ನನಗೂ ಭೂ ವ್ಯವಹಾರಕ್ಕೂ ಸಂಬಂಧ ಇಲ್ಲ: ಬೆಂವಿವಿ ಪ್ರೊ.ಮೈಲಾರಪ್ಪ ಸ್ಪಷ್ಟನೆ
Team Udayavani, May 6, 2024, 12:07 PM IST
ಬೆಂಗಳೂರು: ಖಾಸಗಿ ಭೂ ವ್ಯವಹಾರಕ್ಕೂ ನನಗೂ ಸಂಬಂಧವಿಲ್ಲ ಕೆಲವರು ನನ್ನ ಮೇಲೆ ಷಡ್ಯಂತ್ರ ರೂಪಿಸಿ ನನ್ನ ತೇಜೋವಧೆ ನಡೆಸಲು ಮುಂದಾಗಿದ್ದು, ಇವರ ವಿರುದ್ಧ ಕಾನೂನಿನ ಹೋರಾಟ ನಡೆಸುತ್ತೇನೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಸಮಾಜಶಾಸ್ತ್ರದ ಪ್ರಾಧ್ಯಾಪಕ ಪ್ರೊ.ಬಿ.ಸಿ.ಮೈಲಾರಪ್ಪ ಸ್ಪಷ್ಟನೆ ನೀಡಿದ್ದಾರೆ.
2023ರಲ್ಲಿ ನಡೆದಿರುವ ಪ್ರಕರಣ ಇದಾಗಿದೆ. ಭೂ ಮಾರಾಟಗಾರರು ಮತ್ತು ಭೂ ಖರೀದಿದಾರರು ಹಣ ವ್ಯವಹಾರ ನಡೆಸಿದ್ದಾರೆ. ಇದರ ಮಧ್ಯೆ ಅನವಶ್ಯಕವಾಗಿ ನನ್ನ ಹೆಸರನ್ನು ತಳುಕು ಹಾಕಿದ್ದಾರೆ. ಭೂ ಮಾರಾಟದಾರರ ಪರವಾಗಿ ನಾನು ಖರೀದಿದಾರರ ಜತೆಗೆ ಮಾತನಾಡಿ ಬೆದರಿಕೆ ಹಾಕಿದ್ದೇನೆ ಎಂಬ ಆರೋಪ ಸುಳ್ಳು. ಇದಕ್ಕೆ ಯಾವುದೇ ರೀತಿಯ ಆಧಾರ ಇಲ್ಲ ಎಂದು ಹೇಳಿದ್ದಾರೆ.
ಹೈದ್ರಾಬಾದ್‌ನಲ್ಲಿ ನನ್ನ ಮುಚ್ಚಳಿಕೆ ಪತ್ರಕ್ಕೆ ಸಹಿಬೇಕು ಎಂಬ ಕಾರಣಕ್ಕೆ ಪೊಲೀಸರು ನನ್ನನ್ನು ಅವರ ಸ್ಟೇಷನ್‌ಗೆ ಕರೆದೊಯ್ಯದರು. 40 ವರ್ಷ ನನ್ನ ಶೈಕ್ಷಣಿಕ ಕರ್ತವ್ಯದ ಅವಧಿಯಲ್ಲಿ ನಾನೆಂದಿಗೂ ಈ ರೀತಿಯ ವ್ಯವಹಾರಗಳಲ್ಲಿ ಭಾಗಿಯಾಗಿಲ್ಲ. ನನ್ನ ಮೇಲೆ ಯಾವುದೇ ಕ್ರಿಮಿನಲ್ ಕೇಸ್ ಇಲ್ಲವೆಂದು ಪೊಲೀಸ್ ಇಲಾಖೆಯೇ ನನಗೆ ಪ್ರಮಾಣಪತ್ರ ನೀಡಿದೆ ಎಂದು ತಿಳಿಸಿದ್ದಾರೆ. ಇಂತಹ ವೇಳೆಯಲ್ಲಿ ನನ್ನನ್ನು ವೈಯಕ್ತಿವಾಗಿ ತೇಜೋವಧೆ ಮಾಡುವ ಮೂಲಕ ನಮ್ಮ ಮುಂದಿರುವ ಅವಕಾಶಗಳನ್ನು ತಪ್ಪಿಸುವ ಸಲುವಾಗಿ ಈ ರೀತಿಯ ಷಡ್ಯಂತ್ರ ಮಾಡುತ್ತಿದ್ದು, ಕೆಲವು ಕಿಡಿಗೇಡಿಗಳು ಇದನ್ನು ಮಾಧ್ಯಮಗಳಿಗೆ ಹರಿಬಿಡುತ್ತಿದ್ದಾರೆ. ಇದರಲ್ಲಿ ಆಧಾರವಿಲ್ಲ ಎಂದು ಸ್ಪಷ್ಟಿಕರಣದಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.