಸಿದಂತಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಮೊದಲಿನಿಂದಲೂ ಕುಮಾರಸ್ವಾಮಿಯವರ ರಾಜಕೀಯ ನಿರ್ಧಾರಗಳಿಗೆ ಭವಾನಿ ರೇವಣ್ಣ ಆಕ್ಷೇಪ ವ್ಯಕ್ತಪಡಿಸುತ್ತಲೇ ಇದ್ದಾರೆ. ಆದರೆ ಈಗ ರೇವಣ್ಣ ಹಾಗೂ ಪ್ರಜ್ವಲ್‌ ಇಬ್ಬರೂ ಆರೋಪಿ ಸ್ಥಾನದಲ್ಲಿ ನಿಂತಿದ್ದಾರೆ. ದೇವೇಗೌಡರು ಹಾಗೂ ನಾವು ಪ್ರತ್ಯೇಕವಾಗಿ ವಾಸವಿದ್ದೇವೆ ಎಂದು ಹೇಳುವ ಮೂಲಕ ಕುಮಾರಸ್ವಾಮಿ ನಿರೀಕ್ಷಣ ಜಾಮೀನು ಪಡೆದು ರೇವಣ್ಣ ಕುಟುಂಬದಿಂದ ಅಂತರ ಕಾಯ್ದುಕೊಂಡಿದ್ದಾರೆ.

ಟಾಪ್ ನ್ಯೂಸ್

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime

Bidar; ಪತ್ನಿ ಜತೆ ಅನೈತಿಕ ಸಂಬಂಧ‌:ಯುವಕನ ಮರ್ಮಾಂಗಕ್ಕೆ ಕತ್ತರಿ ಹಾಕಿದ ಪತಿ!!

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POlice

Kundapura: ನಿಂದನೆ, ಜೀವ ಬೆದರಿಕೆ: ಕೇಸು ದಾಖಲು

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

11

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

1-aaccc

Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು

3

Uppala: ಸುಮಾರು 3.5 ಕೋಟಿ ರೂ. ಮೌಲ್ಯದ ಅಮಲು ಪದಾರ್ಥ ವಶಕ್ಕೆ : ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.