Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್ ಆಗುವ ಭೀತಿ
ಆಗುಂಬೆ ಘಾಟಿ ತಡೆಗೋಡೆ ಬಳಿ ಬಿರುಕು
Team Udayavani, May 5, 2024, 7:10 AM IST
ಹೆಬ್ರಿ: ಕರಾವಳಿ ಮಲೆನಾಡನ್ನು ಸಂಪರ್ಕಿಸುವ ಆಗುಂಬೆ ಘಾಟಿಯ ಸೂರ್ಯಾಸ್ತ ಸ್ಥಳದ ಬಳಿಯ ರಸ್ತೆಯ ತಡೆಗೋಡೆಯ ಬಳಿ ಬಿರುಕು ಕಂಡಿದ್ದು ಘನ ವಾಹನಗಳ ಸಂಚಾರದಿಂದ ತಡೆಗೋಡೆ ಕುಸಿದು ಘಾಟಿ ಬಂದ್ ಆಗುವ ಭೀತಿ ಎದುರಾಗಿದೆ.
ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ 14ನೇ ತಿರುವು ಸೂರ್ಯಾಸ್ತ ಸ್ಥಳದ ಬಳಿ ಹಾಗೂ ಘಾಟಿ ಆರಂಭದ ಮಧ್ಯೆ ಘನ ವಾಹನಗಳು ರಸ್ತೆಯ ಬದಿಯಲ್ಲಿ ಸಂಚರಿಸಿದರೆ ಸಂಪೂರ್ಣ ಕುಸಿಯುವ ಸ್ಥಿತಿ ಇದೆ. ಪ್ರಸ್ತುತ ಈ ಕಿರಿದಾದ ಘಾಟಿಯಲ್ಲಿ ಹಲವಾರು ಘನವಾಹನಗಳು ಸಂಚರಿಸುತ್ತಿವೆ. ಈ ಹಿಂದೆ ಕೆಲವೆಡೆ ಘನ ವಾಹನಗಳು ಢಿಕ್ಕಿ ಹೊಡೆದ ಪರಿಣಾಮ ತಡೆ ಗೋಡೆಗಳಿಗೆ ಹಾನಿಯಾಗಿತ್ತು. ಇದೀಗ ಘಾಟಿ ಆರಂಭದಲ್ಲಿ ರಸ್ತೆ ತೀರಾ ಕಿರಿದಾಗಿದ್ದು, ಒಂದು ವಾಹನ ಸಂಚರಿಸುವುದೂ ಕಷ್ಟ ಎಂಬಂತಿದೆ. ಇಂಥ ಸಂದರ್ಭದಲ್ಲಿ ಘನವಾಹನಗಳ ಸಂಚಾರದಿಂದ ಸಮಸ್ಯೆ ಬಿಗಡಾಯಿಸಬಹುದು ಎಂಬುದು ಸಾರ್ವಜನಿಕರ ಆತಂಕ.
ಇದೇ ಸಂದರ್ಭದಲ್ಲಿ ಶಾಲೆಗಳಿಗೆ ರಜೆ ಇರುವ ಕಾರಣ ಪ್ರವಾಸಿಗರ ವಾಹನಗಳ ದಟ್ಟಣೆ ಘಾಟಿಯಲ್ಲಿ ಹೆಚ್ಚಾಗಿದೆ. ಇದರೊಂದಿಗೆ ಘನ ವಾಹನಗಳ ಓಡಾಟದಿಂದ ರಸ್ತೆ ಮೇಲೆ ಒತ್ತಡ ಹೆಚ್ಚುತ್ತಿದೆ. ಬಿರುಕುಬಿಟ್ಟ ತಡೆಗೋಡೆಯನ್ನು ಕೂಡಲೇ ದುರಸ್ತಿಗೊಳಿಸದಿದ್ದರೆ ಮಳೆಗಾಲದಲ್ಲಿ ಮಳೆ ನೀರು ನುಗ್ಗಿ ತಡೆಗೋಡೆಗೆ ಭಾರೀ ಹಾನಿಯುಂಟಾಗಬಹುದು ಎಂಬ ಆತಂಕ ಎದುರಾಗಿದೆ. ಪ್ರತೀ ವರ್ಷ ಘಾಟಿಯ ಕೆಲವು ತಿರುವು ಗಳಲ್ಲಿ ಕುಸಿತ ಕಂಡುಬರುತ್ತಿದ್ದು ಕೆಲವು ಬಾರಿ ಮಳೆಗಾಲದಲ್ಲಿ ಘಾಟಿ ಸಂಚಾರ ಬಂದ್ ಆಗಿತ್ತು. ಮಳೆಗಾಲದ ಮೊದಲೇ ಕುಸಿತಗೊಂಡ ತಡೆಗೋಡೆ ಗಳನ್ನು ದುರಸ್ತಿ ಮಾಡದಿರುವುದೂ ಇದಕ್ಕೆ ಕಾರಣ ವಾಗುತ್ತಿದೆ ಎಂಬ ಅಭಿಪ್ರಾಯ ಕೇಳಿಬಂದಿದೆ.
