“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್ಐಆರ್ ಹಾಕಲಿಲ್ಲವೇ?’
Team Udayavani, Apr 30, 2024, 11:25 PM IST
ಹುಬ್ಬಳ್ಳಿ: ಸಂಸದ ಪ್ರಜ್ವಲ್ ವಿರುದ್ಧ ಗಂಭೀರ ಆರೋಪ ಕೇಳಿಬಂದ ಕೂಡಲೇ ಏಕೆ ರಾಜ್ಯ ಪೊಲೀಸರು ಎಫ್ಐಆರ್ ಹಾಕಲಿಲ್ಲ. ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ನಡುವೆ ಒಪ್ಪಂದವಿದೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ಪ್ರಕರಣದಲ್ಲಿ ಕಾಂಗ್ರೆಸ್ ಬೇಜವಾಬ್ದಾರಿಯಿಂದ ಆರೋಪ ಮಾಡುತ್ತಿದೆ. ರಾಜ್ಯ ಪೊಲೀಸರು ತತ್ಕ್ಷಣವೇ ಎಫ್ಐಆರ್ ಹಾಕಬೇಕಿತ್ತು. ಎಫ್ಐಆರ್ ಹಾಕುವ ಮೊದಲೇ ಪ್ರಜ್ವಲ್ ವಿದೇಶಕ್ಕೆ ಹೋಗಿದ್ದಾರೆ. ಅವರು ವಿದೇಶಕ್ಕೆ ಹೋಗುವುದು ಕೇಂದ್ರಕ್ಕೆ ಕನಸು ಬೀಳುತ್ತದೆಯೇ? ರಾಜ್ಯ ಸರಕಾರ ತನ್ನ ತಪ್ಪನ್ನು ಕೇಂದ್ರದ ಮೇಲೆ ಹಾಕಲು ನೋಡುತ್ತಿದೆ. ಜೆಡಿಎಸ್ ಸ್ವತಂತ್ರ ಪಕ್ಷವಾಗಿದ್ದು, ಅವರನ್ನು ಉಚ್ಛಾಟಿಸಿದೆ. ಆ ಪಕ್ಷ ಕೈಗೊಂಡ ಕ್ರಮಕ್ಕೆ ಬಿಜೆಪಿ ವಿರೋಧವಿಲ್ಲ. ಯಾರೇ ಆಗಲಿ ಆರೋಪ ಮಾಡುವಾಗ ಬುದ್ಧಿ-ಜ್ಞಾನ ಇರಿಸಿಕೊಳ್ಳಬೇಕು. ದುರುದ್ದೇಶದಿಂದ ಹೇಳಿಕೆಗಳು ಕೂಡಿರಬಾರದು. ಪ್ರಜ್ವಲ್ ರೇವಣ್ಣ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮೊಮ್ಮಗ ಎಂಬ ಕಾರಣಕ್ಕೆ ಪ್ರಕರಣ ಹೆಚ್ಚು ಮಹತ್ವ ಪಡೆದುಕೊಂಡಿದೆ. ಕಾನೂನು ಪ್ರಕಾರ ಯಾರೇ ತಪ್ಪು ಮಾಡಿದರು ಶಿಕ್ಷೆಯಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
IPL : ಸಿಎಸ್ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.