Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ
Team Udayavani, May 7, 2024, 8:35 AM IST
ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ೧೪ ಕ್ಷೇತ್ರಗಳಿಗೆ ಇಂದು ಎರಡನೇ ಹಂತದ ಮತದಾನ ಆರಂಭಗೊಂಡಿದೆ, ಬೆಳಿಗ್ಗೆ ಏಳು ಗಂಟೆಗೆ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು ಮತದಾರರು ಬಿರುಸಿನಲ್ಲಿ ಮತದಾನ ಮಾಡುತ್ತಿದ್ದಾರೆ.
ಮತದಾರರನ್ನು ಮತಗಟ್ಟೆ ಕೇಂದ್ರಗಳತ್ತ ಆಕರ್ಷಿಸಲು ವಿಶಿಷ್ಟ ಯೋಜನೆಯನ್ನು ಹಮ್ಮಿಕೊಂಡಿರುವ ಆಯಾ ಜಿಲ್ಲಾಡಳಿತ ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸುವ ಮೂಲಕ ಸ್ಥಳೀಯ ಸಂಸ್ಕೃತಿ, ಆಚರಣೆ, ಇತಿಹಾಸಗಳನ್ನು ಬಿಂಬಿಸುವ ಪ್ರಯತ್ನವನ್ನೂ ಮಾಡಿಕೊಂಡಿವೆ.
ಬೆಳಿಗ್ಗೆ ಏಳು ಗಂಟೆಗೆ ಆರಂಭವಾದ ಮತದಾನ ಸಂಜೆ ಆರು ಗಂಟೆಯವರೆಗೆ ನಡೆಯಲಿದೆ, ಅಹಿತಕರ ಘಟನೆಗಳು ನಡೆಯದಂತೆ ಮತಗಟ್ಟೆಗಳಲ್ಲಿ ಪೊಲೀಸ್ ಭದ್ರತೆಯನ್ನು ಏರ್ಪಡಿಸಲಾಗಿದೆ.
ಇಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಒಟ್ಟು 2.59 ಕೋಟಿ ಮತದಾರರು ಮತದಾನ ಮಾಡಲಿದ್ದು ಒಟ್ಟು 227 ಅಭ್ಯರ್ಥಿಗಳ ಭವಿಷ್ಯವನ್ನು ಬರೆಯಲಿದ್ದಾರೆ.
ದಾವಣಗೆರೆ, ವಿಜಯಪುರ, ಗಂಗಾವತಿ, ಕುಂದಾಪುರ, ಸೇರಿದಂತೆ ಬೆಳಿಗ್ಗೆಯಿಂದಲೇ ಬಿರುಸಿನ ಮತದಾನ ನಡೆಯುತ್ತಿದೆ ಕೆಲವೆಡೆ ಮತಯಂತ್ರ ಕೈಕೊಟ್ಟ ಪರಿಣಾಮ ಮತದಾರರು ಪರದಾಡುವಂತಾಯಿತು.
ಕುಂದಾಪುರ: ಕುಂದಾಪುರದ ಕಿರಿಮಂಜೇಶ್ವರ, ದೇವಲ್ಕುಂದ, ಅಮಾಸೆಬೈಲು, ನೇರಳಕಟ್ಟೆ, ಕರ್ಕುಂಜೆ ಮತಗಟ್ಟೆಯಲ್ಲಿ ಬೆಳಿಗ್ಗೆಯಿಂದಲೇ ಬಿರುಸಿನ ಮತದಾನ ನಡೆಯಿತು,
ದಾವಣಗೆರೆ: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಹರಿಹರ ತಾಲ್ಲೂಕಿನ ಹನಗವಾಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮೊದಲ ಮತವನ್ನು ಚಲಾಯಿಸಿದರು.
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಮತದಾನ ವೀಕ್ಷಣೆಗೆ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಅಣಕು ಮತದಾನ ಪ್ರಕ್ರಿಯೆ ನಂತರ ಮತದಾನ ಎಲ್ಲಾ ಕಡೆ ಆರಂಭವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ತಿಳಿಸಿದ್ದಾರೆ.
ಗಂಗಾವತಿ: ತಾಲೂಕಿನ ಆನೆಗುಂದಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಆನೆಗೊಂದಿ ರಾಜವಂಶಸ್ಥರಾದ ಶ್ರೀಮತಿ ಲಲಿತಾರಾಣಿ ಶ್ರೀರಂಗದೇವರಾಯಲು ತಮ್ಮ ಆಪ್ತರ ಜತೆ ತೆರಳಿ ಮತ ಚಲಾಯಿಸಿದರು..
ಮತಯಂತ್ರದಲ್ಲಿ ದೋಷ, ಆರಂಭವಾಗದ ಮತದಾನ:
ವಿಜಯಪುರ : ಪರಿಶಿಷ್ಟ ಜಾತಿಗೆ ಮೀಸಲಿರುವ ವಿಜಯಪುರ ಲೋಕಸಭಾ ಚುನಾವಣೆಗೆ ಮತ ಯಂತ್ರದ ತಾಂತ್ರಿಕ ದೋಷದಿಂದ ನಗರದ ಮತಗಟ್ಟೆಯೊಂದರಲ್ಲಿ ಇನ್ನು ಆರಂಭವಾಗಿಲ್ಲ. ಇದೆ ರೀತಿ ಕೆಲವು ಕಡೆಗಳಲ್ಲಿ ಮತಯಂತ್ರದಲ್ಲಿ ಕಂಡುಬಂದ ದೋಷದಿಂದಾದಿ ಮತದಾರರು ಮತಗಟ್ಟೆಯಲ್ಲಿ ಕಾದುಕುಳಿತ ಪ್ರಸಂಗ ನಡೆಯಿತು.
ಇದನ್ನೂ ಓದಿ: Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.