Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ


Team Udayavani, Apr 30, 2024, 10:31 AM IST

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

ರಾಮನಗರ: ಬೆಂಗಳೂರಿಗರ ಪಾಲಿನ ಅಚ್ಚುಮೆಚ್ಚಿನ ಪ್ರವಾಸಿ ತಾಣ ಎನಿಸಿರುವ ಕನಕಪುರ ತಾಲೂಕಿನ ಸಂಗಮ ಇದೀಗ ಡೆತ್‌ಸ್ಪಾಟ್‌ ಆಗಿ ಪರಿಣಮಿಸಿದೆ.

ಹೌದು…ಪದೇ ಪದೆ ಸಂಗಮದ ಬಳಿ ಕಾವೇರಿ ನದಿಯಲ್ಲಿ ನೀರಿನಲ್ಲಿ ಮುಳುಗಿ ಸಾವಿಗೀಡಾಗುತ್ತಿರುವ ಪ್ರಕರಣಗಳೇ ಇದಕ್ಕೆ ಸಾಕ್ಷಿಯಾಗಿದ್ದು, ಪ್ರತಿ ವರ್ಷ ಸರಾಸರಿ 10ಕ್ಕೂ ಹೆಚ್ಚು ಮಂದಿ ಕಾವೇರಿ ನದಿಯಲ್ಲಿ ಜೀವ ಕಳೆದುಕೊಳ್ಳುತ್ತಿದ್ದಾರೆ. ಸೋಮವಾರ ಬೆಂಗಳೂ ರಿನ ಐವರು ವಿದ್ಯಾರ್ಥಿಗಳು ಹೀಗೆ ನದಿಯಲ್ಲಿ ಜೀವ ಕಳೆದುಕೊಂಡ ಅಸಂಖ್ಯಾತರ ಪಟ್ಟಿಗೆ ಸೇರಿದ್ದಾರೆ.

ಕನಕಪುರ ತಾಲೂಕಿನ ಗಡಿಭಾಗದಲ್ಲಿರುವ ಕಾವೇರಿ ಮತ್ತು ಅರ್ಕಾವತಿ ನದಿಗಳು ಸೇರುವ ಸಂಗಮ ರಾಜಧಾನಿ ನಿವಾಸಿಗಳ ಹಾಟ್‌ಫೇವರಿಟ್‌ ಸ್ಥಳವಾಗಿದೆ. ಬೆಂಗಳೂರಿನಿಂದ 94 ಕಿ.ಮೀ. ದೂರದಲ್ಲಿರುವ ಈ ಸ್ಥಳ ವಾರಪೂರ್ತಿ ಕೆಲಸದ ಜಂಜಾಟದಲ್ಲಿ ಕಳೆಯುವ ಮಂದಿ, ವಾರಾಂತ್ಯದಲ್ಲಿ ಒಂದು ದಿನದಲ್ಲಿ ಹೋಗಿ ಬರಬಹುದಾದ ಪ್ರವಾಸಿತಾಣ ಇದಾಗಿದ್ದು, ಕಾವೇರಿ ನದಿಯಲ್ಲಿ ಆಟವಾಡಿ, ತೆಪ್ಪದ ಮೂಲಕ ನದಿಯ ಮತ್ತೂಂದು ದಡಕ್ಕೆ ಹೋಗಿ ಅಲ್ಲಿಂದ ಕಾವೇರಿ ನದಿ ಬಂಡೆಗಳ ನಡುವೆ ಕಿರಿದಾಗಿ ಹರಿಯುವ ಮೇಕೆದಾಟು ನೋಡಿ ಬರುವುದು ಪ್ರವಾಸಿಗರಿಗೆ ಅತ್ಯಂತ ಸಂತಸದ ಕ್ಷಣವಾಗಿದ್ದು, ಈ ಕಾರಣಕ್ಕಾಗಿ ಬೆಂಗಳೂರಿಗರು ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ.

ವಾರದ ದಿನಗಳಲ್ಲಿ ಇಲ್ಲಿ ಪ್ರವಾಸಿಗರ ಸಂಖ್ಯೆ ಕಡಿಮೆ ಇದ್ದರೂ, ಶನಿವಾರ ಮತ್ತು ಭಾನುವಾರ ದಂತಹ ವಾರಾಂತ್ಯದ ದಿನಗಳಲ್ಲಿ ಪ್ರವಾಸಿಗರ ಸಂಖ್ಯೆ ಸಾವಿರಾರು ಸಂಖ್ಯೆಯಲ್ಲಿರುತ್ತದೆ. ಸಂಗಮ-ಮೇಕೆ ದಾಟು ಜೊತೆಗೆ ಚುಂಚಿಪಾಲ್ಸ್‌, ಗಾಳಿಬೋರೆ, ಮೊದಲಾದ ಸ್ಥಳಗಳನ್ನು ನೋಡಬಹುದಾದ ಕಾರಣ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿಗೆ ಆಗಮಿಸುತ್ತಾರೆ. ನದಿ ಸುಮಾರು 500 ಮೀಟರ್‌ಗೂ ಹೆಚ್ಚು ವಿಸ್ತಾರವಾಗಿ ಸಂಗಮದ ಬಳಿ ಹರಿಯುತ್ತದೆ. ಈ ಜಾಗದಲ್ಲಿ ತಣ್ಣಗೆ ಹರಿಯುವ ನದಿ ಎಚ್ಚರ ತಪ್ಪಿದರೆ ಪ್ರವಾಸಿಗರ ಪ್ರಾಣವನ್ನು ಸದ್ದಿಲ್ಲದೆ ಕಸಿದು ಹೋಗುವಷ್ಟು ಅಪಾಯಕಾರಿ ಎನಿಸಿದೆ.

