Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ
Team Udayavani, May 2, 2024, 2:24 PM IST
ಹುಬ್ಬಳ್ಳಿ: ಕಾಂಗ್ರೆಸ್ ಗೆ ದಲಿತರ ಬಗ್ಗೆ ಅಷ್ಟೊಂದು ಕಾಳಜಿ ಇರುವ ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ ಎಂದು ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ ಹರಿಹಾಯ್ದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ವಿಚಾರಗಳ ಬಗ್ಗೆ ಚರ್ಚೆ ನಡೆಯಬೇಕು. ಆದರೆ ಕಾಂಗ್ರೆಸ್ ರಾಜ್ಯದ ವಿಚಾರ ಮುಂದಿಟ್ಟುಕೊಂಡು ರಾಜಕಾರಣ ಮಾಡುತ್ತಿದೆ. ಸುಳ್ಳುಗಳ ಹೇಳುವ ಮೂಲಕ ಕಾಂಗ್ರೆಸ್ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯಗೆ ದೇಶ ಬಗ್ಗೆ ಸ್ವಲ್ಪವೂ ಕಾಳಜಿ ಇಲ್ಲ. ಈ ಬಗ್ಗೆ ಯಾವ ಚರ್ಚೆ ಸಹ ಮಾಡಲ್ಲ. ಬರಿ ಗ್ಯಾರಂಟಿ ಯೋಜನೆ ಬಗ್ಗೆ ಮಾತನಾಡುವ ಮೂಲಕ ರಾಜಕಾಣ ಮಾಡುತ್ತಿದ್ದಾರೆ ಎಂದು ದೂರಿದರು.
ಸಣ್ಣ ಸಣ್ಣ ವಿಚಾರಗಳಿಗೂ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಹೆಸರು ತಂದು ಕ್ಷುಲ್ಲಕ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್ ಗ್ಯಾರಂಟಿ ನೀಡಿದ್ದಕ್ಕೆ ನಮ್ಮ ಒಪ್ಪಿಗೆ ಇದೆ. ಆದರೆ ಅವು ಸರಿಯಾಗಿ ಜನರಿಗೆ ಮುಟ್ಟಿದವಾ? ದಲಿತರಿಗೆ ಮೀಸಲಿಟ್ಟ ಹಣವನ್ನು ಯಾಕೆ ಗ್ಯಾರಂಟಿಗೆ ಬಳಸಿಕೊಳ್ಳಲಾಗಿದೆ. ಇದು ನೀವು ದಲಿತರಿಗೆ ಮಾಡಿದ ದೊಡ್ಡ ಅನ್ಯಾಯ. ದಲಿತರಿಗೆ ದ್ರೋಹ ಮಾಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.