Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Team Udayavani, Apr 30, 2024, 11:59 AM IST
ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆ ವಿಳಂಬ ಮಾಡುವ ಮೂಲಕ ಸರ್ಕಾರ ಹಾಗೂ ಪೋಲಿಸ್ ಇಲಾಖೆ ಇದನ್ನು ಮುಚ್ಚಿ ಹಾಕಲು ಪ್ರಯತ್ನಿಸುತ್ತಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ ಗಂಭೀರ ಆರೋಪ ಮಾಡಿದರು.
ಇಲ್ಲಿನ ಬಿಡ್ನಾಳ ಬಸವ ನಗರದಲ್ಲಿರುವ ನೇಹಾ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿ, ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಯಾವುದೇ ಒಂದು ಕೊಲೆ ಅಥವಾ ದುರ್ಘಟನೆ ನಡೆದಾಗ 24 ಗಂಟೆಯೊಳಗಾಗಿ ಘಟನೆ ನಡೆದ ಸ್ಥಳದಲ್ಲಿನ ಸೂಕ್ತ ಸಾಕ್ಷಾಧಾರಗಳನ್ನು ಪೋಲಿಸರು ಸಂಗ್ರಹಿಸಬೇಕು. ಆದರೆ ನೇಹಾ ಪ್ರಕರಣದಲ್ಲಿ ಹಂತಕನ ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಿರುವುದನ್ನು ಬಿಟ್ಟರೆ ಇನ್ಯಾವ ಪ್ರಕ್ರಿಯೆ ನಡೆದಿಲ್ಲ ಎಂದರು.
ಈ ಘಟನೆ ನೋಡದರೆ ಲವ್ ಜಿಹಾದ್ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಇದು ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆಂಬ ಕಾರಣಕ್ಕೆ ಅದನ್ನು ಮರೆಮಾಚಲು ಸುಖಾಸುಮ್ಮನೆ ವಿಳಂಬ ಮಾಡುವ ಕಾರ್ಯ ನಡೆದಿದೆ. ಇದನ್ನು ಅವಲೋಕಿಸಿದರೆ ಪೋಲಿಸರೇ ಆರೋಪಿ ರಕ್ಷಿಸುವ ಕಾರ್ಯಕ್ಕೆ ಮುಂದಾಗಿರುವುದು ಕಂಡುಬರುತ್ತಿದೆ ಎಂದು ಆಪಾದಿಸಿದರು.
ಘಟನೆಯಾದ ಕೂಡಲೇ ಆರೋಪಿ ವಶಕ್ಕೆ ಪಡೆದು ಪೋಲಿಸರು ತಮ್ಮ ಭಾಷೆಯಲ್ಲಿ ವಿಚಾರಣೆ ನಡೆಸಿದ್ದರೆ ಅವನು ಕೊಲೆಗೆ ಸಂಬಂಧಿಸಿದಂತೆ ಎಲ್ಲ ವಿಷಯ ಬಾಯಿಬಿಡುತ್ತಿದ್ದ. ಅವನನ್ನು ನೋಡಿದರೆ ಸಮಾಜ ವಿರೋಧಿ ಸಂಘಟನೆಯವರೊಂದಿಗೆ ಸಂಪರ್ಕ ಹೊಂದಿರಬಹುದೆಂಬ ಅನುಮಾನವಿದೆ. ಈ ಕುರಿತು ಸರ್ಕಾರ ಸೂಕ್ತ ತನಿಖೆ ನಡೆಸುವ ಅವಶ್ಯಕತೆ ಇದೆ. ಈ ಪ್ರಕರಣ ಮುಚ್ಚಿಹಾಕಲು ಕೆಲವು ಕಾಣದ ಕೈಗಳು ಕೆಲಸ ಮಾಡುತ್ತಿವೆ ಎಂದರು.
ಸರ್ಕಾರ ಈ ಪ್ರಕರಣ ಸಿಐಡಿ ತನಿಖೆಗೆ ಒಳಪಡಿಸಿದ್ದು, ಇದರಲ್ಲಿ ನಮಗೆ ನಂಬಿಕೆ ಇಲ್ಲ. ಹೀಗಾಗಿ ನೇಹಾ ಪಾಲಕರೇ ಒತ್ತಾಯಿಸಿದಂತೆ ಈ ಪ್ರಕರಣ ಸಿಬಿಐಗೆ ಒಪ್ಪಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಶಾಸಕ ಮಹೇಶ ಟೆಂಗಿನಕಾಯಿ, ನಿರಂಜನ ಹಿರೇಮಠ ಇತರರಿದ್ದರು.
ಇದನ್ನೂ ಓದಿ: Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.