JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ
ಪ್ರಜ್ವಲ್, ರೇವಣ್ಣ ಪ್ರಕರಣದಿಂದ ಯಾವುದೇ ಬದಲಾವಣೆ ಇಲ್ಲ
Team Udayavani, May 6, 2024, 12:39 AM IST
ಶಿವಮೊಗ್ಗ: ಪ್ರಜ್ವಲ್ ಹಾಗೂ ರೇವಣ್ಣ ಪ್ರಕರಣ ಮುಂದಿಟ್ಟುಕೊಂಡು ಜೆಡಿಎಸ್ ಜತೆಗಿನ ಮೈತ್ರಿಯನ್ನು ಕಡಿದು ಕೊಳ್ಳುವುದಿಲ್ಲ. ಮೈತ್ರಿಯಲ್ಲಿ ಯಾವುದೇ ಬದಲಾವಣೆ ಕೂಡ ಮಾಡುವುದಿಲ್ಲ. ಪ್ರಜ್ವಲ್ ಪ್ರಕರಣದ ಕುರಿತು ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳುತ್ತದೆ. ದೇವೇಗೌಡರು ಇದರ ಬಗ್ಗೆ ತಲೆಕೆಡಿಸಿಕೊಳ್ಳದೆ ಆರೋಗ್ಯ ಸುಧಾರಿಸಿಕೊಳ್ಳಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿಯವರ ಹತ್ತು ವರ್ಷಗಳ ಸಾಧನೆ ಮುಂದಿಟ್ಟು ನಾವು ಚುನಾವಣೆಯನ್ನು ಎದುರಿಸು ತ್ತಿದ್ದೇವೆ. ಆದರೆ ಕಾಂಗ್ರೆಸ್ ಸುಳ್ಳಿನ ಆಧಾರದಲ್ಲಿ ಚುನಾವಣೆ ಎದುರಿಸುತ್ತಿದೆ. ಸಿದ್ದರಾಮಯ್ಯ ವಿಧಾನಸಭಾ ಚುನಾವಣೆ ಗುಂಗಿನಿಂದ ಹೊರಬಂದಿಲ್ಲ. ಲೋಕಸಭಾ ಚುನಾವಣೆ ನಡೆಯುತ್ತಿದೆ ಎಂಬುದನ್ನು ಸಿದ್ದರಾಮಯ್ಯ ಮರೆತಿದ್ದಾರೆ. ಕಾಂಗ್ರೆಸ್‌ಗೆ ವಿಶ್ವಾಸಾರ್ಹ ನಾಯಕತ್ವ ಇಲ್ಲ. ಜನರನ್ನು ದಾರಿ ತಪ್ಪಿಸಿ ವಿವಾದ ಸೃಷ್ಟಿಸುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದರು.
ಮೋದಿಯವರು ಎರಡು ಕೋಟಿ ಉದ್ಯೋಗ ಕೊಟ್ಟಿಲ್ಲ ಎಂದು ಕಾಂಗ್ರೆಸ್‌ನವರು ಆರೋಪಿಸುತ್ತಿದ್ದಾರೆ. ಆದರೆ 10 ವರ್ಷಗಳಲ್ಲಿ ಆಗಿರುವ ಉದ್ಯೋಗ ಸೃಷ್ಟಿಯ ಬಗ್ಗೆ ಕಾಂಗ್ರೆಸ್ ಮಾಹಿತಿ ಪಡೆದುಕೊಳ್ಳಬೇಕು. ಆರ್ಟಿಕಲ್ 370 ಅನ್ನು ರದ್ದುಪಡಿಸಿದ್ದನ್ನು ಪುನಃ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿದೆ.
ಕಾಂಗ್ರೆಸ್ ತುಷ್ಟೀಕರಣ ಮಾಡುತ್ತಿದೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಮುಸ್ಲಿಂ ಓಲೈಕೆ ಇದೆ. ಅದು ಸಂವಿಧಾನ, ಅಂಬೇಡ್ಕರ್ ವಿರೋಧಿ ಪ್ರಣಾಳಿಕೆ ಆಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಬಿಸಿಗೆ ಕಷ್ಟವಾಗಲಿದೆ. ಹಿಂದುಳಿದವರು ಮತ್ತು ದಲಿತರ ಮೀಸಲಾತಿಯನ್ನು ಕಸಿದು ಮುಸ್ಲಿಮರಿಗೆ ಕೊಡುತ್ತದೆ ಎಂದು ಹೇಳಿದರು.
ಕಾಂಗ್ರೆಸ್ ಆಡಳಿತದಲ್ಲಿ ಕಾನೂನು-ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಪಿಎಫ್‌ಐ ಜತೆ ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಳ್ಳುತ್ತಿದೆ.
ಸಿದ್ದರಾಮಯ್ಯ ಸುಳ್ಳಿನ ಭಾಷಣ ಮಾಡಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಕೋವಿಡ್ ಲಸಿಕೆ ಬಗ್ಗೆ ಕಾಂಗ್ರೆಸ್ ಸುಳ್ಳು ಸುದ್ದಿ ಹಬ್ಬಿಸುತ್ತಿದೆ. ಕಾಂಗ್ರೆಸ್ ತನ್ನ ಕಾಲಿನ ಮೇಲೆ ತಾನೇ ಕಲ್ಲು ಹಾಕಿಕೊಳ್ಳುತ್ತಿದೆ ಎಂದು ಹೇಳಿದರು.
ಮೂರು ಬಣಗಳಾಗಿ ಒಡೆದಿರುವ ಕಾಂಗ್ರೆಸ್
ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಬಣ, ಡಿ.ಕೆ.ಶಿವಕುಮಾರ್ ಬಣ ಹಾಗೂ ಮಲ್ಲಿಕಾರ್ಜುನ್ ಖರ್ಗೆ ಬಣಗಳಿವೆ. ರಾಹುಲ್ ಗಾಂ ಧಿಗೆ ಕೇರಳದಲ್ಲಿ ಗೆಲ್ಲುವ ವಿಶ್ವಾಸ ಇಲ್ಲ. ಅದಕ್ಕಾಗಿ ಅಮ್ಮನ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್‌ನ ಮಹಾರಾಣಿ ಸೋನಿಯಾ ಗಾಂ ಧಿ ಅವರ ಮಗನ ಗೆಲುವಿನ ಆಸೆ ನುಚ್ಚು ನೂರಾಗುತ್ತದೆ. ರಾಯ್‌ಬರೇಲಿಯಲ್ಲಿ ಬಿಜೆಪಿ ಗೆಲ್ಲಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ
Thirthahalli: ಅದ್ಧೂರಿಯಾಗಿ ನಡೆದ ಎಳ್ಳಮಾವಾಸ್ಯೆ ರಥೋತ್ಸವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.