Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು
Team Udayavani, May 7, 2024, 1:18 AM IST
ಕೋಟ: ಡೈರಿ ಫಾರ್ಮ್ ನಲ್ಲಿ ಹುಲ್ಲು ಕಟಾವು ನಡೆಸುತ್ತಿದ್ದ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಶಿರೂರು ಮೂರ್ಕೈ ಸಮೀಪ ಹೆಗ್ಗುಂಜೆ ಗುಡ್ಡೆಯಲ್ಲಿ ಸೋಮವಾರ ಸಂಭವಿಸಿದೆ.
ಸ್ಥಳೀಯ ನಿವಾಸಿ ಕೃಷ್ಣ ನಾಯ್ಕ್ ದಾಳಿಗೊಳಗಾದವರು. ಶಿರೂರು ಮೂರ್ಕೈ ಸಮೀಪವಿರುವ ವಿಖ್ಯಾತ್ ಕುಮಾರ್ ಶೆಟ್ಟಿ ಅವರ ಡೈರಿ ಫಾರ್ಮ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕೃಷ್ಣ ನಾಯ್ಕ್ ದನಗಳಿಗೆ ಹುಲ್ಲು ತರಲು ತೋಟಕ್ಕೆ ತೆರಳಿದ್ದರು. ಆಗ ಚಿರತೆ ದಾಳಿ ನಡೆಸಿತ್ತು. ಗಂಭೀರವಾಗಿ ಗಾಯಗೊಂಡ ಅವರನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಭಾಗದಲ್ಲಿ ಚಿರತೆ ಹಾವಳಿ ವ್ಯಾಪಕವಾಗಿದೆ. ಹಲವು ಬಾರಿ ಜಾನುವಾರುಗಳ ಮೇಲೆ ದಾಳಿ ನಡೆದಿದ್ದು, ಇದೀಗ ಮನುಷ್ಯರ ಮೇಲೆಯೂ ದಾಳಿ ನಡೆಸಿರುವುದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.ಸಂಬಂಧಪಟ್ಟ ಇಲಾಖೆ ಈ ಕುರಿತು ಗಮನಹರಿಸಬೇಕು. ಗಾಯಾಳುವಿಗೂ ಸೂಕ್ತ ಪರಿಹಾರ ಒದಗಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.