Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ
Team Udayavani, May 7, 2024, 3:55 PM IST
ಮಾನ್ವಿ: ಮತದಾನ ಕೇಂದ್ರದಲ್ಲಿ ಪೊಲೀಸರು ಹಾಗೂ ಕೇಸರಿ ಶಾಲು ಹಾಕಿದ ಯುವಕರ ನಡುವೆ ಮಾತಿನ ಚಕಮಕಿ ನಡೆದ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನಲ್ಲಿ ನಡೆದಿದೆ.
ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬ್ರಾಹ್ಮಣ ವಾಡಿ ಬೂತ್ ಸಂಖ್ಯೆ 185ರಲ್ಲಿ ಈ ಘಟನೆ ನಡೆದಿದೆ.
ಕೆಲವು ಯುವಕರು ಕೇಸರಿ ಶಾಲು ಧರಿಸಿ ಮತದಾನ ಮಾಡಲು ಬಂದಿದ್ದಾರೆ. ಶಾಲು ಧರಿಸಿ ಹೋಗಲು ನಿರಾಕರಿಸಿದಾಗ ಮಾತಿನ ಚಕಮಕಿ ನಡೆದಿದೆ. ಬಳಿಕ ಆರ್ ಓ ಮತಗಟ್ಟೆ ಚುನಾವಣೆ ಅಧಿಕಾರಿ, ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಕೇಸರಿ ಶಾಲು ಧರಿಸಿ ಮತದಾನ ನಡೆಸಬಹುದು ಎಂದು ತಿಳಿಸಿದ್ದಾರೆ.
ಕೇಸರಿ ಶಾಲು ಮೇಲೆ ಯಾವುದೇ ತರಹದ ಚಿಹ್ನೆ ಕಂಡುಬಂದಲ್ಲಿ ಮತ ಚಲಾವಣೆ ಅವಕಾಶ ನೀಡುವುದಿಲ್ಲ ಎಂದು ಆರ್ ಓ ತಿಳಿಸಿದರು.
ಬುರ್ಖಾ, ಮುಖ ಮುಚ್ಚಿಕೊಂಡು ಬಂದ ಮಹಿಳೆಯರು ಚುನಾವಣೆ ಮಹಿಳಾ ಅಧಿಕಾರಿಗಳಿಗೆ ಮುಖ ತೋರಿಸಿ ಮತ ಚಲಾಯಿಸಬೇಕು ಎಂದು ಕೇಸರಿ ಶಾಲು ಧರಿಸಿದ ಯುವಕರು ಪಟ್ಟು ಹಿಡಿದ ಪ್ರಸಂಗ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಹೊಸ ಸೇರ್ಪಡೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.