![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 4, 2024, 2:13 AM IST
ಮಡಿಕೇರಿ: ವೃದ್ಧೆಯೊಬ್ಬರು ಸಂಶಯಾಸ್ಪದ ರೀತಿಯಲ್ಲಿ ಮೃತ ಪಟ್ಟಿರುವ ಘಟನೆ ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದಲ್ಲಿ ನಡೆದಿದೆ.
ಕೊಲೆ ಆರೋಪದ ಹಿನ್ನೆಲೆಯಲ್ಲಿ ಸೊಸೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮರಗೋಡಿನ ನಿವಾಸಿ ಪೂವಮ್ಮ (73) ಮೃತ ವೃದ್ಧೆಯಾಗಿದ್ದು, ಸೊಸೆ ಬಿಂದು (26) ಬಂಧಿತೆಯಾಗಿದ್ದಾಳೆ.
ಕ್ಷುಲ್ಲಕ ಕಾರಣಕ್ಕೆ ಇವರಿಬ್ಬರ ನಡುವೆ ಕಲಹ ಏರ್ಪಟ್ಟು ಸೊಸೆ ಹಲ್ಲೆ ನಡೆಸಿದ್ದಾರೆ. ಅತ್ತೆ ಮೃತಪಟ್ಟ ನಂತರ ಇದು ಸಹಜ ಸಾವೆಂದು ಬಿಂಬಿಸುವ ಯತ್ನವನ್ನು ಬಿಂದು ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆ ಮಡಿಕೇರಿ ಗ್ರಾಮಾಂತರ ಪೊಲೀಸರು ತನಿಖೆ ಕೈಗೊಂಡು ಆಕೆಯನ್ನು ವಶಕ್ಕೆ ಪಡೆದರು ಎಂದು ತಿಳಿದು ಬಂದಿದೆ.
You seem to have an Ad Blocker on.
To continue reading, please turn it off or whitelist Udayavani.