Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ
Team Udayavani, May 5, 2024, 7:05 AM IST
ಬೆಂಗಳೂರು: ಲೋಕಸಭೆ ಚುನಾವಣೆಯ ದೇಶದ ಮೂರನೇ ಹಾಗೂ ರಾಜ್ಯದ ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದ್ದು, ಈ 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ರವಿವಾರ ಸಂಜೆ 6ಕ್ಕೆ ತೆರೆ ಬೀಳಲಿದೆ. ಸೋಮವಾರ ಮನೆ ಮನೆ ಪ್ರಚಾರಕ್ಕೆ ಮಾತ್ರ ಅವಕಾಶ ಇದೆ. ಈಗಾಗಲೇ ದಕ್ಷಿಣ ಕರ್ನಾಟಕ ಭಾಗದ 14 ಕ್ಷೇತ್ರಗಳಿಗೆ ಎ. 26ರಂದು ಮತದಾನ ಮುಗಿದಿದೆ.
ಬಹಿರಂಗ ಪ್ರಚಾರದ ಕೊನೆಯ ದಿನವಾಗಿರುವ ರವಿವಾರ ಬೃಹತ್ ವೇದಿಕೆ ಕಾರ್ಯಕ್ರಮಗಳಿಗಿಂತ ರ್‍ಯಾಲಿ, ರೋಡ್ ಶೋಗಳ ಭರಾಟೆ ಇರಲಿದೆ.
ಕಣದಲ್ಲಿರುವ ಪ್ರಮುಖರು
ಎರಡನೇ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಇಬ್ಬರು ಮಾಜಿ ಸಿಎಂಗಳು, ಇಬ್ಬರು ಹಾಲಿ ಕೇಂದ್ರ ಸಚಿವರು ಸ್ಪರ್ಧೆಯಲ್ಲಿರುವುದರಿಂದ ಚುನಾವಣೆ ಪ್ರತಿಷ್ಠೆ ಪಡೆದುಕೊಂಡಿದೆ. ಹಾವೇರಿ ಮತ್ತು ಬೆಳಗಾವಿಯಿಂದ ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಸ್ಪರ್ಧಿಸಿದ್ದರೆ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಧಾರವಾಡದಿಂದ, ಭಗವಂತ ಖೂಬಾ ಬೀದರ್ ಕ್ಷೇತ್ರದಿಂದ ಸ್ಪರ್ಧೆಗಿಳಿದಿದ್ದಾರೆ.
ಇನ್ನುಳಿದಂತೆ ಬೆಳಗಾವಿಯಿಂದ ಮೃಣಾಲ್ ಹೆಬ್ಟಾಳ್ಕರ್, ಚಿಕ್ಕೋಡಿಯಿಂದ ಪ್ರಿಯಾಂಕಾ ಜಾರಕಿಹೊಳಿ, ಬಾಗಲಕೋಟೆಯಿಂದ ಸಂಯುಕ್ತಾ ಪಾಟೀಲ್, ಬೀದರ್‌ನಿಂದ ಸಾಗರ್ ಖಂಡ್ರೆ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದರೆ, ಬಿ.ವೈ. ರಾಘವೇಂದ್ರ ಶಿವಮೊಗ್ಗದಲ್ಲಿ ಬಿಜೆಪಿಯಿಂದ ಕಣದಲ್ಲಿದ್ದಾರೆ. ಶಿವಮೊಗ್ಗದಲ್ಲಿ ಕೆ.ಎಸ್. ಈಶ್ವರಪ್ಪ ಬಿಜೆಪಿ ವಿರುದ್ಧ ಬಂಡೆದ್ದಿದ್ದರೆ, ದಾವಣಗೆರೆಯಲ್ಲಿ ವಿನಯ್ ಕುಮಾರ್ ಕಾಂಗ್ರೆಸ್ ವಿರುದ್ಧ ಸೆಟೆದು ನಿಂತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
RTO; ಫಿಟ್‌ನೆಸ್ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
Belagavi; ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.