Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!
Team Udayavani, May 6, 2024, 7:10 AM IST
ಮಡಿಕೇರಿ: ಮದುವೆ ಹಿಂದಿನ ದಿನ ಸಿಹಿತಿಂಡಿ ನೀಡಿಲ್ಲ ಎಂಬ ಕಾರಣಕ್ಕೆ ಮದುವೆಯನ್ನೇ ರದ್ದುಗೊಳಿಸಿದ ಘಟನೆ ಪಟ್ಟಣದ ಕಲ್ಯಾಣಮಂಟಪವೊಂದರಲ್ಲಿ ನಡೆದಿದೆ.
ಸಮೀಪದ ಹಾನಗಲ್ಲು ಗ್ರಾಮದ ಸಿದ್ಧಾರ್ಥ ಬಡಾವಣೆಯ ಯುವತಿಯ ವಿವಾಹ ತುಮಕೂರು ಜಿಲ್ಲೆಯ ಯುವಕ ನೋರ್ವನೊಂದಿಗೆ ನಿಶ್ಚಯವಾಗಿದ್ದು, ಮೇ 5ರಂದು ಇಲ್ಲಿನ ಜಾನಕಿ ಕನ್ವೆನ್ಶನ್ ಹಾಲ್‌ನಲ್ಲಿ ವಿವಾಹ ನಿಗದಿಯಾಗಿತ್ತು.
ಶನಿವಾರ ಸಂಜೆ ತುಮಕೂರಿನಿಂದ ವರನ ಕಡೆಯವರು ಮಂಟಪಕ್ಕೆ ಆಗಮಿಸಿದ್ದು, ರಾತ್ರಿಯ ಊಟದಲ್ಲಿ ಸಿಹಿತಿಂಡಿ ಇಲ್ಲ ಎಂಬ ಕಾರಣಕ್ಕೆ ತಗಾದೆ ತೆಗೆದು ಗಲಾಟೆ ಆರಂಭವಾಯಿತು. ಮಂಟಪದಲ್ಲಿಯೇ ಮಾತಿನ ಚಕಮಕಿ, ತಳ್ಳಾಟ ನೂಕಾಟ ನಡೆಯಿತು.
ರವಿವಾರ ಬೆಳಗ್ಗೆ ಅಂತಿಮವಾಗಿ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿತು. ಶನಿವಾರ ರಾತ್ರಿ ಮದುವೆಯೇ ಬೇಡ ಎಂದು ಉಂಗುರ ಕಳಚಿಕೊಟ್ಟಿದ್ದ ವರ ರವಿವಾರ ಬೆಳಗ್ಗೆ ನಾನು ಮದುವೆಯಾಗುತ್ತೇನೆ ಎಂದು ಹೊಸ ವರಸೆ ಆರಂಭಿಸಿದ್ದ. ಆದರೆ ದಿಢೀರ್ ಘಟನಾವಳಿಯಿಂದ ಬೇಸತ್ತ ವಧು ಮದುವೆಯೇ ಬೇಡ ಎಂದು ಪೊಲೀಸರೆದುರು ಹೇಳಿಕೆ ನೀಡಿದಳು.
ಮದುವೆಗೆಂದು ಖರ್ಚು ಮಾಡಿರುವ ಹಣವನ್ನು ವರನ ಕಡೆಯವರು ನೀಡಬೇಕೆಂದು ವಧುವಿನ ಕಡೆಯವರು ಠಾಣೆ ಎದುರು ಆಗ್ರಹಿಸಿದರು. ಅಂತಿಮವಾಗಿ ಹಣಕಾಸಿನ ವಿಚಾರವನ್ನು ನೀವೇ ಬಗೆಹರಿಸಿಕೊಳ್ಳಿ ಎಂದು ಸಲಹೆ ನೀಡಿ ಪೊಲೀಸರು ಪ್ರಕರಣಕ್ಕೆ ಇತಿಶ್ರೀ ಹಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.