Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್ ವಂಚನೆ: ನಾರಾಯಣಸ್ವಾಮಿ
Team Udayavani, May 3, 2024, 2:36 PM IST
ರಾಯಚೂರು: ಗ್ಯಾರಂಟಿಗಳ ಹೆಸರಲ್ಲಿ ದಲಿತರಿಗೆ ದೊಡ್ಡ ಮೋಸವಾಗುತ್ತಿದೆ. ಈ ಸತ್ಯವನ್ನು ಜನರಿಗೆ ತಿಳಿಸಿ ಮನವರಿಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ನಾರಾಯಣಸ್ವಾಮಿ ತಿಳಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, ಎಸ್ ಸಿಪಿ, ಟಿಎಸ್ ಪಿ ಹಣ ಬೇರೆ ಉದ್ದೇಶಕ್ಕೆ ಬಳಸಿದರೆ ಕ್ರಿಮಿನಲ್ ಕೇಸ್ ಹಾಕಲಾಗುವುದು ಎಂದು ಕಾನೂನು ರೂಪಿಸಿದ ಕಾಂಗ್ರೆಸ್ ಸರ್ಕಾರ ಈಗ ಎಸ್ ಸಿಪಿ ಟಿಎಸ್ ಪಿಗೆ ಮೀಸಲಿಟ್ಟಿದ್ದ 11,500 ಕೋಟಿ ಗ್ಯಾರೆಂಟಿಗೆ ಬಳಸಿದೆ. ಬಜೆಟ್ ಬಳಿಕವೂ 14 ಸಾವಿರ ಕೋಟಿ ಬಳಸಿಕೊಳ್ಳಲು ಮುಂದಾಗಿದೆ. ಅಂಬೇಡ್ಕರ್, ವಾಲ್ಕೀಕಿ, ಆದಿ ಜಾಂಬವ, ಭೋವಿ ಅಭಿವೃದ್ಧಿ ನಿಗಮಗಳಿಗೆ ಸಬ್ಸಿಡಿ ಹಣ ಸಂಪೂರ್ಣ ಕಡಿತಗೊಳಿಸಲಾಗಿದೆ. ಕ್ಷೇತ್ರಕ್ಕೆ ಒಂದೇ ಗಂಗಾ ಕಲ್ಯಾಣ ನೀಡಲಾಗಿದೆ. ಈ ಸತ್ಯಗಳನ್ನು ಜನರಿಗೆ ತಿಳಿಸಲು ಬಂದಿದ್ದೇವೆ ಎಂದರು.
ಎಸ್ ಸಿಪಿ, ಟಿಎಸ್ ಪಿ ಯೋಜನೆ ಮೊದಲು ಜಾರಿಗೆ ತರಲು ಮುಂದಾಗಿದ್ದೆ ಬಿಜೆಪಿ ಸರ್ಕಾರ. ಆದರೆ, ಸರ್ಕಾರ ಪತನಗೊಂಡ ಕಾರಣಕ್ಕೆ ಅದು ಜಾರಿಯಾಗಲಿಲ್ಲ ಎಂದು ತಿಳಿಸಿದರು.
ಒಳಮೀಸಲಾತಿ ಪರ ಇದ್ದೇನೆ ಎಂದಿದ್ದ ಸಿಎಂ ಸಿದ್ದರಾಮಯ್ಯ ಅಯ್ಯೋ ಅದೆಲ್ಲ ಮಾಡೋಕಾಗಲ್ಲ ಎಂದು ಉಲ್ಟಾ ಹೊಡೆದಿದ್ದರು. ದಲಿತ ಸಮಾಜವನ್ನು ದಿಕ್ಕು ತಪ್ಪಿಸುವ ಕೆಲಸ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಮಳೆ ನೀರು ಹರಿಯುವ ಕಾಲುವೆಗೆ ಪೈಪ್!
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Kinnigoli: ಘನ ವಾಹನ ನಿರ್ಬಂಧ; ಜನ ಪರದಾಟ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Mangaluru: ಕೊಕ್ಕಡದ ʼಸಾಂತಾ ಕ್ಲಾಸ್ʼ ವಿನ್ಸೆಂಟ್ ಕ್ರಿಸ್ಮಸ್ ತಿರುಗಾಟಕ್ಕೆ 25 ವರ್ಷ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.