ಸಾರ್ವಜನಿಕರ ಆಗ್ರಹ
ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಸುತ್ತಲಿನ ಜಿಲ್ಲೆಯ ಜನರು ಮಣಿಪಾಲ ಆಸ್ಪತ್ರೆಯನ್ನು ಆಶ್ರಯಿಸಿದ್ದು, ಅವರಿಗೆ ಈ ಮಾರ್ಗ ಬಹಳ ಪ್ರಮುಖವಾದುದು. ಒಂದು ವೇಳೆ ಸಂಚಾರಕ್ಕೆ ಸಮಸ್ಯೆಯಾದರೆ ಇವರಿಗಷ್ಟೇ ಅಲ್ಲದೇ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯೊಂದಿಗೆ ಕರಾವಳಿಯ ಸಂಪರ್ಕವೂ ಕಡಿತಗೊಳ್ಳಲಿದೆ. ಹಾಗಾಗಿ ಕೂಡಲೇ ಜಿಲ್ಲಾಡಳಿತ ಗಮನ ಹರಿಸಿ ಘನವಾಹನಗಳ ಸಂಚಾರವನ್ನು ನಿರ್ಬಂಧಿಸಿ ಕುಸಿತಗೊಂಡ ತಡೆಗೋಡೆಯನ್ನ ಸರಿಪಡಿಸಬೇಕು ಹಾಗೂ ಅಲ್ಲಿಯವರೆಗೆ ಭದ್ರತೆ ಒದಗಿಸಬೇಕು ಎಂಬುದು ಸಾರ್ವಜನಿಕರ ಆಗ್ರಹ.
ಘಾಟಿಯ ಇಕ್ಕೆಲಗಳಲ್ಲಿ ಬೃಹತ್ ಮರಗಳಿದ್ದು ಕೊಂಬೆಗಳು ರಸ್ತೆಯತ್ತ ವಾಲಿ, ತಿರುವಿನಲ್ಲಿ ಎದುರು ಬರುವ ವಾಹನಗಳು ವಾಹನ ಸವಾರರಿಗೆ ಕಾಣದಂತಾಗಿದೆ. ಇದನ್ನೂ ತೆರವುಗೊಳಿಸಬೇಕಿದೆ. ಪ್ರತೀ ತಿರುವುಗಳಲ್ಲಿ ವಾಹನಗಳು ಕೆಟ್ಟು ನಿಲ್ಲುತ್ತಿದ್ದು, ಉಳಿದ ವಾಹನ ಸಂಚಾರಕ್ಕೂ ಕಷ್ಟವಾಗುತ್ತಿದೆ. ಇದರೊಂದಿಗೆ ಮಳೆ ನೀರು ಹರಿಯಲು ಚರಂಡಿ ವ್ಯವಸ್ಥೆ ಇರದ ಕಾರಣ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಇದನ್ನೂ ಆದಷ್ಟು ಬೇಗ ಸರಿಪಡಿಸಬೇಕಿದೆ.
ಎಸಿ ಹಾಕಬೇಡಿ
ಘಾಟಿಯಲ್ಲಿ ಹಲವರು ತಮ್ಮ ವಾಹನಗಳಲ್ಲಿ ಎಸಿ ಹಾಕಿಕೊಂಡು ಚಲಾಯಿಸುತ್ತಾರೆ. ಇದರಿಂದ ಎದುರಿನಿಂದ ಬರುವ ವಾಹನಗಳು ತಿರುವುಗಳಲ್ಲಿ ಹಾಕುವ ಹಾರ್ನ್ ಕೇಳಿಸದು. ಇದರಿಂದ ಕೆಲವೊಮ್ಮೆ ಪರಸ್ಪರ ವಾಹನಗಳು ಮುಖಾಮುಖೀಯಾಗಿ ಆಚೀಚೆ ಸಂಚರಿಸದ ಸ್ಥಿತಿ ಉದ್ಭವಿಸಿ ಘಾಟಿಯಲ್ಲಿ ಟ್ರಾಫಿಕ್ ಜಾಮ್ ಆಗುವ ಸಂಭವ ಇರುತ್ತದೆ. ಇದಕ್ಕಿಂತ ಗಂಭೀರವಾದುದೆಂದರೆ ವಾಹನಗಳ ಅಪಘಾತಕ್ಕೂ ಕಾರಣವಾಗುತ್ತದೆ. ಹಾಗಾಗಿ ಘಾಟಿಯನ್ನು ಹತ್ತುವಾಗ ಹಾಗೂ ಇಳಿಯುವಾಗ ಯಾವುದೇ ಕಾರಣಕ್ಕೂ ವಾಹನ ಸವಾರರು ಎಸಿ ಬಳಸದೇ ಕಿಟಕಿಗಳನ್ನು ಸ್ವಲ್ಪ ತೆರೆದುಕೊಂಡು ಜಾಗ್ರತೆ ಹಾಗೂ ನಿಧಾನವಾಗಿ ವಾಹನಗಳನ್ನು ಚಲಾಯಿಸುವುದು ಸೂಕ್ತ.
ಆಗುಂಬೆ ಘಾಟಿಯ ಅರ್ಧಭಾಗ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಗೆ ಬರುವುದರಿಂದ ಅಲ್ಲಿನ ಜಿಲ್ಲಾಧಿಕಾರಿ ಜತೆ ಚರ್ಚಿಸಲಾಗಿದೆ. ಅವರು ಕೂಡಲೇ ಎಂಜಿನಿಯರ್‌ಗಳನ್ನು ಕಳುಹಿಸಿ ಪರಿಶೀಲನೆ ನಡೆಸಿ ಶೀಘ್ರ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
– ಡಾ| ಕೆ. ವಿದ್ಯಾಕುಮಾರಿ,
ಜಿಲ್ಲಾಧಿಕಾರಿ, ಉಡುಪಿ ಜಿಲ್ಲೆ
-ಹೆಬ್ರಿ ಉದಯಕುಮಾರ್ ಶೆಟ್ಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.