ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ
Team Udayavani, May 4, 2024, 12:30 AM IST
ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೇ 7ರಂದು ನಡೆಯುವ ಮತದಾನದ ಸಮಯವನ್ನು ಪರಿಷ್ಕರಿಸುವಂತೆ ರಾಜ್ಯ ಬಿಜೆಪಿ ನಿಯೋಗವು ಕೇಂದ್ರ ಚುನಾವಣ ಆಯೋಗಕ್ಕೆ ಮನವಿ ಸಲ್ಲಿಸಿದೆ.
ರಾಜ್ಯದ ಪಾಲಿನ 2ನೇ ಹಂತದ ಚುನಾವಣೆಯಾಗಿರುವ ದೇಶದ 3ನೇ ಹಂತದ ಚುನಾವಣೆಯು ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ನಡೆಯುತ್ತಿದ್ದು, ಉತ್ತರ ಕರ್ನಾಟಕದ ಬಹುಪಾಲು ಭಾಗ ಈ ವ್ಯಾಪ್ತಿಯಲ್ಲಿ ಬರಲಿದೆ.
ಈಗಾಗಲೇ ಈ ಭಾಗದಲ್ಲಿ 40 ಡಿಗ್ರಿ ಸೆಲ್ಸಿಯಸ್‌ಗಿಂತ ಅಧಿಕ ತಾಪಮಾನ ದಾಖಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಉಷ್ಣಾಂಶ ಹೆಚ್ಚಳ ಆಗುವ ಮುನ್ಸೂಚನೆ ಇದೆ. ಅನಿಯಂತ್ರಿತ ಉಷ್ಣಾಂಶದ ಪರಿಣಾಮ ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ಮನೆಯಿಂದ ಹೊರ ಬಂದು ಮತದಾನ ಮಾಡುವುದು ಕಷ್ಟವಿದೆ. 40 ವರ್ಷ ಮೇಲ್ಪಟ್ಟ ಮತದಾರರ ಸಂಖ್ಯೆ ಹೆಚ್ಚಿದ್ದು, ಮತದಾನಕ್ಕಾಗಿ ಮನೆಯಿಂದ ಹೊರ ಬರುವುದು ಸುಲಭವಿಲ್ಲ.
ಈ ಎಲ್ಲ ಕಾರಣಗಳ ಹಿನ್ನೆಲೆಯಲ್ಲಿ ಮತದಾನದ ಸಮಯವನ್ನು ಪರಿಷ್ಕರಣೆ ಮಾಡುವ ಅಗತ್ಯವಿದೆ. ಬೆಳಗ್ಗೆ 6ರಿಂದ ರಾತ್ರಿ 7 ಗಂಟೆವರೆಗೆ ಮತದಾನ ಮಾಡಲು ಅನುಕೂಲ ಆಗುವಂತೆ ಮತದಾನದ ಸಮಯವನ್ನು ಪರಿಷ್ಕರಣೆ ಮಾಡಬೇಕು ಎಂದು ಕೋರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.