ಎಚ್ಚರಿಸಿದರೂ ಎಚ್ಚೆತ್ತುಕೊಳ್ಳದ ಪ್ರವಾಸಿಗರು: ಸಂಗಮದಲ್ಲಿ ನದಿ ಅಪಾಯಕಾರಿ ಸ್ಥಳವನ್ನು ಗುರುತಿಸಿರುವ ಅರಣ್ಯ ಇಲಾಖೆ ಅಲ್ಲಿಗೆ ಪ್ರವಾಸಿಗರು ಹೋಗಬಾರದು ಎಂದು ಹಗ್ಗಕಟ್ಟಿ ಗಡಿಯನ್ನು ಗುರುತಿಸಿದ್ದಾರೆ. ಇದರೊಂದಿಗೆ ಅರಣ್ಯ ಇಲಾಖೆ ವತಿಯಿಂದ ಸೂಚನಾ ಫಲಕವನ್ನು ಅಳವಡಿಸಲಾಗಿದೆ. ಆದರೂ, ನದಿಗಿಳಿಯುವ ಪ್ರವಾಸಿಗರು ಇವರ್ಯಾರ ಮಾತನ್ನು ಕೇಳದೆ ಮನಸೋಇಚ್ಛೆ ನದಿಯಲ್ಲಿ ಈಜಾಲು ಹೋಗಿ ಪ್ರಾಣಕ್ಕೆ ಅಪಾಯ ತಂದುಕೊಳ್ಳುತ್ತಿದ್ದಾರೆ. ಸಂಗಮದಲ್ಲಿ ಪ್ರವಾಸಿಗರು ಸಾಯುವುದಕ್ಕೆ ಮುಖ್ಯ ಕಾರಣ ನದಿಯಲ್ಲಿ ಯಾರಿಗೂ ತಿಳಿಯದಂತೆ ಇರುವ ಸುಳಿಗಳು. ನದಿಯಲ್ಲಿ ನೀರಿನ ಹರಿವು ಹೆಚ್ಚಿದ್ದಾಗ ಮರಳು ಹಾಗೂ ಬಂಡೆಗಳು ಕೊಚ್ಚಿ ಹೋಗಿ ಅಲ್ಲಲ್ಲಿ ಹಳ್ಳ, ಗುಂಡಿಗಳು ನಿರ್ಮಾಣಗೊಂಡಿರುತ್ತವೆ. ಈ ಜಾಗದಲ್ಲಿ ಸುಳಿಗಳು ನಿರ್ಮಾಣಗೊಂಡಿದ್ದು ಕೆಲವೆಡೆ 10 ಅಡಿಗಳಿಗಿಂತ ಆಳವಾದ ಸುಳಿಗಳಿವೆ. ನದಿಯ ಒಳಗೆ ಇರುವ ಈ ಸುಳಿಗಳನ್ನು ಸ್ಥಳೀಯರನ್ನು ಹೊರತು ಪಡಿಸಿದರೆ ಹೊರಗಿನವರು ಗುರುತಿಸುವುದು ಕಷ್ಟಸಾಧ್ಯ.

ನದಿಗೆ ಇಳಿಯುವ ಪ್ರವಾಸಿಗರು ಆಕಸ್ಮಾತ್‌ ಸುಳಿಗೆ ಕಾಲಿರಿಸಿದರೆ ಮೇಲೆದ್ದು ಬರುವುದು ಅಸಾಧ್ಯ. ಒಂದು ವೇಳೆ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದರೆ ಶವವನ್ನು ಹುಡುಕುವುದು ಕಷ್ಟ ಸಾಧ್ಯ. ಸೋಮವಾರ ಐವರು ವಿದ್ಯಾರ್ಥಿಗಳು ಸಾವಿಗೀಡಾಗಿದ್ದಕ್ಕೆ ಸುಳಿಗೆ ಸಿಲುಕಿದ್ದೇ ಕಾರಣ.

ಈ ಸ್ಥಳದ ಸಂಪೂರ್ಣ ಜವಾಬ್ದಾರಿ ಪ್ರವಾಸೋದ್ಯಮ ಮತ್ತು ಅರಣ್ಯ ಇಲಾಖೆಗೆ ಸೇರಿದ್ದರೂ ನಾವು ಪ್ರಯಾಣಿಕರ ಸುರಕ್ಷತೆಗಾಗಿ ರಜಾದಿನ ಗಳಲ್ಲಿ ಸಿಬ್ಬಂದಿ ನಿಯೋಜಿಸುತ್ತೇವೆ. ವಾರದ ದಿನಗಳಲ್ಲಿ ನಿಯೋಜಿಸಲು ಸಿಬ್ಬಂದಿ ಕೊರತೆ ಇದೆ. ಈ ಬಗ್ಗೆ ಇಲಾಖೆ‌ ಜತೆ ಚರ್ಚಿಸಿ ಪ್ರವಾಸಿಗರ ರಕ್ಷಣೆಗೆ ಕ್ರಮ ಕೈಗೊಳ್ಳಲಾಗುವುದು. – ಕೃಷ್ಣ ಲಮಾಣಿ, ಪೊಲೀಸ್‌ ವೃತ್ತ ನಿರೀಕ್ಷಕ

ಸು.ನಾ.ನಂದಕುಮಾರ್‌

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.