ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್ ಆಗ್ರಹ
ಪರಶುರಾಮ ಥೀಮ್ ಪಾರ್ಕ್ ವಿವಾದ
Team Udayavani, May 5, 2024, 1:13 AM IST
ಉಡುಪಿ: ಪರಶುರಾಮ ಥೀಮ್ ಪಾರ್ಕ್ ಹೆಸರಿನಲ್ಲಿ ನಡೆದ ಅವ್ಯವಹಾರ, ಅಕ್ರಮ ಕರಾವಳಿ ಜನರ ಭಾವನೆಗಳಿಗೆ ಘಾಸಿಯುಂಟು ಮಾಡಿದ್ದು, ಜನಾಭಿಪ್ರಾಯಕ್ಕೆ ಸೂಕ್ತವಾಗಿ ಥೀಮ್ ಪಾರ್ಕ್ ಅನ್ನು ಅಭಿವೃದ್ಧಿ ಮಾಡಬೇಕಿದೆ ಎಂದು ಕಾಂಗ್ರೆಸ್ ಆಗ್ರಹಿಸಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖಂಡ ಉದಯ ಕುಮಾರ್ ಶೆಟ್ಟಿ ಮುನಿಯಾಲು, ಯಾವುದೇ ಕಾರಣಕ್ಕೂ ಈ ಕಾಮಗಾರಿಯನ್ನು ಜಿಲ್ಲಾ ನಿರ್ಮಿತಿ ಕೇಂದ್ರ, ಕೃಷ್ಣ ಆರ್ಟ್ ಗ್ಯಾಲರಿ ಸಂಸ್ಥೆಗೆ ವಹಿಸಬಾರದು. ಥೀಮ್ ಪಾರ್ಕ್ ಕಾಮಗಾರಿ ಅಕ್ರಮಗಳಿಂದ ಕೂಡಿದ್ದು, ಮೂರ್ತಿ ನಿರ್ಮಾಣದ ಅನುಭವ ಇಲ್ಲದವರಿಗೆ ಕಾಮಗಾರಿ ವಹಿಸಲಾಗಿದೆ. ಕೂಡಲೇ ಸರಕಾರ ಹಾಗೂ ಜಿಲ್ಲಾಡಳಿತ ಪರಿಶೀಲನೆ ನಡೆಸಿ ನಿರ್ಮಿತಿ ಕೇಂದ್ರದ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.
ರಾಜಕೀಯ ಸ್ವಾರ್ಥಕ್ಕಾಗಿ ಜನರ ಭಾವನೆಗಳೊಂದಿಗೆ ಚೆಲ್ಲಾಟವಾಡಿದವರಿಗೆ ತಕ್ಕ ಶಿಕ್ಷೆಯಾಗಲಿದೆ. ಥೀಮ್‌ಪಾರ್ಕ್ ಪ್ರದೇಶವು ಕಂದಾಯ ಇಲಾಖೆಯಲ್ಲಿದ್ದು, ಕಾನೂನು ತೊಡಕು ನಿವಾರಿಸಿ ಕೂಡಲೇ ಜನಾಭಿಪ್ರಾಯದಂತೆ ಪ್ರವಾಸಿ ಸ್ಥಳವಾಗಿ ಜಿಲ್ಲಾಡಳಿತ ರೂಪಿಸಬೇಕು ಎಂದರು. ಮುಖಂಡರಾದ ಕೆ. ಕೃಷ್ಣಮೂರ್ತಿ ಆಚಾರ್ಯ, ರಮೇಶ್ ಕಾಂಚನ್ ಮಾತನಾಡಿ, ತನಿಖಾ ವರದಿ ಬಂದ ಕೂಡಲೇ ತಪ್ಪಿತಸ್ಥರ ವಿರುದ್ಧ ಸರಕಾರ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಹೈಕೋರ್ಟ್ ಆದೇಶ ಪಾಲನೆಗೆ ಬಿಜೆಪಿ ಒತ್ತಾಯ
ಕಾರ್ಕಳ: ಉಚ್ಚನ್ಯಾಯಾಲಯದ ಆದೇಶ ಉಲ್ಲಂಘಿಸಿ ಪರಶುರಾಮ ಥೀಂ ಪಾರ್ಕ್‌ನ ಕೆಲಸವನ್ನು ತಡೆ ಯುವ ಅಧಿಕಾರ ಜಿಲ್ಲಾಧಿಕಾರಿಗಳಿಗಿಲ್ಲ ಎಂದು ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಆಗ್ರಹಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋರ್ಟ್‌ನ ಸೂಚನೆಯಂತೆ ಮೂರ್ತಿ ವಿನ್ಯಾಸಕಾರರು ನಿನ್ನೆಯಿಂದಲೇ (ಮೇ 3) ಕಾಮಗಾರಿ ಆರಂಭಿಸಬೇಕಿತ್ತು. ಆದರೆ ಸ್ಥಳದಲ್ಲಿ ಭಯದ ವಾತಾವರಣವಿದ್ದು, ಸೂಕ್ತ ಭದ್ರತೆ ಒದಗಿಸಿ ಕಾಮಗಾರಿ ನಡೆಸಲು ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಕೆಲಸ ಆರಂಭಿಸದಂತೆ ತಡೆಯಲು ಕೆಲವು ಕಾಂಗ್ರೆಸ್ ನಾಯಕರು, ಥೀಂ ಪಾರ್ಕ್ ಗೆ ಹೋಗುವ ಬೆಟ್ಟದ ರಸ್ತೆಗೆ ಮಣ್ಣು ಸುರಿದಿದ್ದಾರೆ. ಸರಕಾರಿ ಯೋಜನೆ ಪೂರ್ಣಗೊಂಡು ಸಾರ್ವಜನಿಕರಿಗೆ ಲಭ್ಯವಾಗಬೇಕು ಎನ್ನುವ ಇರಾದೆ ಇವರಿಗಿಲ್ಲ ಎಂದು ಟೀಕಿಸಿದರು. ಬಿಜೆಪಿ ಮಂಡಲ ಪ್ರ. ಕಾರ್ಯದರ್ಶಿ ಬೋಳ ಸತೀಶ್ ಪೂಜಾರಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.