ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Team Udayavani, Apr 30, 2024, 8:13 AM IST
ಬೆಂಗಳೂರು: ಮಾನಸಿಕ ಖನ್ನತೆಗೆ ಒಳಗಾಗಿದ್ದ ಯುವಕನೊಬ್ಬ ಅಪಾರ್ಟ್ಮೆಂಟ್ನ 14ನೇ ಮಹಡಿಯಿಂದ ಜಿಗಿದು ಆತ್ಮ ಹತ್ಯೆಗೆ ಯತ್ನಿಸಿರುವ ಘಟನೆ ತಲಘಟ್ಟ ಪುರ ಪೊಲೀಸ್ ಠಾಣೆ ವ್ಯಾಪ್ತಿ ಯಲ್ಲಿ ಸೋಮವಾರ ನಡೆದಿದೆ.
ಮನವರ್ತ್ ಕಾವಲಿನಲ್ಲಿರುವ ಅಪಾರ್ಟ್ಮೆಂಟ್ವೊಂದರ ನಿವಾಸಿ ಸಂಜಿತ್(25) ಆತ್ಮಹತ್ಯೆಗೆ ಯತ್ನಿಸಿದವ. ಗಂಭೀರವಾಗಿ ಗಾಯಗೊಂಡಿರುವ ಯುವಕ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಸೋಮವಾರ ರಾತ್ರಿ 7.30ರ ಸುಮಾರಿಗೆ ದುರ್ಘಟನೆ ನಡೆದಿದೆ. ಪದವಿ ವ್ಯಾಸಂಗ ಮಾಡಿರುವ ಸಂಜಿತ್, ಇತ್ತೀಚೆಗೆ ಮಾನಸಿಕ ಖನ್ನತೆಗೊಳಗಾಗಿದ್ದ. ಯಾರೊಂದಿಗೂ ಹೆಚ್ಚು ಮಾತನಾಡುತ್ತಿರಲಿಲ್ಲ. ಸೋಮವಾರ ರಾತ್ರಿ 7.30ರ ಸುಮಾರಿಗೆ ಅಪಾರ್ಟ್ ಮೆಂಟ್ನ 14ನೇ ಮಹಡಿಯಿಂದ ಕೆಳಗೆ ಜಿಗಿದ ಸಂಜಿತ್, ಬಾಳೆಗಿಡಗಳ ಮೇಲೆ ಬಿದ್ದು ಬಳಿಕ ನೆಲಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾನೆ.
ಮತ್ತೂಂದೆಡೆ ಶಬ್ದ ಕೇಳಿ ಅಪಾರ್ಟ್ಮೆಂಟ್ ನಿವಾಸಿಗಳು ಹೊರಗೆ ಬಂದು ನೋಡಿದಾಗ, ಸಂಜಿತ್ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ. ಕೂಡಲೇ ಆತನ ಪೋಷಕರಿಗೆ ಮಾಹಿತಿ ನೀಡಿದ್ದು, ಬಳಿಕ ಸ್ಥಳೀಯರ ಸಹಾಯ ಪಡೆದು, ಆತನ ಪೋಷಕರು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸದ್ಯ ಆತನ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾಗಿ ಪೊಲೀಸರು ಹೇಳಿದರು. ಇತ್ತೀಚೆಗೆ ಸಂಜಿತ್ ಮಾನಸಿಕ ಖನ್ನತೆಯಿಂದ ಬಳಲುತ್ತಿದ್ದ ಎಂದು ತಿಳಿದು ಬಂದಿದ್ದು, ಆತ್ಮಹತ್ಯೆ ಯತ್ನಿಸಲು ನಿಖರ ಕಾರಣ ಇಳಿದು ಬಂದಿಲ್ಲ. ಪೋಷಕರು ಮಗನಿಗೆ ಚಿಕಿತ್ಸೆ ಕೊಡಿಸುತ್ತಿದ್ದಾರೆ ಎಂಬುದು ಗೊತ್ತಾಗಿದೆ.
ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು.ಈ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.