ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ
Team Udayavani, May 8, 2024, 2:16 PM IST
ಉದಯವಾಣಿ ಸಮಾಚಾರ
ಗದಗ: ಲಕ್ಷ್ಮೇಶ್ವರ ಪಟ್ಟಣದ ಎಪಿಎಂಸಿಯ ಮತಗಟ್ಟೆ ಸಂಖ್ಯೆ 109ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರು ಕುಟುಂಬ ಸಮೇತ ಆಗಮಿಸಿ ಮತದಾನ ಮಾಡಿದರು. ಪತ್ನಿ ದೀಪಾ ಗಡ್ಡದೇವರಮಠ, ಪುತ್ರಿ ಚಿನ್ಮಯಿ ಗಡ್ಡದೇವರಮಠ ಸೇರಿ ಕುಟುಂಬ ಸಮೇತರಾಗಿ ಮತಗಟ್ಟೆಗೆ ಆಗಮಿಸಿ ಮತ ಹಾಕಿದರು.
ಇದನ್ನೂ ಓದಿ:SSLC Result: ನಾಳೆ ಎಸೆಸೆಲ್ಸಿ ಫಲಿತಾಂಶ ಪ್ರಕಟ
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರದ ಜನರು, ಮತದಾರರು ಹಾಗೂ ಕಾರ್ಯಕರ್ತರೆಲ್ಲರೂ ನನ್ನ ಅಣ್ಣ, ತಮ್ಮ, ಮಗ, ಸ್ನೇಹಿತ ಎಂದು ವಿಶ್ವಾಸ ತೋರಿ ಆಶೀರ್ವಾದ ಮಾಡಿದ್ದಾರೆ. ಅವರ ಪ್ರೀತಿ, ವಿಶ್ವಾಸಕ್ಕೆ ಧನ್ಯವಾದ ಹೇಳುತ್ತೇನೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ, ಸಚಿವ ಎಚ್.ಕೆ. ಪಾಟೀಲ, ಶಿವಾನಂದ ಪಾಟೀಲ, ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರೆಲ್ಲರೂ ಒಗ್ಗಟ್ಟಾಗಿ ಆಶೀರ್ವಾದ ಮಾಡಿದ್ದು, ಅತ್ಯಧಿಕ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸ ಮೂಡಿದೆ ಎಂದು ಹೇಳಿದರು.
ಇದು ಬದಲಾವಣೆಯ ಪರ್ವ. ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಅನುಷ್ಠಾನಗೊಳಿಸಿರುವ ಪಂಚ ಗ್ಯಾರಂಟಿಗಳು
ಬಡ ಕುಟುಂಬಗಳ ಪ್ರತಿ ಮನೆ-ಮನೆಗಳಿಗೆ ಆರ್ಥಿಕ ಬಲ, ಶಕ್ತಿ ತುಂಬಿದೆ. ಮತದಾನ ಆರಂಭವಾದ ನಂತರ ಗದಗ ಮತಕ್ಷೇತ್ರ ಹಾಗೂ ನನ್ನ ಸ್ವಕ್ಷೇತ್ರ ಲಕ್ಷ್ಮೇಶ್ವರದಲ್ಲಿ ಸಂಚರಿಸಿದ್ದೇನೆ. ಎಲ್ಲೆಡೆ ಅಭೂತಪೂರ್ವ ಬೆಂಬಲ ದೊರೆತಿದೆ. ಪ್ರಚಾರ ಸಂದರ್ಭದಲ್ಲಿ ತಾಯಂದಿರು, ಹಿರಿಯರು, ಸಹೋದರರು ಪ್ರೀತಿ, ವಿಶ್ವಾಸ ತೋರಿದ್ದಾರೆ. ಅವರಿಗೆ ಚಿರಋಣಿಯಾಗಿದ್ದೇನೆ. ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
ಗದಗ: ನೀರು ಸೋರಿಕೆ- ನದಿಯಲ್ಲಿ ನೀರಿದ್ದರೂ ತಪ್ಪದ ಹಾಹಾಕಾರ!
ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್ ಮುದ್ರಣ ಭರಾಟೆ; ಕ್ಯಾಲೆಂಡರ್-ತೂಗು ಪಂಚಾಂಗಗಳಿಗೆ ಖ್ಯಾತಿ
Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು
Diesel theft; ಗದಗ: ಕೆ.ಎಸ್.ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.