T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
Team Udayavani, Apr 30, 2024, 3:02 PM IST
ನವದೆಹಲಿ: ಕಳೆದ ಬಾರಿಯ ಟಿ-20 ವಿಶ್ವಕಪ್ ಗೆದ್ದ ಇಂಗ್ಲೆಂಡ್ ತಂಡ ಮುಂಬರುವ ಚುಟುಕು ಕ್ರಿಕೆಟ್ ವಿಶ್ವಕಪ್ ಗಾಗಿ ತಂಡವನ್ನು ಪ್ರಕಟಿಸಿದೆ.
ಇಂಗ್ಲೆಂಡ್ ತಂಡದ ಸ್ಟಾರ್ ಬೌಲರ್, ಕಳೆದ ಕೆಲ ಸಮಯದಿಂದ ಗಾಯದಿಂದ ಬಳಲುತ್ತಿದ್ದ ಜೋಫ್ರಾ ಆರ್ಚರ್ ಆಂಗ್ಲರ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವ ಮೂಲಕ ಅಂತರಾಷ್ಟೀಯ ಕ್ರಿಕೆಟ್ ಗೆ ಕಂಬ್ಯಾಕ್ ಮಾಡಲಿದ್ದಾರೆ.
ಇದಲ್ಲದೆ ಮತ್ತೊಬ್ಬ ಅನುಭವಿ ಆಲ್‌ರೌಂಡರ್ ಕ್ರಿಸ್ ಜೋರ್ಡಾನ್ ಅವರು ತಂಡದಲ್ಲಿ ತಮ್ಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಜೋರ್ಡಾನ್ 2023 ರ ಸೆಪ್ಟೆಂಬರ್ ನಲ್ಲಿ ಕೊನೆಯ ಅಂತರರಾಷ್ಟ್ರೀಯ ಪಂದ್ಯವನ್ನು ಆಡಿದ್ದರು.
ಜಾಸ್ ಬಟ್ಲರ್ ಇಂಗ್ಲೆಂಡ್ ತಂಡದ ನಾಯಕನ ಜವಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಸ್ಫೋಟಕ ಆಟಗಾರ ವಿಲ್ ಜ್ಯಾಕ್ಸ್, ಫಿಲ್ ಸಾಲ್ಟ್ ಮತ್ತು ಜಾನಿ ಬೈರ್‌ಸ್ಟೋವ್ ಅಗ್ರ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ. ಬೆನ್ ಡಕೆಟ್, ಮೊಯಿನ್ ಅಲಿ ಮಧ್ಯಮ ಕ್ರಮಾಂಕದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಇದನ್ನೂ ಓದಿ: ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ
ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್ ಮತ್ತು ಸ್ಯಾಮ್ ಕರ್ರಾನ್ ಕೆಳ ಕ್ರಮಾಂಕದಲ್ಲಿ ಆಟವನ್ನು ನೀಡಲಿದ್ದಾರೆ. ಆದಿಲ್ ರಶೀದ್ , ಟಾಮ್ ಹಾರ್ಟ್ಲಿ ಅವರ ಸ್ಪಿನ್ ದಾಳಿ ತಂಡದಲ್ಲಿ ಇರಲಿದೆ.
ವಿಶ್ವಕಪ್ ಗೆ ಪ್ರಕಟಿಸಿದ ತಂಡವನ್ನೇ ಪಾಕಿಸ್ತಾನ ವಿರುದ್ಧದ ನಾಲ್ಕು ಪಂದ್ಯಗಳ T20I ಸರಣಿಗೆ ಆಯ್ಕೆ ಮಾಡಲಾಗಿದೆ. ಈ ಸರಣಿ ಮೇ 22 ರಂದು ಆರಂಭವಾಗಲಿದೆ.
ಎಲ್ಲಾ ತಂಡಗಳು ಮೇ 25 ರವರೆಗೆ ತಮ್ಮ ತಂಡದಲ್ಲಿ ಬದಲಾವಣೆಗಳನ್ನು ಮಾಡಲು ಅನುಮತಿಸಲಾಗಿದ.
ಜೂನ್ 4 ರಂದು ಬಾರ್ಬಡೋಸ್‌ನಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಇಂಗ್ಲೆಂಡ್ ಇರುವ ʼಬಿʼ ಗ್ರೂಪ್ ನಲ್ಲಿ ಆಸ್ಟ್ರೇಲಿಯಾ, ನಮೀಬಿಯಾ, ಸ್ಕಾಟ್ಲೆಂಡ್ ಮತ್ತು ಓಮನ್ ತಂಡ ಇರಲಿದೆ.
ಇಂಗ್ಲೆಂಡ್ ತಂಡ: ಜಾಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಜೋಫ್ರಾ ಆರ್ಚರ್, ಜೊನಾಥನ್ ಬೈರ್‌ಸ್ಟೋ, ಹ್ಯಾರಿ ಬ್ರೂಕ್, ಸ್ಯಾಮ್ ಕರ್ರಾನ್, ಬೆನ್ ಡಕೆಟ್, ಟಾಮ್ ಹಾರ್ಟ್ಲಿ, ವಿಲ್ ಜಾಕ್ಸ್, ಕ್ರಿಸ್ ಜೋರ್ಡಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಆದಿಲ್ ರಶೀದ್, ಫಿಲ್ ಸಾಲ್ಟ್, ರೀಸ್ ಟೋಪ್ಲಿ, ಮಾರ್ಕ್ ವುಡ್
Our ICC Men’s T20 World Cup squad looking 🔥🔥🔥
Who are you most looking forward to seeing? 👇#EnglandCricket | @T20WorldCup pic.twitter.com/48Q6pO2CzE
— England Cricket (@englandcricket) April 30, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!
Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.