ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ


Team Udayavani, May 8, 2024, 5:05 PM IST

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

■ ಉದಯವಾಣಿ ಸಮಾಚಾರ
ಬಳ್ಳಾರಿ: ಪ್ರಜ್ವಲ್‌ ರೇವಣ್ಣ ಪ್ರಕರಣ ಕಾನೂನು ಹಂತದಲ್ಲಿ ತನಿಖೆ ನಡೆಯುತ್ತಿದ್ದರೂ ಬಿಜೆಪಿಯವರು ಅನಾವಶ್ಯಕವಾಗಿ ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ತಿರುಗೇಟು ನೀಡಿದರು.

ಲೋಕಸಭೆ ಚುನಾವಣೆ ನಿಮಿತ್ತ ನಗರದ ನೆಹರೂ ಕಾಲೋನಿಯ ವುಂಕಿ ಮರಿಸಿದ್ದಮ್ಮ ಶಾಲೆ ಮತಗಟ್ಟೆಯಲ್ಲಿ ಸರತಿ ಸಾಲಲ್ಲಿ ನಿಂತು ಕುಟುಂಬ ಸಮೇತ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಪ್ರಜ್ವಲ್‌ ರೇವಣ್ಣ ಪ್ರಕರಣ ಬಿಜೆಪಿ ಜೆಡಿಎಸ್‌ ಮೈತ್ರಿ ಮೇಲೆ ಪರಿಣಾಮ ಬೀರಿದೆ. ಅದಕ್ಕಾಗಿ ಬಿಜೆಪಿಯವರು ಕಾಂಗ್ರೆಸ್‌ ಮೇಲೆ ವಿನಾಕಾರಣ ಆರೋಪ
ಮಾಡುತ್ತಿದೆ. ಮುಖ್ಯವಾಗಿ ಕರ್ನಾಟಕದ ಚುನಾವಣೆ ಮೇಲೆ ಪ್ರಜ್ವಲ್‌ ಪ್ರಕರಣ ಪ್ರಭಾವ ಬೀರಿದೆ.

ಬಿಜೆಪಿಯವರು ಸೋಲಿನ ಹತಾಶೆಯಿಂದ ಮಾತನಾಡುತ್ತಿದ್ದಾರೆ. ಮಾಡಿದ ಕೃತ್ಯವನ್ನು ಬಿಜೆಪಿಯವರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಪ್ರಜ್ವಲ್‌ ಪ್ರಕರಣದ ಹಿಂದೆ ಯಾವ ಷಡ್ಯಂತರವೂ ಇಲ್ಲ. ಪಾಪ ಮಾಡಿದವರು ಅನುಭವಿಸುತ್ತಾರೆ ಎಂದು ತಿಳಿಸಿದರು.

ಇದೇ ವೇಳೆ ಮಹಾನಾಯಕ ಅಂದರೆ ಯಾರು? ಎಂದು ಪ್ರಶ್ನಿಸಿದ ಸಚಿವ ಬಿ.ನಾಗೇಂದ್ರ, ನಾವು ಸಹ ಕಾತುರದಿಂದ ಕಾಯುತ್ತಿದ್ದೇವೆ. ಬಿಜೆಪಿಯಮಹಾನಾಯಕ ಅಥವಾ ಜೆಡಿಎಸ್‌ ಪಕ್ಷದ  ಮಹಾನಾಯಕನಾ? ಈ ಪ್ರಕರಣದಲ್ಲಿ ಯಾರು
ಭಾಗಿಯಾಗಿಲ್ಲ ಎಂದು ಪ್ರಜ್ವಲ್‌ ಕಾರು ಚಾಲಕ ಹೇಳಿಕೆ ನೀಡಿದ್ದಾರೆ. ಇದು ನನ್ನ ವೈಯಕ್ತಿಕ ಅಂತ ಚಾಲಕ ಈಗಾಗಲೇ ಸಷ್ಟಪಡಿಸಿದ್ದಾರೆ. ಆದರೂ, ಕಾಂಗ್ರೆಸ್‌ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ.

ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರು ಸಹ ಹೇಳಿಕೆ ಕೊಡುವುದು ಸರಿಯಲ್ಲ. ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮೇಲೆ ಆರೋಪ ಮಾಡುವುದು ಸರಿಯಲ್ಲ. ಡಿ.ಕೆ. ಶಿವಕುಮಾರ್‌ ಯಾವುದೇ ತಪ್ಪು ಮಾಡಿಲ್ಲ. ಅವರ ಪಾತ್ರವೂ ಇಲ್ಲ. ಪ್ರಕರಣವನ್ನು ಮಾಧ್ಯಮದವರೇ ಬೆಳಕಿಗೆ ತಂದಿದ್ದಾರೆ. ಪ್ರಕರಣದಿಂದ ಬಿಜೆಪಿಗೆ ಚುನಾವಣೆಗೆ ಹಿನ್ನಡೆಯಾಗುವುದು ಖಚಿತ ಎಂದು ಭವಿಷ್ಯ ನುಡಿದ ಸಚಿವ ನಾಗೇಂದ್ರ, ಚುನಾವಣೆಯಲ್ಲಿ ಧರ್ಮಕ್ಕೆ ಜಯಸಿಗಲಿದೆ. ಕಾಂಗ್ರೆಸ್‌ ಧರ್ಮದ ಪರವಾಗಿದೆ ಎಂದು ತಿಳಿಸಿದರು.

ಬಿರುಬಿಸಿಲು ಲೆಕ್ಕಿಸದೆ ಜನರು ಮತದಾನ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆ. ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ನಾಗೇಂದ್ರ, ಮೊದಲ ಹಂತಕ್ಕಿಂದ ಎರಡನೇ ಹಂತದ ಚುನಾವಣೆ ಉತ್ತಮವಾಗಿದೆ. ಗ್ಯಾರೆಂಟಿಗಳಿಂದ ಮಹಿಳೆಯರು ಹೆಚ್ಚು ಮತದಾನ ಮಾಡುತ್ತಿದ್ದಾರೆ. ಬಳ್ಳಾರಿ ಕ್ಷೇತ್ರದಲ್ಲಿ ಶೇ.70ಕ್ಕಿಂತ ಹೆಚ್ಚು ಮತದಾನ ಆಗುವ ವಿಶ್ವಾಸವಿದೆ ಎಂದರು.

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.